Mon,May06,2024
ಕನ್ನಡ / English

ಜಿಮ್ ಟ್ರೈನರ್ ಅಪಹರಣ ಮತ್ತು ಮಾರಣಾಂತಿಕ ಹಲ್ಲೆ: ನಟ ದುನಿಯಾ ವಿಜಯ್ ಬಂಧನ | Janata news

23 Sep 2018
575

ಬೆಂಗಳೂರು : ಸದಾ ವಿವಾದದ ಸುಳಿಯಲ್ಲಿರುವ ನಟ ದುನಿಯಾ ವಿಜಿ ಈಗ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದುಹೊಸ ವಿವಾದಕ್ಕೆ ಸಿಲುಕಿದ್ದು, ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಎಂಬವರನ್ನು ಅಪಹರಿಸಿರುವ ನಟ ದುನಿಯಾ ವಿಜಯ್ ಹಾಗೂ ಸಹಚರರು, ಮಾರುತಿಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ, ಎಂದು ಹೇಳಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿದ ಪೊಲೀಸರು ನಟ ದುನಿಯಾ ವಿಜಯ್ ಬಂಧಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಮಾರುತಿಗೌಡ ಎಂಬವರನ್ನು ಅಪಹರಿಸಿರುವ ನಟ ದುನಿಯಾ ವಿಜಯ್ ಹಾಗೂ ಅವರ ತಂಡ, ಮಾರುತಿಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ, ಎಂದು ಪಾನಿಪುರಿ ಕಿಟ್ಟಿ ನೀಡಿದ ದೂರಿನಡಿಯಲ್ಲಿ ಪೊಲೀಸರು ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ.

ದುನಿಯಾ ವಿಜಯ್‌ ಹಾಗೂ ಅವರ ತಂಡದವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಿಸ್ಟರ್ ಬೆಂಗಳೂರು ಸ್ಪರ್ಧೆ ನೋಡಲು ಬಂದಿದ್ದ ನನ್ನ ಅಣ್ಣನ ಮಗ ಜಿಮ್ ಟ್ರೈನರ್ ಆಗಿರುವ ಮಾರುತಿ ಮಾರುತಿಗೌಡನನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಪಾನಿಪುರಿ ಕಿಟ್ಟಿ ಭಾನುವಾರ ರಾತ್ರಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೇಸ್‌ ದಾಖಲಿಸಿಕೊಂಡ ಪೊಲೀಸರು ದುನಿಯಾ ವಿಜಯ್‌ಗೆ ಕರೆ ಮಾಡಿ ಮಾರುತಿಗೌಡನ ಜತೆ ಪೊಲೀಸ್‌ ಠಾಣೆಗೆ ಹಾಜರಾಗುವಂತೆ ಹೇಳಿದರು.
duniyavijay
ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ಹಲ್ಲೆಗೊಳಗಾದ ಜಿಮ್ ಟ್ರೇನರ್ ಮಾರುತಿಗೌಡ ಅವರನ್ನು ಕರೆದುಕೊಂಡು ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಬಂದದ್ದಾರೆ. ಪೋಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದು, ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಎರಡು ಗುಂಪಿನವರ ನಡುವೆ ಮಾತಿನ ಚಕಮಕಿ ನಡೆದು, ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿ, ಪರಿಸ್ಥಿತಿ ನಿಯಂತ್ರಿಸಲು ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಯ್ತು.

ಸದ್ಯ ಬಂಧನಕ್ಕೊಳಗಾದ ವಿಜಯ್‌ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ದುನಿಯಾ ವಿಜಯ್ ವಿರುದ್ಧ ಕಿಡ್ನಾಪ್ , ಹಲ್ಲೆ, ಕೊಲೆ ಜೀವ ಬೆದರಿಕೆ, ಐಪಿಸಿ ಸೆಕ್ಷನ್ 365, 342 , 325, 506 , ಪ್ರಕರಣ ದಾಖಲಾಗಿದ್ದು, ದುನಿಯಾ ವಿಜಯ್‌ ಹಾಗೂ ಸಹಚರರನ್ನು ಪರಪ್ಪನ ಅಗ್ರಹಾರಕ್ಕೆ ಕರೆತರಲಾಗುವುದು, ಎಂದು ಹೇಳಲಾಗಿದೆ. ಅನೇಕ ಪ್ರಕರಣಗಳಲ್ಲಿ ಬಾಗಿಯಾಗಿರುವ ದುನಿಯಾ ವಿಜಯನನ್ನು ರೌಡಿ ಪಟ್ಟಿಗೆ ಸೇರಿಸುವ ಸಾದ್ಯತೆಗಳಿವೆ ಎಂದು ಹೇಳಲಾಗಿದೆ.

English summary :Kannada film actor Duniya Viji arrested for kidnapping and attacking gym instructor yesterday in Bengaluru

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...