Sun,May19,2024
ಕನ್ನಡ / English

ಶಾಸಕರಾದವರಿಗೆ ರಾಜೀನಾಮೆ ಯಾರಿಗೆ, ಹೇಗೆ ಕೊಡಬೇಕು ? ಎಂಬ ಅರಿವು ಇರಬೇಕು: ಆನಂದ್ ಸಿಂಗ್ ವಿರುದ್ಧ ಸ್ಪೀಕರ್ ಕೆಂಡಾಮಂಡಲ | Janata news

03 Jul 2019
627

ಬೆಂಗಳೂರು : ಶಾಸಕರಾದವರಿಗೆ ಯಾರಿಗೆ ರಾಜೀನಾಮೆ ಕೊಡಬೇಕು ಎಂಬ ತಿಳುವಳಿಕೆ ಇರಬೇಕು. ರಾಷ್ಟ್ರಪತಿಗೆ ಬೇಕಾದರೂ ಕೊಡಲಿ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್‍ಸಿಂಗ್ ಅವರು ರಾಜ್ಯಪಾಲರನ್ನು ಭೇಟಿಯಾದ ಬಗ್ಗೆ ಗಮನ ಸೆಳೆದಾಗ ಬಿಡುವಿದ್ದರೆ ದೆಹಲಿಗೂ ಹೋಗಿ ರಾಷ್ಟ್ರಪತಿಗೂ ಕೊಡಲಿ. ಯಾರೇ ಒಬ್ಬ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಕಾನೂನು ರೀತಿ ನಿಯಮಾವಳಿಗಳನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.

ಇಬ್ಬರು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಎಂದು ಯಾರು ಹೇಳಿದ್ದಾರೆ ? ಅಧಿಕೃತವಾಗಿ ಒಬ್ಬ ಶಾಸಕರು ಮಾತ್ರ ರಾಜೀನಾಮೆ ಕೊಟ್ಟಿದ್ದಾರೆ. ಅದನ್ನು ಪರಿಶೀಲಿಸುತ್ತೇನೆ, ಜನರಿಗೆ ಶಾಸಕರ ವರ್ತನೆ ಇಷ್ಟ ಆಗದಿದ್ದಲ್ಲಿ ಅವರನ್ನು ತಿರಸ್ಕರಿಸುವ ಅವಕಾಶ ಸಂವಿಧಾನದಲ್ಲಿ ಇಲ್ಲ. ಕರ್ನಾಟಕ ವಿಧಾನಸಭೆಯ ಸದಸ್ಯರಾಗಿರುವ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅದರ ಬಗ್ಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಯಾರು ಬೇಕಾದರೂ ಆಕ್ಷೇಪ ವ್ಯಕ್ತಪಡಿಸಬಹುದು.

ಆನಂದ್‍ಸಿಂಗ್ ಅವರು ರಾಜೀನಾಮೆ ನೀಡಿರುವ ಪತ್ರ ತಲುಪಿದೆ. ಅವರು ಒಂದು ಪಕ್ಷದ ಶಾಸಕರಾಗಿದ್ದಾರೆ. ಆ ಪಕ್ಷದ ಹಾಗೂ ಜನರ ಆಕ್ಷೇಪವೇನಾದರೂ ಇದೆಯೋ ಗೊತ್ತಿಲ್ಲ. ರಾಜೀನಾಮೆಗೆ ಕಾರಣವೂ ಗೊತ್ತಿಲ್ಲ. ಚುನಾಯಿತ ಪ್ರತಿನಿಧಿಯ ನಡವಳಿಕೆ ಇಷ್ಟವಾಗದಿದ್ದರೆ ಅವರನ್ನು ವಾಪಸ್ ಕಳುಹಿಸುವ ಅವಕಾಶವೂ ಇಲ್ಲ ಎಂದು ತಿಳಿಸಿದರು.

ರಾಜೀನಾಮೆ ಕೊಟ್ಟ ಬಳಿಕ ಆನಂದ ಸಿಂಗ್ ರಾಜ್ಯಪಾಲರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಪರಮಾಧಿಕಾರ ಇಲ್ಲ. ನನಗೆ ಜವಾಬ್ದಾರಿ ಇದೆ, ಶಾಸಕರಾದವರಿಗೆ ರಾಜೀನಾಮೆ ಯಾರಿಗೆ ಕೊಡಬೇಕು ? ಹೇಗೆ ಕೊಡಬೇಕು ? ಎಂಬ ಅರಿವು ಇರಬೇಕು. ಆ ಬಗ್ಗೆ ಅವರಿಗೆ ತಿಳುವಳಿಕೆಯೇ ಇಲ್ಲ ಎಂದರೆ ಅದು ನಮ್ಮ ಹಣೆಬರಹ, ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟಿದ್ದಾರೆ ಅಂದರೆ ಬೇರೆ ಉದ್ದೇಶ ಇರಬೇಕು. ಸಮಯ ಇದ್ದರೆ ರಾಷ್ಟ್ರಪತಿಯವರನ್ನೂ ಭೇಟಿಮಾಡಿ ರಾಜೀನಾಮೆ ಕೊಡಲಿ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೆ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದರು.

English summary :Speaker Ramesh Kumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...