Sat,Apr27,2024
ಕನ್ನಡ / English

ಸಾಫ್ಟ್ ವೇ‌ರ್ ಉನ್ನತೀಕರಣದ ಸಲುವಾಗಿ 10 ದಿನಗಳ ಕಾಲ ಆನ್‌ಲೈನ್ ಸೇವೆಗಳ ಅಲಭ್ಯತೆ | JANATA NEWS

05 Mar 2024
708

ಬೆಂಗಳೂರು : ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು (RAPDRP) ನಗರ ಪುದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ.

ಬಿಲ್
ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ, ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ ಗಳನ್ನು ನೀಡಲಿದ್ದಾರೆ, ಆದರೆ ಈ ಬಿಲ್ ಗಳನ್ನು ಮಾರ್ಚ್ 20 ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ.

ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್‌ ಸೇವೆ ಇರುವುದಿಲ್ಲ: ಪಟ್ಟಿ
ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.
ಸೆಸ್ಕ್‌: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.
ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.
ಜೆಸ್ಕಾಂ: ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿಹೊಂದಿದ ಮಾಹಿತಿ ತಂತ್ರಜ್ಞರ(IT) ತಂಡ 24/7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳಲಾಗುತ್ತಿದೆ.

English summary :Downtime of online services for 10 days for software upgrade

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...