Sun,May05,2024
ಕನ್ನಡ / English

ಆತ್ಮಹತ್ಯೆಗೆ ಮುನ್ನ ಫೇಸ್ ಬುಕ್ ಲೈವ್ ನಲ್ಲಿ ಬಾಲಾಕೋಟ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಉಗ್ರ! | Janata news

26 Jun 2019
856

ಇಸ್ಲಮಾಬಾದ್ : ಸ್ವತಃ ಪಾಕಿಸ್ತಾನದ ಪ್ರಜೆ ಹಾಗೂ ಮಾಜಿ ಜೈಷ್ ಉಗ್ರ ಫೇಸ್ ಬುಕ್ ಲೈವ್ ಮೂಲಕ ಪಾಕಿಸ್ತಾನದ ನಿಜ ಮುಖವಾಡದ ದರ್ಶನ ಮಾಡಿಸಿದ್ದಾನೆ.

ದಶಕಗಳಿಂದಲೂ ಉಗ್ರರನ್ನು ಪೋಷಣೆ ಮಾಡುತ್ತಾ ಬಂದಿರುವ ಪಾಕಿಸ್ತಾನ ಜಾಗತಿಕ ಸಮುದಾಯಕ್ಕೆ ಮಾತ್ರ ತಾನು ಉಗ್ರ ವಿರೋಧಿ ಎಂದು ಹೇಳಿಕೊಳ್ಳುತ್ತಿತ್ತು. ಉಗ್ರರೊಂದಿಗೆ ನಾವು ಕೈ ಜೋಡಿಸಿಲ್ಲ, ಉಗ್ರರ ದಮನಕ್ಕೆ ನಾವು ಕ್ರಮಕೈಗೊಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿತ್ತು.

ಇತ್ತೀಚೆಗೆ ಪಾಕ್​ ದೇಶದ ಪ್ರಜೆಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋವೊಂದನ್ನು ಶೇರ್​ ಮಾಡಿ ಪಾಕ್​ ಕರಾಳತೆಯನ್ನು ಬಿಚ್ಚಿಟ್ಟಿದ್ದಾನೆ. ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಭಯೋತ್ಪಾದನೆಯನ್ನು ಹರಡಲು ಪಾಕ್​ ಉಗ್ರರಿಗೆ ನೆರವಾಗಿ ನಿಂತಿದ್ದು, ಬೆಂಬಲ ನೀಡುತ್ತಿದೆ. ನಿಧಿಯನ್ನು ಸಂಗ್ರಹಿಸಿ ಉಗ್ರ ಕೃತ್ಯಕ್ಕೆ ವಿನಿಯೋಗ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾನೆ.
ರಾಣಾ ಪಾಕ್​ನ ಮಾಜಿ ಯೋಧ ಹಾಗೂ ಜೈಷ್​ ಇ ಮೊಹಮ್ಮದ್​ ಸಂಘಟನೆಯ ಜಿಹಾದಿಸ್ಟ್​. ತಾನು ಅಪ್​ಲೋಡ್​ ಮಾಡಿರುವ 42 ಸೆಂಕೆಡಿನ ವಿಡಿಯೋ ಸಂದೇಶದಲ್ಲಿ ಪಾಕಿಸ್ತಾನಿ ಸೇನೆ ಯುವಕರನ್ನು ಜಿಹಾದ್​ ಕಡೆ ಪ್ರಚೋದಿಸುತ್ತದೆ ಎಂಬ ಕರಾಳತೆಯನ್ನು ಬಿಚ್ಚಿಟ್ಟಿದ್ದಾನೆ.

ವಿಡಿಯೋದಲ್ಲಿ ಪಾಕಿಸ್ತಾನದ ಬಾಲಾಕೋಟ್ ​ನಲ್ಲಿನ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಯ ವಿರುದ್ಧ ಭಾರತ ನಡೆಸಿದ ವೈಮಾನಿಕ ದಾಳಿಯ ಕುರಿತು ಮಾತನಾಡಿರುವ ರಾಣಾ, ಬಾಲಾಕೋಟ್ ನಲ್ಲಿ ಉಗ್ರರ ಕ್ಯಾಂಪ್​ ಇಲ್ಲ ಎಂಬ ಪಾಕ್​ ವಾದವನ್ನೇ ತಳ್ಳಿಹಾಕಿದ್ದಾನೆ. ಬಾಲಾಕೋಟ್ ನಲ್ಲಿ ಜೆಇಎಂ ಉಗ್ರ ತರಬೇತಿ ಕೇಂದ್ರಗಳನ್ನು ಹೊಂದಿದ್ದು, ಭಾರತದೊಳಗೆ ಉಗ್ರರನ್ನು ಕಳುಹಿಸಲು ಅಲ್ಲಿ ತಯಾರಿ ನಡೆಯುತ್ತಿರುತ್ತದೆ. ಅಲ್ಲದೇ ವಿಶ್ವದೆಲ್ಲಡೆ ದಾಳಿಗಳನ್ನು ನಡೆಸಲು ಸಂಚು ರೂಪಿಸಲಾಗುತ್ತದೆ ಎಂದು ಬಹಿರಂಗಪಡಿಸಿದ್ದಾನೆ.

ನನ್ನ ತಂದೆಯ ಮನವಿಯ ಮೇರೆಗೆ ನಾನು ಭಯೋತ್ಪಾದನೆಯನ್ನು ಬಿಟ್ಟು ಮುಖ್ಯವಾಹಿನಿಗೆ ಮರಳಿದೆ. ಇಸ್ಲಾಂ ಹೆಸರಿನಲ್ಲಿ ಸೇನೆ ಪಾಕ್​ನಲ್ಲಿ ವಿಷಬೀಜವನ್ನು ಬಿತ್ತುತ್ತಿದೆ. ಆದರೆ, ಪಾಕ್​ನಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವಂತೆ ಅಂತಾರಾಷ್ಟ್ರೀಯ ಸಮುದಾಯಗಳ ಮುಂದೆ ಮನವಿ ಮಾಡುವುದು ನಾಚಿಕೆಗೇಡಿನ ಸಂಗತಿ ಎಂದು ತಮ್ಮ ದೇಶದ ವ್ಯವಸ್ಥೆಯ ಬಗ್ಗೆ ಮಾತನಾಡಿದ್ದಾನೆ. ಪಾಕ್ ಸೇನೆ ಉಗ್ರವಾದಿಗಳೊಂದಿಗೆ ಶಾಮೀಲಾಗಿ ಭಾರತದ ಮೇಲೆ ಜಿಹಾದ್ ನಡೆಸುತ್ತಿದೆ ಎಂದು ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಈ ಯೋಧ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ.


English summary :A young Pakistani activist Rana Jawed goes live on Facebook before he commits suicide.

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...