Wed,May22,2024
ಕನ್ನಡ / English

ಮಂಗಳೂರು ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ | Janata news

19 Dec 2019
614

ಮಂಗಳೂರು : ನಗರದ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದಿನಿಂದ ನಾಳೆ ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ಎನ್‌ಆರ್‌ಸಿ ಹಾಗೂ ಸಿಎಎ ಜಾರಿ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಮಂಗಳೂರಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಚ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ನಗರದಲ್ಲಿ ಪ್ರತಿಭಟನೆ ನಿಯಂತ್ರಣಕ್ಕೆ ಬರುವವರೆಗೆ ಸನ್ನಿವೇಶವನ್ನು ಹೊಂದಿಕೊಂಡು ನಗರದಲ್ಲಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆ ಇರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಿನಾಂಕ 20-12-2019ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಐಟಿಐ, ಡಿಪ್ಲೊಮಾ, ವೃತ್ತಿಪರ ಕೋರ್ಸ್, ಪದವಿ ತರಗತಿಯೂ ಸೇರಿ) ಒಂದು ದಿನದ ಮಟ್ಟಿಗೆ ರಜೆ ಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

English summary :Mangalore

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...