Fri,May17,2024
ಕನ್ನಡ / English

ಚಳುವಳಿಗಾರರ ಮೇಲೆ ದೌರ್ಜನ್ಯ : ಕೇರಳಕ್ಕೆ ಬಿಜೆಪಿ ಪ್ರತಿನಿಧಿಗಳ ತಂಡ | Janata news

28 Nov 2018
673

ನವದೆಹಲಿ : ಕೇರಳ ಶಬರಿಮಲೆಯಲ್ಲಿ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ವಿರೋಧಿಸಿ ಸತ್ಯಾಗ್ರಹ ನಡೆಸುತ್ತಿರುವವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ಬಿಜೆಪಿ ರಾಷ್ಟೀಯ ನಾಯಕರು ತಮ್ಮ ಕಳವಳ ವ್ಯಕ್ತಪಡಿಸಿದ್ದು. ಈ ಕುರಿತು ಅಧ್ಯಯನ ನಡೆಸಲು ನಾಲ್ಕು ಲೋಕಸಭಾ ಸದಸ್ಯರನ್ನೊಳಗೊಂಡ ಪಕ್ಷದ ಪ್ರತಿನಿಧಿಗಳ ತಂಡವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ರಚಿಸಿದ್ದಾರೆ.

ಈ ಪ್ರತಿನಿಧಿಗಳ ತಂಡದಲ್ಲಿ ರಾಜ್ಯದ ಸಂಸದರಾದ ಪ್ರಹ್ಲಾದ ಜೋಷಿ ಹಾಗೂ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂಸದೆ ಕುಮಾರಿ ಸರೋಜ ಪಾಂಡೆ ಮತ್ತು ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟೀಯ ಅಧ್ಯಕ್ಷ, ಸಂಸದ ವಿನೋದ ಸೊಂಕರ್ ಇರಲಿದ್ದಾರೆ.

ಈ ಪ್ರತಿನಿಧಿಗಳ ತಂಡ ಕೇರಳದಲ್ಲಿ ಶಬರಿಮಲೆ ದೇವಾಲಯಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಚಳುವಳಿ ಹಾಗೂ ಚಳುವಳಿಗಾರರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ಈ ಚಳುವಳಿ ನಡೆದ ಸಂದರ್ಭದಲ್ಲಿ ವಿವೇಚನಾರಹಿತವಾಗಿ ಬಂಧನ ನಡೆಸಿದ ಪೋಲೀಸರ ಕ್ರಮದ ಕುರಿತು ಮಾಹಿತಿ ಕಲೆಹಾಕಲಿದೆ. ಅಲ್ಲದೇ, ಈ ತಂಡ ಅಲ್ಲಿಯ ಸಾರ್ವಜನಿಕರನ್ನೂ ಹಾಗೂ ಪಕ್ಷದ ಕಾರ್ಯಕರ್ತರನ್ನೂ ಭೇಟಿ ಮಾಡಲಿದ್ದು, 15 ದಿನಗಳೊಳಗೆ ತಮ್ಮ ವರದಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗೆ ಕಳುಹಿಸಲಿದೆ.

ಕೇರಳ ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳಾ ಪ್ರವೇಶಕ್ಕೆ ಸಂಬಂಧಿಸಿದ ಸುಪ್ರಿಂಕೋರ್ಟ್ ತೀರ್ಪು ನೀಡಿದ ನಂತರ ಅಕ್ಷರಸಃ ಪ್ರತಿಭಟನೆಕಾರರ ಹಾಗೂ ಎಡಪಂತಿಯ ಸರ್ಕಾರದ ಜಿದ್ದಾಜಿದ್ದಿಯ ಅಖಾಡವಾಗಿ ಕೇರಳ ಪರಿವರ್ತಿತವಾಗಿದೆ. ಈ ಮಧ್ಯೆ ಅಯ್ಯಪ್ಪಸ್ವಾಮಿ ಭಕ್ತರ ಮೇಲೆ ಕೇರಳ ಪಿಣರಾಯಿ ಸರ್ಕಾರದ ಆಜ್ಞೆ ಮೇರೆಗೆ ಪೊಲೀಸರು ತೀವ್ರ ದಬ್ಬಾಳಿಕೆ ನಡೆಸಿದ್ದಾರೆ, ಎಂಬ ಕೂಗು ಕೇಳಿಬರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಡಿಯೊಗಳು ಹರಿದಾಡುತ್ತಿದೆ.

English summary :Atrocities on agitators : BJP delegation to visit Kerala and submit report in 15days to Amit Shah

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...