Sun,May19,2024
ಕನ್ನಡ / English

40 ಜನರ ಪ್ರಾಣ ಉಳಿಸಿ ಸೂಪರ್ ಹೀರೋ ಆದ ರೈಲ್ವೆ ಗೇಟ್‌ಮನ್‌ | Janata news

08 Nov 2018
718

ಬೆಳಗಾವಿ : ಬೆಳಗಾವಿ ತಾಲೂಕಿನ ಗೋದಗೇರಿ ಗ್ರಾಮದ ಬಳಿ ವಾಯವ್ಯ ಸಾರಿಗೆ ಸಂಸ್ಥೆಯ ಸ್ಥಳೀಯ ಘಟಕಕ್ಕೆ ಸೇರಿದ ಬಸ್‌ ಬುಧವಾರ ಬ್ರೇಕ್‌ ಫೇಲ್‌ ಆದ ಕಾರಣ ಮುಚ್ಚಿದ ರೈಲ್ವೆ ಗೇಟ್‌ಗೆ ಅಪ್ಪಳಿಸಿ ಮುಂದೆ ನುಗ್ಗಿ ರೈಲ್ವೆ ಹಳಿಗಳ ಮೇಲೆ ನಿಂತು ಕೆಲಕಾಲ ಆತಂಕ ಮೂಡಿಸಿತು. ಇದನ್ನು ಗಮನಿಸಿದ ರೈಲ್ವೆ ಗೇಟ್‌ಮನ್‌ ಸಮಯಪ್ರಜ್ಞೆ ಮೆರೆದು ರೈಲು ಹಳಿಗಳ ಗುಂಟು ಓಡಿ ಕೆಂಪು ನಿಶಾನೆ ತೋರಿಸುವ ಮೂಲಕ ರೈಲನ್ನು ನಿಲ್ಲಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಘಟನೆಯ ವಿವರ -
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೋದಗೇರಿಯ ರೈಲ್ವೆ ಗೇಟ್‌ ಬಳಿ ಆ ಗ್ರಾಮದಿಂದ ಪಟ್ಟಣಕ್ಕೆ ಮರಳುತ್ತಿದ್ದ ಬಸ್‌ ನ ಬ್ರೇಕ್‌ ಇದ್ದಕ್ಕಿದ್ದಂತೆ ಫೇಲ್‌ ಆಗಿದೆ. ಹೀಗಾಗಿ, ರೈಲು ಬರುವ ಸಮಯವಾದ್ದರಿಂದ ಬಂದ್‌ ಆಗಿದ್ದ ರೈಲ್ವೆ ಗೇಟ್‌ಗೆ ಬಸ್‌ ಅಪ್ಪಳಿಸಿದ್ದು, ವಿಚಲಿತರಾದ ಚಾಲಕ ಎಂ.ಎಸ್‌. ಗುಡಗುಡಿ ರೈಲು ಹಳಿಗಳ ಮೇಲೆ ಬಸ್‌ ನಿಲ್ಲಿಸಿದ್ದಾರೆ. ಈ ವೇಳೆ ಲೋಂಡಾದತ್ತ ಬರುತ್ತಿದ್ದ ಹುಬ್ಬಳ್ಳಿ-ಮಿರಜ್‌ ಪ್ಯಾಸೆಂಜರ್‌ ರೈಲನ್ನು ಗಮನಿಸಿದ ಗೇಟ್‌ ಮ್ಯಾನ್‌ ಕೆಂಪು ಬಾವುಟದೊಂದಿಗೆ ಹಳಿಗಳಗುಂಟ ಓಡಿ ಚಾಲಕರಿಗೆ ಸೂಚನೆ ನೀಡಿ ರೈಲನ್ನು ನಿಲ್ಲಿಸಿದ್ದಾರೆ.

ನಂತರ ಸಮೀಪದ ದೇವರಾಯಿ ರೈಲು ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಹಳಿಯ ಮೇಲೆ ನಿಂತಿದ್ದ ಬಸ್ಸನ್ನು ಸ್ಥಳೀಯರ ಸಹಾಯದಿಂದ ಪಕ್ಕಕ್ಕೆ ಸರಿಸಿ ರೈಲು ಮುಂದೆ ಸಾಗಲು ಅನುವು ಮಾಡಿಕೊಟ್ಟಿದ್ದಾರೆ. ಇಷ್ಟೆಲ್ಲ ನಡೆಯುವರೆಗೆ ರೈಲು ಅರ್ಧ ಗಂಟೆ ನಿಂತಿದ್ದು, ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಪೊಲೀಸರು ಬಸ್‌ ಮತ್ತು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಸ್​ನಲ್ಲಿ ಸುಮಾರು 40 ಜನ ಪ್ರಯಾಣಿಸುತ್ತಿದ್ದು ಎಲ್ಲರೂ ಸಂಭವನೀಯ ದುರಂತದಿಂದ ಅದೃಷ್ಟವಶಾತ್ ಪಾರಾಗಿದ್ದಾರೆ.

---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----

English summary : The bus passes the train gate as a break fielder and crashes into the train and goes on the track and there is a huge disaster in the railway gateman s time consciousness.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...