Sun,May19,2024
ಕನ್ನಡ / English

ಪಶು ವೈದ್ಯೆ ಅತ್ಯಾಚಾರ: ಆರೋಪಿಗಳನ್ನು ಎನ್‌ ಕೌಂಟರ್‌ ಮಾಡಿದ ಹೆಮ್ಮೆಯ ಹುಬ್ಬಳ್ಳಿ ಕನ್ನಡಿಗ ಪೊಲೀಸ್‌ ಅಧಿಕಾರಿ! | Janata news

06 Dec 2019
728

ಹೈದರಾಬಾದ್ : ಇಡಿ ದೇಶವನ್ನೇ ತಲ್ಲಣ ಗೊಳಿಸಿದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಲಾಗಿದೆ.ಈ ಬಗ್ಗೆ ಹೈದ್ರಾಬಾದ್​ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಪಶುವೈದ್ಯೆ ಹತ್ಯೆಯ ದಿನ ನಡೆದ ಘಟನೆಯ ಮರುಸೃಷ್ಠಿಗೆ ಪೊಲೀಸರು ಮುಂದಾಗಿದ್ದರು. ಆರೋಪಿಗಳ ವಿರುದ್ಧ ಸಾಕ್ಷ್ಯ ಸಂಗ್ರಹಕ್ಕೆ ಮರುಸೃಷ್ಠಿ ಅಗತ್ಯ. ಈ ಹಿನ್ನೆಲೆ ಪೊಲೀಸರು ಆರೋಪಿಗಳನ್ನ ಸ್ಥಳಕ್ಕೆ ಕರೆತಂದಿದ್ರು. ಈ ಸಂದರ್ಭದಲ್ಲಿ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಷ್ಟೆ ಅಲ್ಲದೆ, ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದರಿಂದ ಎನ್​​ಕೌಂಟರ್​ ಮಾಡಬೇಕಾಯ್ತು ಅಂತಾ ಐಪಿಎಸ್​ ಅಧಿಕಾರಿ ವಿ.ಸಿ. ಸಜ್ಜನರ್ ತಿಳಿಸಿದ್ದಾರೆ.

ಎನ್ಕೌಂಟರ್ ಮಾಡಿದ ಪೊಲೀಸ್ ಆಯುಕ್ತರು ಕರ್ನಾಟಕದ ಹುಬ್ಬಳ್ಳಿ ಮೂಲದವರು ಎನ್ನುವುದು ವಿಶೇಷ. ಎನ್‌ಕೌಂಟರ್‌ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸಜ್ಜನರ್ ಈ ಹಿಂದೆ ವಾರಂಗಲ್​ ಆಯಸಿಡ್ ಅಟ್ಯಾಕ್​ನ ಆರೋಪಿಗಳ ಶೂಟೌಟ್​​ನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

2008ರಲ್ಲಿ 3 ಯುವಕರು, ಇಬ್ಬರು ಇಂಜಿನಿಯರಿಂಗ್​ ವಿದ್ಯಾರ್ಥಿನಿಯರ ಮೇಲೆ ಆಯಸಿಡ್​ ಅಟ್ಯಾಕ್​ ಮಾಡಿದ್ದರು. ಘಟನೆ ನಡೆದ ಬಳಿಕ ಆರೋಪಿಗಳನ್ನ ಸ್ಥಳಕ್ಕೆ ಕರೆದೊಯ್ದಿದ್ದ ವೇಳೆ, ಆರೋಪಿಗಳು ಪೊಲೀಸರ ಮೇಲೆಯೇ ಕಂಟ್ರಿ ಮೇಡ್​ ಪಿಸ್ತೂಲ್​ನಿಂದ ಶೂಟ್​ ಮಾಡಲು ಮುಂದಾಗಿದ್ದರು. ಈ ವೇಳೆ ಆತ್ಮರಕ್ಷಣೆಗಾಗಿ ಮೂರು ಜನ ಆರೋಪಿಗಳನ್ನ ಸಜ್ಜನರ್​ ಟೀಂ, ಶೂಟೌಟ್​ ಮಾಡಿತ್ತು.

ಎನಕೌಂಟರ್ ಸ್ಪೆಷಲಿಸ್ಟ್ ವಿಶ್ವನಾಥ ಸಜ್ಜನರ್ ಮೂಲತಃ ಹುಬ್ಬಳ್ಳಿಯ ಪಗಣಿ ಓಣಿಯವರು. ತಂದೆ ಚನ್ನಬಸಪ್ಪ ಬಿ ಸಜ್ಜನ್, ಟ್ಯಾಕ್ಸ್‌ ಕನ್ಸಲ್ಟಂಟ್ ಆಗಿ ಕೆಲಸ‌ ಮಾಡುತ್ತಿದ್ದರು. ಮೂರು ಜನ ಮಕ್ಕಳ‌ ಪೈಕಿ ವಿಶ್ವನಾಥ ಸಜ್ಜನರ್ ಕಿರಿಯರು. ಕಳೆದ ಒಂದೂವರೆ ವರ್ಷಗಳ ಹಿಂದೆ ಇವರು ಸೈಬರಾಬಾದ್ನಲ್ಲಿ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದರು.

ವಿಶ್ವನಾಥ ಸಜ್ಜನರ್, ಹುಬ್ಬಳ್ಳಿಯ ಲಾಯ್ಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿದ್ದರು. ಬಳಿಕ ಜೆಜಿ ಕಾಮರ್ಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಪೂರೈಸಿ, ಕರ್ನಾಟಕದ ವಿಶ್ವವಿದ್ಯಾಲಯದಲ್ಲಿ ಕೌಶಾಳಿಯಲ್ಲಿ ಎಂಬಿಎ ವ್ಯಾಸಂಗ ನಡೆಸಿದ್ದಾರೆ. 1989 MBA ಪದವಿ ಗಳಿಸಿದ ಸಜ್ಜನರ್, 1996 ಯುಪಿಎಸ್ಇ ಪರೀಕ್ಷೆ ತೇರ್ಗಡೆ ಹೊಂದಿದ್ದರು. ಬಳಿಕ ಆಂದ್ರ ಪ್ರದೇಶದ ಕೇಡರ್ ಅಧಿಕಾರಿಯಾಗಿ ಸೇವೆಗೆ ನಿಯುಕ್ತಿ.

ಇಂದು ನಡೆದಿರುವ ಎನ್ ಕೌಂಟರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರತಿಕ್ರಿಯೆಗಳು ಬರುತ್ತಿದ್ದು, ಪೊಲೀಸರ ಈ ಕ್ರಮಕ್ಕೆ ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

English summary :Telangana rape case: All 4 accused killed in police encounter

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...