Sun,May19,2024
ಕನ್ನಡ / English

ಬ್ರೇಕಿಂಗ್ : ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ನಿಧನ! | Janata news

22 Mar 2019
725

ಧಾರವಾಡ : ರಾಜ್ಯ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ (57) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಅನಾರೋಗ್ಯ ಪೀಡಿತರಾಗಿದ್ದ ಶಿವಳ್ಳಿ ಅವರನ್ನು ಆರಂಭದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತವಾಗಿತ್ತು ಎಂದು ಹೇಳಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಲೈಫ್‍ಲೈನ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಕಳೆದ ತಿಂಗಳ ಆರಂಭದಲ್ಲಷ್ಟೇ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಬಳಿಕ ಚೇತರಿಸಿಕೊಂಡು ಸರ್ಕಾರದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಫೆಬ್ರವರಿ 3ರಂದು ಹುಬ್ಬಳ್ಳಿಯ ಕರಡಿಕೊಪ್ಪ ಗ್ರಾಮದಲ್ಲಿ ಕೆಲಸ ಮುಗಿಸಿಕೊಂಡು ಮರಳುವ ಸಂದರ್ಭದಲ್ಲಿ ಅವರು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಟ್ಟಡ ಕುಸಿತ ದುರಂತದ ಬಳಿಕ ಹೆಚ್ಚಿನ ವಿಶ್ರಾಂತಿ ಪಡೆಯದೆ ಜವಾಬ್ದಾರಿ ನಿರ್ವಹಿಸಿದ್ದರು. ಪರಿಣಾಮ ಹೃದಯಘಾತ ಸಂಭವಿಸಿತ್ತು ಎಂಬ ಮಾಹಿತಿ ಲಭಿಸಿದೆ.

1962, ನವೆಂಬರ್ 12 ರಂದು ಜನಿಸಿದ ಶಿವಳ್ಳಿ ಅವರು ಕುಂದಗೋಳ ಕ್ಷೇತ್ರದಿಂದ 3 ಬಾರಿ ಶಾಸಕರಾಗಿದ್ದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟ ಪುನಾರಚನೆ ವೇಳೆ ಶಿವಳ್ಳಿ ಅವರನ್ನು ಸಚಿವರನ್ನಾಗಿ ನೇಮಿಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಗಾರುಡಿಯಲ್ಲಿ ಬೆಳೆದ ಶಿವಳ್ಳಿ ಅವರು ಅದ್ಭುತ ವಾಗ್ಮಿ, ಚತುರ ರಾಜಕಾರಣಿ ಎಂಬೆಲ್ಲ ಹೆಸರು ಪಡೆದಿದ್ದರು.

English summary : CS Shivalli died by heart attack

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...