Mon,May06,2024
ಕನ್ನಡ / English

ಪಂಚಭೂತಗಳಲ್ಲಿ ಲೀನವಾದ ಅಜಾತಶತ್ರು ಅಟಲ್ | Janata news

17 Aug 2018
1062

ನವದೆಹಲಿ : ಇಂದು ಶುಕ್ರವಾರ ಸಂಜೆ 4:45ಗಂಟೆಗೆ ಪ್ರಪಂಚ ಕಂಡ ಅಪ್ರತಿಮ ನಾಯಕ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ಪಂಚಭೂತಗಳಲ್ಲಿ ಲೀನವಾದರು. ಮನುಷ್ಯ ಒಬ್ಬನ ಜೀವಮಾನದಲ್ಲಿ ಗಳಿಸಬಹುದಾದ ಗರಿಷ್ಠ ಮಟ್ಟದ ಪ್ರೀತಿ, ವಿಶ್ವಾಸ, ಗೌರವ ಗಳಿಸಿದ್ದ ಅಟಲ್ ಅವರ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಬ್ರಹತ್ ಮೆರವಣಿಗೆಯೊಂದಿಗೆ ರಾಷ್ಟೀಯ ಸ್ಮೃತಿ ಸ್ಥಳಕ್ಕೆ ಸಂಜೆ ಅಷ್ಟೊತ್ತಿಗೆ ತರಲಾಯಿತು. ದಾರಿಯುದ್ದಕ್ಕೂ ಲಕ್ಷಾಂತರ ದೇಶವಾಸಿಗಳು ಅಗಲಿದ ನಾಯಕನಿಗೆ ಅಶ್ರುತರ್ಪಣ ಸಲ್ಲಿಸಿದರು.
PMatAtal
ಕಾಲುನಡಿಗೆಯಲ್ಲಿ ಪಾರ್ಥಿವ ಶರೀರ ಹಿಂಬಾಲಿಸಿದ ಪ್ರಧಾನಿ ಮೋದಿ
ಬೃಹ್ಮಚಾರಿಯಾಗಿದ್ದ ಅಟಲ್ ಅವರ ದೊಡ್ಡ ಕುಟುಂಬವೆಂಬಂತೆ, 9 ಕಿ.ಮಿ.ಗಳಷ್ಟು ದೂರದ ರಾಷ್ಟೀಯ ಸ್ಮೃತಿ ಸ್ಥಳಕ್ಕೆ ಕಾಲು ನಡಿಗೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರದ್ಯಕ್ಷ ಅಮೀತ್ ಷಾ ಸೇರಿದಂತೆ ಬಿಜೆಪಿಯ ಮುಖ್ಯಮಂತ್ರಿಗಳು, ಅನೇಕ ಕೇಂದ್ರ ಮಂತ್ರಿಗಳು, ಗಣ್ಯರು ಅಗಲಿದ ಮಹಾ ನಾಯಕನ ಪಾರ್ಥಿವ ಶರೀರವನ್ನು ಹಿಂಬಾಲಿಸಿ ಗೌರವ ಸೂಚಿಸಿದ್ದು ವಿಶೇಷ ಎನಿಸಿತು. ರಾಷ್ಟೀಯ ಸ್ಮೃತಿ ಸ್ಥಳದಲ್ಲಿ ಸಕಲ ಸರ್ಕಾರಿ ಗೌರವಗಳ ನಂತರ ರಾಷ್ಟ್ರಪತಿ ರಾಮನಾಥ ಕೊವಿಂದ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಸುಮಿತ್ರ ಮಹಾಜನ್, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಕೊನೆಯ ನಮನ ಸಲ್ಲಿಸಿದರು. ಹೊರರಾಷ್ಟ್ರಗಳಾದ ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಜಿಲ್ ವಾಂಗ್ಚುಕ್, ಅಪ್ಘಾನಿಸ್ಥಾನದ ಮಾಜಿ ಅಧ್ಯಕ್ಷ ಹಮಿದ್ ಕರ್ಜಾಯಿ ಸೇರಿದಂತೆ ಅನೇಕರು ಅಂತಿಮ ನಮನ ಸಲ್ಲಿಸಿದರು.

ದತ್ತು ಪುತ್ರಿ ನಮಿತಾಯಿಂದ ಚಿತೆಗೆ ಅಗ್ನಿಸ್ಪರ್ಶ
ಅಟಲ್ ಅವರ ದತ್ತು ಪುತ್ರಿ ನಮಿತಾ ಯಿಂದ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಜಾತಶತ್ರು ಅವರ ಅಂತ್ಯಕ್ರಿಯೆ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಹಿಂದೂ ಸಂಪ್ರದಾಯದಲ್ಲಿ ಗಂಡುಮಕ್ಕಳಿಗೆ ಮಾತ್ರ ಚಿತೆಗೆ ಅಗ್ನಿಸ್ಪರ್ಶ ಮಾಡುವ ಅಧಿಕಾರವಿದ್ದು, ಅಟಲ್ ಅವರ ದತ್ತುಪುತ್ರಿ ನಮಿತಾ ಅಟಲ್ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ದೇಶಾದ್ಯಂತ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದಂತಾಗಿದೆ.

English summary :Final rituals of Ajatashatru Atal

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...