Sun,Apr28,2024
ಕನ್ನಡ / English

ನಕ್ಸಲೀಯರ ಬಾಂಬ್ ದಾಳಿಗೆ ಕರ್ನಾಟಕದ ಇಬ್ಬರು ಬಿಎಸ್ಎಫ್ ಯೋದರು ಹುತಾತ್ಮ | Janata news

10 Jul 2018
827

ಕಾರವಾರ : ನಿನ್ನೆ ಛತ್ತೀಸಗಢ ಕಂಕರ್ ನಲ್ಲಿ ನಕ್ಸಲೀಯರು ನಡೆಸಿದ ಅಮಾನುಷ ಕೃತ್ಯದಲ್ಲಿ ಕರ್ನಾಟಕದ ಇಬ್ಬರು ಬಿಎಸ್ಎಫ್ ಯೋದರು ಹುತಾತ್ಮರಾಗಿದ್ದಾರೆ. ಇಲ್ಲಿಯ ಕಂಕರದಲ್ಲಿ ನಕ್ಸಲರು ಬಿಎಸ್ಎಫ್ ಯೋದರ ಮೇಲೆ ನಡೆಸಿದ ಐ.ಇ.ಡಿ. ಬಾಂಬ್ ಸ್ಫೋಟ ದಾಳಿಯಲ್ಲಿ ಈ ಇಬ್ಬರು ಯೋಧರು ಗಾಯಗೊಂಡಿದ್ದರು. ಇಬ್ಬರೂ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಲಾಯಿತಾದರೂ, ಅಷ್ಟರೊಳಗೆ ಇಬ್ಬರೂ ಸಾವಿಗಿಡಾಗಿದ್ದಾರೆ.

ಟಾಡ್ಬಾಲಿ ಗ್ರಾಮದ ಅರಣ್ಯದಲ್ಲಿ ನಿನ್ನೆ ಸಂಜೆ 5 ಗಂಟೆಗೆ ಬಿಎಸ್‌ಎಫ್‌ನ 121 ಬೆಟಾಲಿಯನ್‌ನ ಯೋಧರ ತಂಡ ಮಣ್ಣಿನ ಕಚ್ಚಾ ರಸ್ತೆಯಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ನೆಲದಲ್ಲಿ ಹುದುಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಐ.ಇ.ಡಿ. ಬಳಸಿ ನಕ್ಸಲರು ಬೈಕ್ ಸ್ಫೋಟಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಯೋಧರನ್ನು ಅರಣ್ಯದಿಂದ ಹೊರಗೆ ಕರೆದೊಯ್ಯುವಷ್ಟರಲ್ಲಿ ಸಾವಿಗೀಡಾಗಿದ್ದಾರೆ, ಎನ್ನಲಾಗಿದೆ.

ಹುತಾತ್ಮ ಯೋದರಲ್ಲಿ ಇಬ್ಬರೂ ಕರ್ನಾಟಕದವರಾಗಿದ್ದು, ಒಬ್ಬರು ಸಂತೋಷ್ ಲಕ್ಷ್ಮಣ್ ನಾಯ್ಕ ಮತ್ತು ವಿಜಯಾನಂದ ಸುರೇಶ ನಾಯ್ಕ ಎಂದು ತಿಳಿದುಬಂದಿದೆ. ಹುತಾತ್ಮ ಯೋದ ವಿಜಯಾನಂದ ಸುರೇಶ ನಾಯ್ಕ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೊಡಿಬಾಗದ ಕೋಮಾರಪಂತವಾಡಾಡ ನಿವಾಸಿ ಎಂದು ಹೇಳಲಾಗಿದೆ. ವಿಜಯಾನಂದ ಸುರೇಶ ನಾಯ್ಕ ಸೇನೆಗೆ ಸೇರಿ 2 ವರ್ಷವಾಗಿತ್ತು. ಮನೆಯವರಿಗೆ ಈ ವಿಷಯವನ್ನು ಇಂದು ತಿಲಿಸಿಲಾಗಿದ್ದು, ಸಂಜೆ ವೇಳೆಗೆ ದೇಹವು ಕಾರವಾರ ತಲುಪಲಿದೆ ಎನ್ನಲಾಗಿದೆ.

ಸ್ಪೋಟ ನಡೆದ ಸ್ಥಳಕ್ಕೆ ತಕ್ಷಣವೇ ಹೆಚ್ಚಿನ ಭದ್ರತಾ ಪಡೆಗಳು ಧಾವಿಸಿದ್ದು, ದಾಳಿಯಲ್ಲಿ ಭಾಗಿಯಾದ ನಕ್ಸಲರ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ, ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Karnataka two BSF cops martyred in maoists bomb attack

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...