Mon,May06,2024
ಕನ್ನಡ / English

ವರಮಹಾಲಕ್ಷ್ಮಿ ಪೂಜಾ ವಿಧಿ ವಿಧಾನ! | Janata news

21 Aug 2018
3006

ಬೆಂಗಳೂರು : ಶ್ರಾವಣಮಾಸದ ಪ್ರಸಿದ್ಧಹಿಂದೂ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ವ್ರತ / ಪೂಜೆಯೂ ಒಂದು. ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಶ್ರಾವಣಮಾಸದ ಎರಡನೇ ಶುಕ್ರವಾರದ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ. ಶ್ರಾವಣ ಮಾಸದಲ್ಲಿ ಕೈಗೊಳ್ಳುವ ವ್ರತಾಚರಣೆಯಿಂದ ದಾರಿದ್ರ್ಯವು ದೂರವಾಗಿ ಸುಖವು ಒಲಿದು ಬರುವುದು. ಮನೆಯು ಸಮೃದ್ಧಿಯಿಂದ ಕೂಡಿರುವುದು ಎನ್ನುವ ನಂಬಿಕೆಯಿದೆ.

ಹಿನ್ನೆಲೆ
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
Varamahalaxmi

ಲಕ್ಷ್ಮಿ ಪೂಜೆ ಹೇಗೆ ಮಾಡಬೇಕು?

ಪೂಜೆಯ ದಿನದ ರಾಹುಕಾಲ ಪ್ರಶಸ್ತ ಸಮಯವಲ್ಲ.

- ಪೂಜೆಯ ದಿನದಂದು ಮಹಿಳೆಯರು ಸೂರ್ಯ ಹುಟ್ಟುವುದಕ್ಕೆ ಮುಂಚೆಯೇ ಎದ್ದು, ಶುದ್ಧ ನೀರಿನಿಂದ ಸ್ನಾನ ಮಾಡಿ, ಕಲಶ ಸ್ಥಾಪನೆ ಮಾಡಬೇಕು.

- ಪೂಜಾ ಸ್ಥಳವನ್ನು ಶುದ್ಧ ಮಾಡಿ. ಸ್ಥಳದಲ್ಲಿ ಅಷ್ಟದಳದ ರಂಗೋಲಿ ಹಾಕಿ, ಬಾಳೆಕಂಬ, ಮಾವಿನ ಎಲೆಗಳಿಂದ ಸಿಂಗರಿಸಬೇಕು.
Varamahalaxmi

- ಕಲಶಕ್ಕೆ ಶುದ್ಧ ನೀರು ಹಾಕಿ/ಶುದ್ಧ ಅಕ್ಕಿ ಹಾಕಬೇಕು. ಇದರ ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ ಅಥವಾ ಯಾವುದೇ ನಾಣ್ಯ, ದ್ರಾಕ್ಷಿ, ಗೋಡಂಬಿ, ಕರ್ಜೂರ, ಬಾದಾಮಿ, ಕಲ್ಲುಸಕ್ಕರೆ ಹಾಕಬೇಕು. ನಂತರ ಒಂಬತ್ತು ಎಳೆಯ ದಾರ ತೆಗೆದುಕೊಂಡು ಇದಕ್ಕೆ ಅರಿಶಿಣ ಹಚ್ಚಿ, ಅರಿಶಿಣದ ಕೊಂಬನ್ನು ಕಟ್ಟಿ ತಾಳಿ ಮಾಡಬೇಕು. ಇದನ್ನು ಕಲಶದ ಚೊಂಬಿಗೆ ಕಟ್ಟಿದರೆ ಕಲಶ ತಯಾರಾಗುತ್ತದೆ.

- ಕಳಶದ ಬಾಯಿಗೆ ವೀಳ್ಯದೆಲೆ ಅಥವಾ ಮಾವಿನ ಎಲೆ ಇಡಬೇಕು. ನಂತರ ಶುಭ್ರವಾಗಿ ತೊಳೆದ ತೆಂಗಿನಕಾಯಿಗೆ ಅರಿಶಿಣ ಹಚ್ಚಿಬೇಕು. ಅರಿಶಿಣ ಹಚ್ಚಿದ ತೆಂಗಿನಕಾಯಿಗೆ ಕುಂಕುಮ ಬೊಟ್ಟು ಇಡಬೇಕು.

- ಮಂಗಳಕರವಾದ ವರಮಹಾಲಕ್ಷ್ಮಿ ಪೂಜೆ/ವ್ರತಕ್ಕೆ ಲಕ್ಷ್ಮಿ ದೇವಿಯ ಮುಖ ಇರಿಸಲಾಗುವುದು. ಕೆಲವರು ಬೆಳ್ಳಿಯ ಮುಖ ಇಡುತ್ತಾರೆ. ಇನ್ನೂ ಕೆಲವರು ಮಾರುಕಟ್ಟೆಯಲ್ಲಿ ದೊರೆಯುವ ಮುಖವನ್ನು ಇರಿಸುತ್ತಾರೆ.
Varamahalaxmi

- ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.

- ಪ್ರಣಪ್ರತಿಷ್ಠಾಪನೆ ಸಮಯದಲ್ಲಿ ಕೈಯಲ್ಲಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವುಗಳನ್ನು ತೆಗೆದುಕೊಳ್ಳಬೇಕು. ದೇವಿಯ ಸಹಸ್ರ ನಾಮವನ್ನು ಹೇಳಿ ಕೊನೆಗೆ ನಮಃ ಎಂದು ಹೇಳಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವನ್ನು ದೇವತೆಗೆ ಅರ್ಪಿಸಿ ನಮಸ್ಕರಿಸಬೇಕು.

- ವರಮಹಾಲಕ್ಷ್ಮಿ ಹಬ್ಬದ ದಿನದಂದು ನೈವ್ಯೇದ್ಯಕ್ಕೆ ಕಡಲೆಬೇಳೆಯಿಂದ ತಯಾರಿಸಿದ ಹಯಗ್ರೀವ, ಪಾಯಸ, ಹೋಳಿಗೆ ಇತ್ಯಾದಿ ಸಿಹಿ ತಿನಿಸುಗಳನ್ನು ದೇವರಿಗೆ ಅರ್ಪಿಸುತ್ತಾರೆ.
Varamahalaxmi

- ನಂತರ ದೇವಿಗೆ ಆರತಿಯನ್ನು ಬೆಳಗಿ ಪ್ರಸಾದವನ್ನು ಅರ್ಪಿಸಲಾಗುತ್ತದೆ. ಪೂಜೆಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಅಡಿಕೆ ವೀಳ್ಯದೆಲೆಯೊಂದಿಗೆ ತಾಂಬೂಲವನ್ನು ನೀಡಲಾಗುತ್ತದೆ.

ಲಕ್ಷ್ಮಿಯ ಸ್ತೋತ್ರಗಳು

1. ಲಕ್ಷ್ಮೀಂ ಕ್ಷೀರಸಮುದ್ರರಾಜತನಯಾಂ ಶ್ರೀರಂಗಧಾಮೇಶ್ವರೀಂ|

ದಾಸೀಭೂತಸಮಸ್ತದೇವವನಿತಾಂ ಲೋಕೈಕದೀಪಾಂಕುರಾಮ್||

ಶ್ರೀಮನ್ಮಂದಕಟಾಕ್ಷಲಬ್ಧವಿಭವಬ್ರಹ್ಮೇಂದ್ರಗಂಗಾಧರಾಂ|

ತ್ವಾಂ ತ್ರೈಲೋಕ್ಯಕುಟುಂಬಿನೀಂ ಸರಸಿಜಾಂ ವಂದೇ ಮುಕುಂದಪ್ರಿಯಾಮ್||

2. ನಮಸ್ತೇsಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ|

ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮಿ! ನಮೋsಸ್ತು ತೇ||

Varamahalaxmi

3. ಯಾ ರಕ್ತಾಂಬುಜವಾಸಿನೀ ವಿಲಸಿನೀ ಚಂಡಾಶು ತೇಜಸ್ವಿನೀ|
ಆರಕ್ತಾ ರುಧಿರಾಂಬರಾ ಹರಿಸಖೀ ಯಾ ಶ್ರೀ ಮನೋಹ್ಲಾದಿನೀ||
ಯಾ ರತ್ನಾಕರಮಂಥನಾತ್ಪ್ರಘಟಿತಾ ವಿಷ್ಣೋಶ್ಚ ಯಾ ಗೇಹಿನೀ|
ಸಾ ಮಾಂ ಪಾತು ಮನೋರಮಾ ಭಗವತೀ ಲಕ್ಷ್ಮೀಶ್ಚ ಪದ್ಮಾಲಯಾ||

ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ, ಶುಭವಾಗಲಿ. ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.
Varamahalaxmi

English summary :Varamahalaxmi Pooja

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...