Sun,May19,2024
ಕನ್ನಡ / English

ಪಠ್ಯ ಕ್ರಮದಲ್ಲಿ ವೇದ ಉಪನಿಷತ್ ಅಳವಡಿಕೆ ಅಗತ್ಯ: ಬ್ರಹ್ಮಾನಂದ ಸ್ವಾಮೀಜಿ | Janata news

04 Jul 2018
721

ಕಾರವಾರ : ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ನೀಡುವ ಶಿಕ್ಷಣ ಕ್ರಮದಲ್ಲಿಯೇ ವೇದ, ಉಪನಿಷತ್, ಶಾಸ್ತ್ರ ಹಾಗೂ ಪ್ರಸ್ತಾನ ತ್ರಯಗಳನ್ನು ಅಳವಡಿಸಿ ಸನಾತನ ಭಾರತದ ಪರಂಪರೆಯನ್ನು ಉಳಿಸುವ ಮೂಲಕ ನಮ್ಮ ಯುವಜನಾಂಗವನ್ನು ಶಕ್ತಿಯುತ, ಸಂಸ್ಕಾರಯುತ ಪ್ರಜೆಗಳನ್ನಾಗಿ ರೂಪಿಸಿ ಈ ದೇಶವನ್ನು ವಿಶ್ವಗುರುವಾಗಿ ಮಾರ್ಪಾಡಿಸಬಹುದು ಎಂದು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ ಹೇಳಿದರು.

ಇಲ್ಲಿನ ಶೃಂಗೇರಿ ಶಂಕರ ಮಠದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ ಪ್ರಸ್ತುತ ಶಾಲಾ ಕಾಲೇಜುಗಳ ಪಠ್ಯಗಳಲ್ಲಿರುವ ಮೊಗಲರ ಚರಿತ್ರೆ, ಬ್ರಿಟಿಷರ ಚರಿತ್ರೆ, ಚೈನಾ, ರಷ್ಯಾ, ಫ್ರಾನ್ಸ್ ಇವುಗಳ ಕ್ರಾಂತಿಗಳ ಅಧ್ಯಯನದಿಂದ ನಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯವಿಲ್ಲ. ಬದಲಾಗಿ ಪಠ್ಯಕ್ರಮಗಳಲ್ಲಿ ಭವ್ಯ ಭಾರತದ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತವನ್ನು ಅಳವಡಿಸಬೇಕು. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಒಟ್ಟಾಗಿ ಕುಳಿತು ಚರ್ಚಿಸಿ ದೇಶದ ಸಾಧು, ಸಂತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ನಿಟ್ಟಿನಲ್ಲಿ ಚಿಂತಿಸಬೇಕಿದೆ. ಇಲ್ಲದಿದ್ದಲ್ಲಿ ಮುಂದಿನ ಪೀಳಿಗೆ ಧರ್ಮ, ಸಂಸ್ಕಾರದಿಂದ ವಂಚಿತರಾಗಿ ಆಧುನೀಕರಣದ ಮೋಹಕ್ಕೆ ಬಲಿಯಾಗುವ ಸಾಧ್ಯತೆಗಳಿದೆ. ಇದಕ್ಕೆ ಈ ನೆಲದ ನಾಗರೀಕರು ನಿಷ್ಪಕ್ಷಪಾತದಿಂದ ಚಿಂತನೆ ನಡೆಸಬೇಕಿದೆ.

ದೇಶದ ಶ್ರೇಷ್ಠ ಸನಾತನ ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ಸಮಗ್ರ ಯುವ ಪೀಳಿಗೆಯನ್ನು ಸಂಸ್ಕಾರವಂತರಾಗಿ ಮಾಡುವ ಉದ್ದೇಶದಿಂದ ಸರ್ಕಾರವು ಮುಂದಿನ ಹತ್ತು ವರ್ಷಗಳೊಳಗೆ ಪ್ರತಿ ಹಳ್ಳಿಗಳಲ್ಲಿ ಗುರುಕುಲ ಮಾದರಿಯ ಅಂಗನವಾಡಿ ವಿದ್ಯಾ ಸಂಸ್ಥೆಯನ್ನು ಪ್ರಾರಂಭಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ಪಟ್ಟಾಭಿಷೇಕ ಮತ್ತು ಧರ್ಮ ಸಂಸದ್:
ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಮತ್ತು ಧರ್ಮ ಸಂಸದ್ ಸೆ.3 ರಂದು ಧರ್ಮಸ್ಥಳದ ನಿತ್ಯಾನಂದನಗರದ ಶ್ರೀರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಲಿದೆ. ಅಂದು ಲೋಕಕಲ್ಯಾಣಾರ್ಥವಾಗಿ ದೇಶದ ಮೂಲೆಮೂಲೆಗಳಿಂದ ಸುಮಾರು ಎರಡು ಸಾವಿರಕ್ಕಿಂತ ಹೆಚ್ಚು ಸಾಧುಸಂತರನ್ನು ಕರೆಯಿಸಿ ಶ್ರೀರಾಮ ತಾರಕ ಮಂತ್ರ ಯಜ್ಞವನ್ನು ಹಾಗೂ ವಿಶ್ವಕ್ಕೆ ಕಲ್ಯಾಣವಾಗುವ ಹಿಂದು ಧರ್ಮ ಜಾಗೃತಿಗಾಗಿ ಧರ್ಮ ಸಂಸದ್‍ನ್ನು ಏರ್ಪಡಿಸಲಾಗುವುದು ಎಂದು ಸ್ವಾಮೀಜಿ ಹೇಳಿದರು.

ಸೆ.2ರಂದು ಹಿಮಾಲಯದಿಂದ ಹಾಗೂ ಭಾರತದ ಬೇರೆ ಬೇರೆ ಭಾಗಗಳಿಂದ ಶ್ರೀರಾಮಕ್ಷೇತ್ರಕ್ಕೆ ಸಾಧು ಸಂತರು ಆಗಮಿಸಲಿದ್ದಾರೆ. ಸೆ.3ರ ಬೆಳಗ್ಗೆ 7 ಗಂಟೆಯಿಂದ ಶ್ರೀರಾಮ ತಾರಕ ಮಂತ್ರ ಯಜ್ಞ , 9 ಗಂಟೆಗೆ ಸಾಧುಸಂತರ ಶೋಭಾ ಯಾತ್ರೆ, 11 ಗಂಟೆಗೆ ಸ್ವಾಮೀಜಿಯವರ ಹತ್ತನೇ ವರ್ಷದ ಪೀಠಾರೋಹಣ ನಡೆಯಲಿದೆ ಎಂದು ಸ್ವಾಮೀಜಿ ತಿಳಿಸಿದರು.

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Adopting Veda Upanishat in studies in important: Brahmananda Swamiji

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...