Sun,May19,2024
ಕನ್ನಡ / English

ಜನಸಂಖ್ಯೆ ಹೆಚ್ಚಳ ದೇಶದ ಅಭಿವೃದ್ಧಿಗೆ ಮಾರಕ:ಅನು ಕಳಸ | Janata news

11 Jul 2018
526

ಕಾರವಾರ : ಜನಸಂಖ್ಯೆ ಹೆಚ್ಚಳದಿಂದ ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವದರೊಂದಿಗೆ ದೇಶದ ಅಭಿವೃದ್ಧಿಗೆ ಮಾರಕ ಉಂಟಾಗುತ್ತದೆ ಎಂದು ಶಿವಜ್ಯೋತಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಅನು ಕಳಸ ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಮಿತಿಮೀರಿದ ಜನಸಂಖ್ಯೆ ಒಂದು ಸಮಸ್ಯೆ ಆಗಿದ್ದು, ಇದರಿಂದ ಬಡತನ ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪತಭರಿತ ದೇಶವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ ಅತ್ಯಗತ್ಯವಾಗಿದೆ. ಎಲ್ಲರೂ ಕೈ ಜೋಡಿಸಿದಾಗ ಮಾತ್ರ ಜನಸಂಖ್ಯೆ ನಿಯಂತ್ರಿಸಲು ಸಾದ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಜಿ.ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಸಂಪನ್ಮೂಲ ಮತ್ತು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಗುಣಮಟ್ಟದ ಜೀವನವನ್ನು ನಡೆಸಲು ಸಾದ್ಯವಾಗುವಂತಹ ಒಂದು ಮಟ್ಟದ ಜನಸಂಖ್ಯೆಯ ಪ್ರಮಾಣ ಸಾಧಿಸುವುದು ಜನಸಂಖ್ಯಾ ಸ್ಥಿರತೆಯಾಗಿರುತ್ತದೆ. ಜನಸಂಖ್ಯಾ ಸ್ಥಿರತೆಯನ್ನು ಸಾಧಿಸದಿದ್ದಲ್ಲಿ ದೇಶದ ಅಭಿವೃದ್ಧಿ ಕಾರ್ಯಗಳು ಯಶಸ್ಸನ್ನು ಕಾಣಲಾರವು. ಯೋಜನಾ ಬದ್ದ ಕುಟುಂಬ ಇದಕ್ಕೆ ಸೂಕ್ತ ಪರಿಹಾರವಾಗಿದೆ. ಸಾರ್ಥಕತೆಯ ನಾಳೆಯ ಜೀವನಕ್ಕಾಗಿ ಕುಟುಂಬ ಯೋಜನೆಗಳ ಬಳಕೆ ಎಂಬುದು ಈ ವರ್ಷದ ವಿಶ್ವ ಜನಸಂಖ್ಯಾ ದಿನಾಚರಣೆಯ ಘೋಷವಾಕ್ಯವಾಗಿದ್ದು ಇದನ್ನು ಅನುಸರಿಸಿಕೊಂಡು ಕುಟುಂಬ ಮತ್ತು ದೇಶ ಬಲಪಡಿಸೋಣ, ಎಂದು ಹೇಳಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎನ್ ಅಶೋಕಕುಮಾರ ಮಾತನಾಡಿ ಜನಸಂಖ್ಯೆ ದೇಶದ ಅಭಿವೃದ್ಧಿಗೆ ಒಂದು ಅತ್ಯಮೂಲ್ಯ ಸಂಪನ್ಮೂಲ ಆದರೆ ಅದು ಮಿತಿಮೀರಿದರೆ ದೇಶದ ಅಭಿವೃದ್ಧಿಗೆ ಮಾರಕವಾಗುತ್ತದೆ. ವಿಶ್ವದ ಜನಸಂಖ್ಯೆ 718 ಕೋಟಿ ಇದ್ದು, ವಿಶ್ವದ ಒಟ್ಟು ಜನಸಂಖ್ಯೆಗೆ ಭಾರತದ ಕೊಡುಗೆ 17% ರಷ್ಟು. ಇವರೆಲ್ಲರಿಗೂ ಪೌಷ್ಟಿಕ ಆಹಾರ, ಶುದ್ದ ಕುಡಿಯುವ ನೀರು, ವಸತಿ ಸೌಲಭ್ಯಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸವಾಲಿನ ಕೆಲಸವಾಗುತ್ತದೆ. ಈ ಹಿನ್ನಲೆಯಲ್ಲಿ ಜನಸಂಖ್ಯೆ ನಿಯಂತ್ರಣ ಅತ್ಯಗತ್ಯವಾಗಿರುತ್ತದೆ, ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರವಾರ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದ ಸಹ ಪ್ರಾಧ್ಯಾಪಕ ವಿ.ಎಮ್.ಗಿರಿ ಜನಸಂಖ್ಯೆ ಮತ್ತು ಲಿಂಗ ಸಮಾನತೆ ಕುರಿತು ಉಪನ್ಯಾಸ ನೀಡಿ ಜನಸಂಖ್ಯೆ ಹೆಚ್ಚಳದಿಂದ ಲಿಂಗಸಮಾನತೆ ಸಾಧಿಸಲಾಗುತ್ತಿಲ್ಲ. ಹೆಣ್ಣನ್ನು ಇಂದಿಗೂ ಗಂಡಿಗೆ ಸಮಾನಳು ಎಂದು ಪರಿಗಣಿಸಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಿ ಲಿಂಗ ತಾರತಮ್ಯ ಹೋಗಲಾಡಿಸಬೇಕಾಗಿದೆ ಎಂದು ಹೇಳಿದರು.

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Population is obstruction for nations development: Anu Kalasa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...