Tue,May07,2024
ಕನ್ನಡ / English

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ | Janata news

10 Jul 2018
586

ಕಾರವಾರ : ನೇರ ನಗದು ವರ್ಗಾವಣೆ, ಅಂಚೆ ಮೂಲಕ ಪ್ಯಾಕೇಜ್ ಆಹಾರ ಪಡೆಯುವ ಪದ್ಧತಿ ಹಾಗೂ ಅನುದಾನ ಕಡಿತ, ಅಂಗನವಾಡಿ ನಿರ್ಲಕ್ಷಿಸಿ ನರ್ಸರಿ ಶಾಲೆಗೆ ಅನುಮೋದನೆ ವಿರೋಧಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಪ್ರತಿಭಟನೆ ನಡೆಸಿತು. ಇಲ್ಲಿನ ರಂಗಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಸಂಘಟನೆಯ ಸದಸ್ಯರು ಮನವಿ ಸಲ್ಲಿಸಿದರು.

ಸಂಘದ ಬೇಡಿಕೆಗಳು:
ಸಮುದಾಯದ ಜೀವನಾಡಿಗಳಾದ ಅಂಗನವಾಡಿ ಕೇಂದ್ರಗಳು ದಿನದಿಂದ ದಿನಕ್ಕೆ ಅಪಾಯದಲ್ಲಿದ್ದು ಮಕ್ಕಳ ಮತ್ತು ತಾಯಂದಿರ ಪ್ರಗತಿಗಾಗಿ ಅವುಗಳನ್ನು ರಕ್ಷಿಸಬೇಕಿದೆ. ಅಲ್ಲದೇ ಈ ಕೇಂದ್ರ ಸರ್ಕಾರ ಪ್ರಾಯೋಜಿತ ಐಸಿಡಿಎಸ್ ಯೋಜನೆಯಡಿಯಲ್ಲಿ ಅಂಗನವಾಡಿ ನೌಕರರು ಅತ್ಯಂತ ಕಡಿಮೆ ಸೌಲಭ್ಯಗಳಿಗೆ ದಿನಕ್ಕೆ ಏಳು ತಾಸುಗಳಿಗೂ ಹೆಚ್ಚು ಅವಧಿ ಕೆಲಸ ಮಾಡುತ್ತಿದ್ದಾರೆ. ಅದರ ಜೊತೆಗೆ, ಇಲಾಖೆಯ ಆದರೆ ಐಸಿಡಿಎಸ್ ಯೋಜನೆಯದಲ್ಲದ ಎಲ್ಲಾ ತರಹದ ಇನ್ನಿತರೇ ಕೆಲಸಗಳು, ಚುನಾವಣೆ, ಸರ್ವೆಗಳು, ಭಾಗ್ಯಲಕ್ಷ್ಮೀ, ಸ್ತ್ರೀಶಕ್ತಿ, ಅಂಗವಿಕಲರಿಗೆ ಸಂಬಂಧಿಸಿದ ಕೆಲಸಗಳು, ಕೆಲವಡೆ ಶೌಚಾಲಯಗಳನ್ನು ಕಟ್ಟಿಸಲು ಕೂಡಾ ಅಂಗನವಾಡಿ ನೌಕರರು ಬಳಸಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲಾ ಕೆಲಸಗಳ ಒತ್ತಡಗಳ ಜೊತೆಗೆ ರಾಜ್ಯ ಸರ್ಕಾರ ಹೊಸದಾಗಿ ಪ್ರಕಟಿಸಿದ ಮಾತೃಪೂರ್ಣ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಿಕ್ಕೂ ಸಹ ಅವರು ಕೆಲಸ ಮಾಡುತ್ತಿದ್ದಾರೆ. ಸೇವಾನಿಯಮಾವಳಿಯೇ ಇನ್ನೂ ರಚನೆಯಾಗದಿರುವುದರಿಂದ, ಇಷ್ಟು ನಿರಂತರವಾದ ಕೆಲಸಗಳನ್ನು ಮಾಡುವಾಗ ಸಣ್ಣ ಪುಟ್ಟ ತಪ್ಪುಗಳಾದರೆ, ಕೂಡಲೇ ಅವರನ್ನು ಅವಮಾನಿಸುವ, ಕೆಲಸದಿಂದ ತೆಗೆಯುವ ಪ್ರಕ್ರಿಯೆಗಳೂ ಕೂಡಾ ನಡೆಯುತ್ತಿದೆ. ಕೇಂದ್ರ ಸರ್ಕಾರ ಕಳೆದ 4 ವರ್ಷಗಳಲ್ಲಿ ಗೌರವಧನವನ್ನೂ ಸಹ ಹೆಚ್ಚಿಸದೇ, ಈಗಿರುವ ಅನುದಾನವನ್ನೂ 25% ಗೆ ಕಡಿತ ಮಾಡುತ್ತಿದೆ. ಮಾತ್ರವಲ್ಲ, ಹೆಚ್ಚುವರಿಯಾಗಿ ಕೆಲವು ಕೆಲಸಗಳ ಜೊತೆಗೆ ಈಗ ಮಾತೃವಂದನಾದಂಥ ಕೆಲಸಗಳನ್ನು ಪುಕ್ಕಟೆಯಾಗಿ ಮಾಡಿಸಿಕೊಳ್ಳುತ್ತಿರುವುದು ಖಂಡನೀಯ.

ನರ್ಸರಿ ಶಾಲೆಗಳಿಗೆ ಅನುಮತಿ ನೀಡುವುದರಿಂದ ಅಂಗನವಾಡಿಗಳಿಗೆ ಆಪತ್ತು:
ಈಗಾಗಲೇ ಖಾಸಗಿ ಎಲ್.ಕೆಜಿ ಮತ್ತು ಯುಕೆಜಿ ಮತ್ತು ಕಾನ್ವೆಂಟ್‍ಗಳಿಗೆ ಪಂಚಾಯ್ತಿ, ಹೋಬಳಿ ಮತ್ತು ನಗರಗಳಲ್ಲಿ ಅನುಮತಿ ನೀಡಿರುವುದರಿಂದ ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳ ಸಂಖ್ಯೆ ದಿನೇದಿನೇ ಕಡಿಮೆಯಾಗುತ್ತಿದೆ. ಇಂತಹ ಸಂಧರ್ಭದಲ್ಲಿ ತುಮಕೂರು ಜಿಲ್ಲೆಯ ಪಾವಗಡ, ತಿಪಟೂರು, ಮಧುಗಿರಿ, ಚಿಕ್ಕನಾಯಕನ ಹಳ್ಳಿ, ಗುಬ್ಬಿ, ಗದಗ ಜಿಲ್ಲೆಯ ರೋಣ, ಮುಂಡರಗಿ, ಉಡುಪಿ ಜಿಲ್ಲೆಯ ಕುಂದಾಪುರ, ಮಾಲೂರು ಮುಂತಾದ ತಾಲೂಕುಗಳಲ್ಲಿ ಈಗಾಗಲೇ 35 ಕಡೆಗಳಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಗಳಲ್ಲಿ ಅನಧಿಕೃತವಾಗಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಪ್ರಾರಂಭವಾಗಿರುವದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಬಂದಿರುವುದರಿಂದ ಕೂಡಲೇ ಎಲ್.ಕೆ.ಜಿ ಮತ್ತು ಯು.ಕೆ.ಜಿಯನ್ನು ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸುತ್ತಿರುವ ಪ್ರಕ್ರಿಯೆ ನಿಲ್ಲಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್.ಕೆ.ಜಿ ಮತ್ತು ಯು.ಕೆ.ಜಿ ಪ್ರಾರಂಭಿಸಬೇಕು.
ಇತ್ತೀಚೆಗೆ ರಾಜ್ಯದ ಹಲವೆಡೆ 5 ತಿಂಗಳಾದರೂ ಗೌರವಧನ ಪಾವತಿಯಾಗಿಲ್ಲ. ಆದ್ದರಿಂದ ವಿನಾ ಕಾರಣ ವಿಳಂಬಧೋರಣೆ ಮಾಡದೇ ಕೂಡಲೇ ಪ್ರತಿ ತಿಂಗಳು ಗೌರವಧನ ಪಾವತಿಯಾಗಬೇಕು.

ಮಿನಿ ಅಂಗನವಾಡಿ ಕೇಂದ್ರಗಳು:
ಐ.ಸಿ.ಡಿ.ಎಸ್ ಯೋಜನೆಯ ಸಾರ್ವತ್ರಿಕರಣದ ಭಾಗವಾಗಿ 3331 ಮಿನಿ ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲಾಯಿತು. ಆದರೆ ಹಲವಾರು ಮಿನಿ ಅಂಗನವಾಡಿ ಕೇಂದ್ರಗಳಲ್ಲಿ ಹೆಚ್ಚು ಜನಸಂಖ್ಯೆಯಿದ್ದರೂ ಅಂತಹ ಕೇಂದ್ರಗಳನ್ನು ಪೂರ್ಣ ಕೇಂದ್ರಗಳೆಂದೂ ಪರಿಗಣಿಸುತ್ತಿಲ್ಲ. ಇಬ್ಬರ ಕೆಲಸ ಒಬ್ಬರೇ ಮಾಡುತ್ತಿರುವುದರಿಂದ ಅತೀವ ಒತ್ತಡಕ್ಕೂಳಗಾಗಿರುವುದಷ್ಟೆ ಅಲ್ಲದೆ ಸಂಪೂರ್ಣ ಆ ಮಕ್ಕಳಿಗೆ ನ್ಯಾಯ ಒದಗಿಸಲು ಪ್ರಾಯೋಗಿಕವಾಗಿ ಸಾಧ್ಯವಿಲ್ಲ. ಈಗಂತೂ ಮಾತೃಪೂರ್ಣ, ಮಾತೃವಂದನ ಹಾಗೂ ಹೆಚ್ಚುವರಿ ಕೆಲಸಗಳು ಬಂದಿರುವುದರಿಂದ ಮಿನಿ ಅಂಗನವಾಡಿ ನೌಕರರು ಅತೀವ ಶೋಷಣೆಗೊಳಗಾಗಿದ್ದಾರೆ. ಆದ್ದರಿಂದ ಹೊಸ ಅಂಗನವಾಡಿ ಕೇಂದ್ರಗಳು ಬಂದಾಗ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಆದ್ಯತೆ ಕೊಡಬೇಕು ಮತ್ತು ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಅಂಗನವಾಡಿ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು. ಮಿನಿ ಅಂಗನವಾಡಿ ಎಲ್ಲಾ ಕೇಂದ್ರಗಳಿಗೂ ಸಹಾಯಕಿಯರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುವಷ್ಟು ಸಂಭಾವನೆಯನ್ನು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡಬೇಕು. ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆರಿಗೆ ರಜೆ, ಖಾಯಿಲೆಗಳು ಬಂದಾಗ ಪರ್ಯಾಯ ವ್ಯವಸ್ಥೆ ಮಾಡಬೇಕು. ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೂ ವರ್ಗಾವಣೆ, ಪದೋನ್ನತಿ ಸಿಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷೆ ಯಮುನಾ ಗಾಂವಕರ್, ಪ್ರಧಾನ ಕಾರ್ಯದರ್ಶಿ ಸುಧಾ ಭಟ್ ಇನ್ನಿತರರು ಇದ್ದರು.

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Urging to fulfill demands: Strike by Anganavaadi workers

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...