Mon,May06,2024
ಕನ್ನಡ / English

ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ತಾ.ಪ. ಸದಸ್ಯ | Janata news

20 Dec 2018
805

ಕಾರವಾರ : ತಾಲೂಕು ಪಂಚಾಯಿತಿ ಸದಸ್ಯನೊಬ್ಬ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಿಗೆ ಆಸಿಡ್ ಎರಚುವ ಬೆದರಿಕೆಯೊಡ್ಡಿದ್ದಲ್ಲದೇ ಆತನನ್ನು ಹಿಗ್ಗಾಮುಗ್ಗಾ ಥಳಿಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದಲ್ಲಿ ನಡೆದಿದೆ.

ಬಿಜೆಪಿಯ ಕಾರ್ಯಕರ್ತ ಹರೀಶ ನಾಗೇಕರ್ ಎಂಬುವವರೇ ತಾಪಂ ಸದಸ್ಯ ಪ್ರಶಾಂತ ಗೊವೇಕರ್‍ರಿಂದ ಥಳಿತಕ್ಕೊಳಗಾದ ವ್ಯಕ್ತಿ. ಕಳೆದ ತಾಪಂ ಚುನಾವಣೆಯಲ್ಲಿ ಪ್ರಶಾಂತ ಗೋವೆಕರ್ ಬಿಜೆಪಿ ಟಿಕೇಟ್‍ನಿಂದ ಸ್ಪರ್ಧಿಸಿ ಎದುರಾಳಿ ಕಾಂಗ್ರೇಸ್ ಅಭ್ಯರ್ಥಿಯನ್ನು ಪರಾಭವಗೊಳಿಸಿದ್ದರು. ನಂತರ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಪ್ರಶಾಂತ ಗೋವೆಕರ್ ಬಿಜೆಪಿಯಿಂದ ಅಮಾನತ್ತುಗೊಂಡಿದ್ದರು. ಈ ರಾಜಕೀಯ ವೈಷಮ್ಯವೇ ಹಲ್ಲೆಗೆ ಕಾರಣವೆನ್ನಲಾಗಿದೆ.

ಹಲ್ಲೆಗೊಳಗಾದ ಹರೀಶ ನಾಗೇಕರ್ ಅವರ ಪ್ರಕಾರ, ಇತ್ತಿಚೇಗೆ ಕಿನ್ನರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಅವರು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಒಟ್ಟು 319 ಗ್ರಾಮಸ್ಥರಿಗೆ ಸಿಲೆಂಡರ್ ವಿತರಿಸಿದ್ದರು. ಈ ಕಾರ್ಯಕ್ರಮದಿಂದ ದೂರವೇ ಉಳಿದಿದ್ದ ತಾಪಂ ಸದಸ್ಯ ಗೋವೆಕರ್ ತನ್ನ ವಿರುದ್ಧ ಹರೀಶ ನಾಗೇಕರ ರಾಜಕೀಯವಾಗಿ ಬೆಳೆಯುತ್ತಿದ್ದಾನೆ ಎಂದು ಅಸೂಯೆ ಪಡುತ್ತಿದ್ದ.

ಗುರುವಾರ ಹರೀಶ ನಾಗೇಕರ್ ಮಡಗಾಂವ್‍ಗೆ ತೆರಳಲು ತನ್ನ ಬೈಕ್‍ನ್ನು ನಗರದ ಗೀತಾಂಜಲಿ ಥೇಟರ್ ಬಳಿ ನಿಲ್ಲಿಸಲು ಹೋದಾಗ, ದ್ವಿಚಕ್ರ ವಾಹನದಲ್ಲಿ ಆಗಮಸಿದ ಪ್ರಶಾಂತ ಗೋವೆಕರ್ ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ತನ್ನ ಕೈಯಲ್ಲಿರುವ ಎಸಿಡ್ ಬಾಟಲಿಯನ್ನು ತೋರಿಸಿ, ಇನ್ನು ಮುಂದೆ ತನ್ನ ಎದರು ರಾಜಕೀಯ ಮಾಡುವುದನ್ನು ಬಿಟ್ಟು ದೂರ ಹೋಗದಿದ್ದರೇ ಎಸಿಡ್ ಎರಚಲು ಹಿಂದೆ ಮುಂದೆ ನೋಡುವುದಿಲ್ಲ, ಎಂದು ಬೆದರಿಕೆ ಹಾಕಿದ್ದಾನೆ ಎಂದು ನಾಗೇಕರ್ ಆರೋಪಿಸಿದ್ದಾರೆ.

ಬಳಿಕ ಹರೀಶನನ್ನು ಆತನ ಸ್ನೇಹಿತರು ಕೂಡಲೇ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ಘಟನೆಯಲ್ಲಿ ಹರೀಶನ ಒಂದು ಕೈಬೆರಳು ಮುರಿದಿದ್ದು, ಕೈ, ಕುತ್ತಿಗೆ ಹಾಗೂ ಮುಖಕ್ಕೆ ತೀವ್ರ ಗಾಯಗಳಾಗಿದೆ.
ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Brutal attack on BJP activist by TP member

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...