Sat,May04,2024
ಕನ್ನಡ / English

ಮೂವರು ಕುಖ್ಯಾತ ಅಂತರರಾಜ್ಯ ಕಳ್ಳರ ಬಂಧನ : ರೂ.8.5ಲಕ್ಷ ಮೌಲ್ಯದ ಚಿನ್ನಾಭರಣ ನಗದು ವಶ | Janata news

28 Feb 2019
650

ಬೆಳಗಾವಿ : ಮೂವರು ಕುಖ್ಯಾತ ಅಂತರ ರಾಜ್ಯ ಕಳ್ಳರನ್ನು ಬಂಧಿಸಿ ರೂ 8,49,812 ಬೆಲೆ ಬಾಳುವ 313 ಗ್ರಾಂ ಬಂಗಾರ, ರೂ 14 ಸಾವಿರ ಹಣವನ್ನು ವಶಪಡಿಸಿಕೊಳ್ಳುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಐದು ತಿಂಗಳ ಹಿಂದೆ ಪಟ್ಟಣದ ಕಾಲೇಜ ರೋಡದಲ್ಲಿರುವ ಆನಂದ ಪತ್ತಾರ ಎಂಬುವರಿಗೆ ಸೇರಿದ ವಿನಾಯಕ ಜ್ಯುವೇಲರ್ಸ ಅಂಗಡಿಯಲ್ಲಿ ಹಾಡು ಹಗಲಿನಲ್ಲಿಯೇ ಕಳ್ಳರು ಅಂಗಡಿಯ ಮಾಲಿಕನ ಕಣ್ಣು ತಪ್ಪಿಸಿ 900 ಗ್ರಾಮ ಬಂಗಾರದ ಆಭರಣಗಳ
ಬ್ಯಾಗ್ ಕದ್ದು ಪರಾರಿಯಾಗಿದ್ದರು. ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರಿಂದ ಕಿತ್ತೂರು ಪಟ್ಟಣದ ವ್ಯಾಪಾರಸ್ಥರಲ್ಲಿ ಆತಂಕ ಮೂಡಿಸಿತ್ತು. ಇದನ್ನು ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಳ್ಳರ ಬಂಧನಕ್ಕಾಗಿ ವಿಶೇಷ ತಂಡ
ರಚಿಸಿದ್ದರು.

ಕಳ್ಳರ ಶೋಧನೆಗಾಗಿ ಈ ತಂಡವು ವ್ಯಾಪಕ ಬಲೆ ಬಿಸಿತ್ತು. ಮೂರು ಜನ ಆರೋಪಿಗಳಲ್ಲಿ ಒಬ್ಬನನ್ನು ಬೆಳಗಾವಿಯಲ್ಲಿ ಇನ್ನಿಬ್ಬರನ್ನು ನಿಪಾಣಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳಾದ ಬಳ್ಳಾರಿಯ ರಾಮು ವೆಂಕಟೇಶ(20), ಭದ್ರಾವತಿಯ ಸುಭಾಸ ನಗರದ ರಾಮು ಪಕ್ಕಿರಪ್ಪ(52) ಹಾಗೂ ಭದ್ರಾವತಿಯ ಹೊಸ ಮನೆಯ ಮಂಜ್ಯಾ ಅಲಿಯಾಸ್ ಕೆ.ಮಂಜುನಾಥ ರಾಮು(40) ಎಂಬ ಆರೋಪಿಗಳನ್ನು ಬಂದಿಸಿದ್ದಾರೆ. ಇವರಿಂದ ರೂ 8,49,812 ಬೇಲೆ ಬಾಳುವ 313 ಗ್ರಾಂ ತೂಕದ ಬಂಗಾರ ಹಾಗೂ 14 ಸಾವಿರ ನಗದು
ಹಣವನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂಳಿದ ಆರೋಪಿಗಳ ಪತ್ತೆಗಾಗಿ ಕಿತ್ತೂರು ಪೊಲೀಸರು ಜಾಲ ಬಿಸಿದ್ದಾರೆ.

ಸಿಪಿಐ ರಾಘವೇಂದ್ರ ಹವಾಲ್ದಾರ, ಬೆಳಗಾವಿ ಪಿ.ಎಸ್.ಐ, ಡಿ.ಎಸ್.ಬಿ ನಿಂಗನಗೌಡ ಪಾಟೀಲ, ಎ.ಎಸ್.ಐ ಡಿ.ಬಿ ಈಟಿ, ಕಿತ್ತೂರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಎಲ್.ಎಚ್ ನಾಯ್ಕರ, ಆಯ್.ಎನ್ ಜಿನ್ನವ್ವಗೋಳ, ಎನ್.ಆರ್ ಗಳಗಿ, ವಿ.ಎ ಠಕ್ಕನವರ, ಎಸ್. ಆಯ್ ಮಾನ್ಯದಮಠ, ಎಸ್.ಎಸ್ ಕಾಜಗಾರ, ಶ್ರೀ ಸಿ.ಎಸ್ ಬುದ್ನಿ, ಆರ್.ಐ ಕಾಜಗಾರ, ಕೆ.ವಿ ಮಗದುಮ್, ಎಲ್, ಎಫ್ ಜಂಬಲವಾಡ, ಎ.ಎಫ್ ಭಜಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಪೊಲೀಸ್ ಕಛೇರಿಯ ಟೆಕ್ನಿಕಲ್ ಸೆಲ್ ವಿಭಾಗದ ಸಿಬ್ಬಂದಿ ಸಚೀನ ಪಾಟೀಲ ಇವರನ್ನೊಳಗೊಂಡ ತನಿಖಾ ತಂಡ ಆರೋಪಿತರ ಪತ್ತೆಗಾಗಿ ಶ್ರಮಿಸಿದ್ದಾರೆ ಎಂದು ಕಿತ್ತೂರು ಪೋಲಿಸರು ತಿಳಿಸಿದ್ದಾರೆ.

English summary :3 notorious thief arrested : Rs.8.5 worth jewelries and cash recovered

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...