Thu,May09,2024
ಕನ್ನಡ / English

ಕೇರಳದಲ್ಲಿ ಯುವಕನಿಗೆ ನಿಫಾ ವೈರಸ್​ ಸೋಂಕು ತಗುಲಿರುವುದು ದೃಢಪಟ್ಟಿದೆ! | Janata news

04 Jun 2019
698

ಕೇರಳ : ಕೇರಳದ 23 ವರ್ಷದ ಯುವಕನೋರ್ವನಲ್ಲಿ ಮಾರಣಾಂತಿಕ ನಿಫಾ ಸೋಂಕು ಪತ್ತೆಯಾಗಿದೆ.

ಕಳೆದ ಹತ್ತು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮೇ 30ರಂದು ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿರುವ 23 ವರ್ಷದ ವಿದ್ಯಾರ್ಥಿಗೆ ನಿಫಾ ವೈರಸ್​ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ವಿದ್ಯಾರ್ಥಿಯ ರಕ್ತದ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್​ಐವಿ)ಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಂಗಳವಾರ ಬೆಳಗ್ಗೆ ವರದಿ ಬಂದಿದ್ದು, ಯುವಕನಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಆತನ ಸ್ಥಿತಿ ಸ್ಥಿರವಾಗಿದೆ. ಯುವಕನಿಗೆ ಚಿಕಿತ್ಸೆ ನೀಡಿದ್ದ ಇಬ್ಬರು ನರ್ಸ್​ಗಳಿಗೆ ಜ್ವರ ಕಾಣಿಸಿಕೊಂಡಿದೆ. ನರ್ಸ್​ಗಳ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಶೈಲಜಾ ತಿಳಿಸಿದ್ದಾರೆ.

ರೋಗ ತಗುಲಿರುವ ಶಂಕೆ ಹಿನ್ನೆಲೆಯಲ್ಲಿ ಇತರ 86 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ. ಜನರು ಗಾಬರಿ ಪಡುವ ಅಗತ್ಯವಿಲ್ಲ. ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸೋಂಕಿನ ಕುರಿತು ಭೀತಿ ಹುಟ್ಟಿಸುವ ಮಾಹಿತಿಗಳನ್ನು ಹಂಚಬಾರದು ಎಂದು ಮನವಿ ಮಾಡಿದ್ದಾರೆ.

ಪ್ರಾಣಿಗಳಂದ ಮನುಷ್ಯರಿಗೆ ಹರಡುವ ನಿಫಾ ವೈರಾಣು, ತೀವ್ರ ಉಸಿರಾಟ ತೊಂದರೆ ಸೇರಿದಂತೆ ಮಿದುಳಿನ ಉರಿಯೂತದಂಥ ಗಂಭೀರ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಸೋಂಕಿತ 100 ಮಂದಿಯ ಪೈಕಿ 95 ಮಂದಿ ಸಾಯುವುದು ನಿಶ್ಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳಿದೆ.

English summary :Nipha Confirmed In Kerala; 23 Year Old Youth Confirmed With Deadly Nipha Virus

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...