Sun,May19,2024
ಕನ್ನಡ / English

ಗುಪ್ತಾಂಗಕ್ಕೆ ಸ್ಕ್ರೂ ಡ್ರೈವರ್‌ನಿಂದ ಇರಿತ – ಐಸಿಯುನಲ್ಲಿದ್ದ ಯುವತಿ ಸಾವು | Janata news

24 Sep 2019
743

ಚಿಕ್ಕಮಗಳೂರು : ಐದು ದಿನಗಳ ಹಿಂದೆ ಭಗ್ನ ಪ್ರೇಮಿಯಿಂದ ಇರಿತಕ್ಕೊಳಗಾಗಿದ್ದ 23 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಬಿಂದು(23) ಮೃತಪಟ್ಟ ಯುವತಿ. ಬಿಂದು ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಸಾಪುರದ ನಿವಾಸಿಯಾಗಿದ್ದು, ಮಿಥುನ್ ಬಾಳೆಹೊನ್ನೂರಿನ ಗಡಿಗೇಶ್ವರದ ನಿವಾಸಿ ಆಕೆಗೆ ಚಾಕುವಿನಿಂದ ಇರಿದಿದ್ದ.

ಮಿಥುನ್ ಮತ್ತು ಮೃತ ಯುವತಿ ಬಿಂದು ಇಬ್ಬರು ಕ್ಲಾಸ್ ಮೇಟ್ಸ್ ಆಗಿದ್ದರು, 10ನೇ ತರಗತಿ ವರೆಗೂ ಜೊತೆಗೆ ಓದಿದ್ದರು.ಬಳಿಕ ಬಿಂದು ಫೇಸ್‍ಬುಕ್‍ನಲ್ಲಿ ಆರೋಪಿ ಮಿಥುನ್ ಜೊತೆ ಸ್ನೇಹ ಬೆಳೆಸಿಕೊಂಡಿದ್ದಳು. ಬಿಂದು ಯಾವಾಗಲೂ ಮಿಥುನ್‍ನನ್ನು ಕ್ಲೋಸ್ ಫ್ರೆಂಡ್ ಎಂದು ಹೇಳುತ್ತಿದ್ದಳು. ಮಿಥುನ್ ಯುವತಿಯನ್ನು ತುಂಬಾ ಪ್ರೀತಿಸುತ್ತಿದ್ದನು ಎನ್ನಲಾಗಿದೆ.

ಕಳೆದ 5 ದಿನದ ಹಿಂದೆ ಬಿಂದು ತನ್ನ ಫೇಸ್‍ಬುಕ್ ಗೆಳೆಯ ಮಿಥುನ್ ಜೊತೆ ಜಾಲಿ ರೇಡ್‍ಗೆ ಹೋಗಿದ್ದಾಳೆ. ಇಬ್ಬರು ಕಳಸ, ಹೊರನಾಡು ಹೋಗಿ ಹಿಂತಿರುಗಿ ಬರುವಾಗ ಕಗ್ಗನಹಳ್ಳದ ಬಳಿ ಭದ್ರಾ ನದಿ ದಂಡೆ ಮೇಲೆ ಕೂತು ಮಾತನಾಡುತ್ತಿದ್ದರು. ಈ ವೇಳೆ ಬಿಂದು ತನ್ನ ಮಾಜಿ ಗೆಳೆಯನ ಬಗ್ಗೆ ಹೇಳಿಕೊಂಡಿದ್ದಾಳೆ. ಮಾಜಿ ಪ್ರಿಯಕರನ ಹೆಸರು ಹೇಳುತ್ತಿದ್ದಂತೆಯೇ ಆಕೆಯನ್ನು ಹುಚ್ಚನಂತೆ ಪ್ರೀತಿಸುತ್ತಿದ್ದ ಮಿಥುನ್ ಕೋಪ ನೆತ್ತಿಗೇರಿದೆ.
ಮಿಥುನ್ ಆಕೆಯನ್ನು ದಂಡೆಯಿಂದ ಭದ್ರಾ ನದಿಗೆ ನೂಕಿದ್ದಾನೆ. ಆಕೆ ಎದ್ದು ಬರುವಾಗ ಮನಸ್ಸೋ ಇಚ್ಛೆ ಕಲ್ಲು ಎಸೆದಿದ್ದಾನೆ. ನಂತರ ಸ್ಕ್ರೂ ಡ್ರೈವರ್ ನಿಂದ ಆಕೆಯ ಹೊಟ್ಟೆ ಮತ್ತು ಖಾಸಗಿ ಭಾಗಗಳಿಗೆ ಚುಚ್ಚಿ ಅಲ್ಲಿಂದ ಪರಾರಿಯಾಗಿದ್ದನು. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಂದುಗೆ ಚಾಕುವಿನಿಂದ ಇರಿದಿದ್ದ ಮಿಥುನ್ ಆ ನಂತರ ನಾಪತ್ತೆಯಾಗಿದ್ದ. ಆ ಮೇಲೆ ತಾನಾಗಿಯೇ ಬಂದು ಪೊಲೀಸರಿಗೆ ಶರಣಾಗಿದ್ದ.

ಯುವತಿಯನ್ನು ಮೊದಲು ಚಿಕ್ಕಮಗಳೂರು ಹಾಗೂ ಹಾಸನದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಬಿಂದು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಕಾರಣ ಆಕೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

English summary :Chikkamangaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...