Thu,May09,2024
ಕನ್ನಡ / English

ನಾನು ನಾನ್​ವೆಜ್​ ತಿನ್ನುವುದನ್ನೇ ಬಿಟ್ಟಿದ್ದೇನೆ, ನಾನು ಬಿರಿಯಾನಿ ತಿಂದಿಲ್ಲ: ಎಚ್‌ಡಿ ಕುಮಾರಸ್ವಾಮಿ | Janata news

22 Jul 2019
779

ಬೆಂಗಳೂರು : ನನಗೂ ಬಿರಿಯಾನಿ ಕಥೆಗೂ ಯಾವುದೇ ಸಂಬಂಧಗಳಿಲ್ಲ ಎಂದು ಐಎಂಎ ಪ್ರಕರಣದ ಕುರಿತು ಸಿಎಂ ಕುಮಾರಸ್ವಾಮಿ ಸದನದಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.

ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಕೃಷ್ಣ ಬೈರೇಗೌಡ ಐಎಂಎ ಹಗರಣದ ಕುರಿತು ವಿಷಯ ಪ್ರಸ್ತಾಪ ಮಾಡಿದರು.

ಐಎಂಎ ಕಂಪನಿಯ ಬಗ್ಗೆ ಹಿಂದೊಮ್ಮೆ ದೂರು ಹೋಗಿತ್ತು. ಯಾರ ಕೈಯ್ಯಲ್ಲಿ ಸರ್ಕಾರವಿತ್ತೋ, ಯಾರ ಬಳಿ ಗುಪ್ತಚರ ಇಲಾಖೆಯಿತ್ತೋ ಅವರು ತನಿಖೆ ನಡೆಸಿ, ಕಂಪನಿಗೆ ಕ್ಲೀನ್​ಚಿಟ್​ ಕೊಟ್ಟು ಕಳಿಸಿದರು. ಅಂದು ಕ್ಲೀನ್​ ಚಿಟ್​ ತೆಗೆದುಕೊಂಡವನು ಇಂದು ಜೈಲಿನಲ್ಲಿದ್ದಾನೆ. ಆದರೆ, ಹಿಂದೆ ಕ್ಲೀನ್​ಚಿಟ್​ ಕೊಟ್ಟು, 46 ಸಾವಿರ ಕುಟುಂಬಗಳನ್ನು ಬೀದಿಗೆ ತಂದ ಪಾಪದ ಹೊಣೆ ಅವನ ಜತೆ ಕುಳಿತು ಬಿರ್ಯಾನಿ ತಿಂದವರದ್ದು. ಹಾಗೆ ಬಿರ್ಯಾನಿ ತಿಂದವರು ಯಾರು ಎಂಬುದನ್ನೂ ಕೃಷ್ಣಭೈರೇಗೌಡರು ಹೇಳಿಬಿಡಲಿ. ಬಿರಿಯಾನಿ ತಿಂದವರು ಉತ್ತರ ಕೊಡಬೇಕು ಎಂದು ಬಿಜೆಪ ಸದಸ್ಯ ಸಿ. ಟಿ. ರವಿ ಮಧ್ಯ ಕಾಲೆಳೆದರು.

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಸ್ವಯಂ ಪ್ರೇರಿತವಾಗಿ ಮಾತನಾಡಲು ಎದ್ದು ನಿಂತರು. ಸಿ. ಟಿ. ರವಿ ಬಿರಿಯಾನಿ ತಿಂದವರು ಎಂದು ಪರೋಕ್ಷವಾಗಿ ನನ್ನನ್ನೇ ಉಲ್ಲೇಖಿಸಿದ್ದು ಎಂದು ಮಾತು ಆರಂಭಿಸಿದರು. ಶಾಸಕರೊಬ್ಬರು ಬಂದು ರಂಜಾನ್‌ ಹಬ್ಬದ ಇಫ್ತಾರ್‌ ಕೂಟಕ್ಕೆ ಕರೆದೊಯ್ದರು. ನಾನು ಮೊದಲ ಬಾರಿಗೆ ಅಲ್ಲಿಗೆ ಹೋಗಿದ್ದೆ. ಅವರನ್ನು ಮೊದಲ ಸಲ ನಾನು ನೋದಿದ್ದು.

ಅಧ್ಯಕ್ಷರೇ ನಾನು ಬಿರಿಯಾನಿ ತಿಂದಿಲ್ಲ. 2ನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆದ ಬಳಿಕ ಮಾಂಸಾಹಾರ ಸೇವೆನೆ ಬಿಟ್ಟಿದ್ದೇನೆ. ಅಂದು ಅಲ್ಲಿ ಖರ್ಜೂರವೊಂದನ್ನು ಬಾಯಿಗೆ ಹಾಕಿಕೊಂಡಿದ್ದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಆದರೆ ಈ ಬಗ್ಗೆ ವಾಟ್ಸಾಪ್‌ನಲ್ಲಿ ಫೋಟೋ ಹರಿದಾಡುತ್ತಿದೆ. ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪ ಬಳಿಕ ನಾನೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಮ್ಮ ಅಧಿಕಾರಿಗಳು ಅವರನ್ನು ಯಶಸ್ವಿಯಾಗಿ ಬಂಧಿಸಿ, ಕರೆತಂದಿದ್ದಾರೆ. ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿ. ಯಾರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನುವುದು ಬೇರೆ ವಿಚಾರ. ಆದರೆ ಇಲ್ಲಿ ಬಿರಿಯಾನಿ ಕಥೆ ನಡೆದಿಲ್ಲ. ಬಡವರ ಹಣ ಹೊಡೆಯುವವರಿಗೆ ರಕ್ಷಣೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದರು.

English summary :Cm Hd Kumaraswamy In Assembly

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...