ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ | JANATA NEWS
ಬೆಂಗಳೂರು : ಕಾಂಗ್ರೆಸ್ ನ ಹಿರಿಯ ಮುಖಂಡ ಬಿಕೆ.ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇದಕ್ಕೂ ಮೊದಲು ಈ ಹುದ್ದೆಯನ್ನು ಉಪಮುಖ್ಯಮಂತ್ರಿಯಾಗಿದ್ದ ಡಿಕೆ.ಶಿವಕುಮಾರ್ ಅವರೇ ನಿರ್ವಹಿಸುತ್ತಿದ್ದು, ಈಗ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಇದಕ್ಕೂ ಮೊದಲು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾಳಯದಲ್ಲಿ ಗುರುತಿಸಿಕೊಂಡ ಸತೀಶ್ ಜಾರಕಿಹೊಳಿ ಅವರ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಾಗಿ ಕೇಳಿಬಂದಿತ್ತಾದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಕೆ. ಹರಿಪ್ರಸಾದ್ ಅವರ ಹೆಸರು ಅಂತಿಮಗೊಂಡಿದೆ.
ವಿಧಾನ ಪರಿಷತ್ ಸದಸ್ಯರಾಗಿರುವ ಬಿ.ಕೆ ಹರಿಪ್ರಸಾದ್ ಅವರು ಈ ಮೊದಲು ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚು ಕಾಣಿಸಿಕೊಂಡಿದ್ದು, ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿದ್ದವರು.
ನಾನು ಕಾಂಗ್ರೆಸ್ ಪಕ್ಷದ ವ್ಯಕ್ತಿ, ಸರ್ಕಾರದ ವ್ಯಕ್ತಿಯಲ್ಲ. ನನಗೆ ಇದು ಮೊದಲಲ್ಲ, 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಎಲ್ಲಾ ಹಂತಗಳಲ್ಲಿ ಕೆಲಸ ಮಾಡುತ್ತಾ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದೇನೆ. ಕಾಂಗ್ರೆಸ್ ವರಿಷ್ಠರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಇರಿಸಿಕೊಂಡು ಇನ್ನಷ್ಟು ಕೆಲಸಗಳನ್ನು ಮಾಡುತ್ತೇನೆ ಎಂದು ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
214