ಗ್ರಾಮ ವಾಸ್ತವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ ಕುಮಾರಸ್ವಾಮಿ | Janata news
ಬೀದರ್ : ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಉಜಳಂಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವುದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ ಎಂದು ಅವರು ತಿಳಿಸಿದರು. ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದರು.
ಜನತಾ ದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ. ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.