Mon,May06,2024
ಕನ್ನಡ / English

ಕ್ರೈಸ್ತ ಮತಾಂತರ ಹೊಂದವರಿಗೆ ಮಾತ್ರ ಕಾಂಗ್ರೆಸ್ ದಲ್ಲಿ ಇಟಲಿಯಮ್ಮ ಮಣೆ ಹಾಕುವುದು : ಅನಂತಕುಮಾರ್ ಹೆಗಡೆ | Janata news

27 Dec 2019
1012

ಶಿರಸಿ : ಇಲ್ಲೊಬ್ಬ ತಿಹಾರ್ ರಿಟರ್ನ್ಡ್ ಮಹನೀಯರೊಬ್ಬರು, ಯಾವುದೋ ಹುದ್ದೆಯ ಆಸೆಯೊಂದಿಗೆ, ಅವರ ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಅತಿ ದೊಡ್ಡ ಯೇಸುವಿನ ಪ್ರತಿಮೆ ಸ್ಥಾಪಿಸಿ ತಮ್ಮ ಪೌರುಷವನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ. ಓಲೈಕೆ ರಾಜಕೀಯಕ್ಕೆ ಪೈಪೋಟಿ ನೀಡಲು ಕಾಂಗ್ರೆಸ್ ದಲ್ಲಿ ಇನ್ನು ಹೆಚ್ಚಿನ ಗುಲಾಮರು ಅಖಾಡಕ್ಕೆ ಇಳಿದರು ಅಚ್ಚರಿಯಿಲ್ಲ, ಎಂದು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಟ್ವೀಟ್ ಮಾಡಿ, ಡಿಕೆಶಿ ಹಾಗೂ ಕಾಂಗ್ರೆಸ್ ಅಧಿನಾಯಕಿಯಾದ ಸೋನಿಯಾಗಾಂಧಿಯವರ ಮೇಲೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಲುಸಾಲು ಟ್ವೀಟ್ ಮಾಡಿ ತರಾಟೆ ತೆಗೆದುಕೊಂಡ ಹೆಗಡೆ ಅವರು, ಕ್ರೈಸ್ತರಾಗಿ ಮತಾಂತರ ಹೊಂದಿದವರಿಗೆ ಮಾತ್ರ ಕಾಂಗ್ರೆಸ್ ದಲ್ಲಿ ಇಟಲಿಯಮ್ಮ ಮಣೆ ಹಾಕುವುದು. ಈ ಸಂಪ್ರದಾಯ ಅರಿಯದ ಆ ಪಕ್ಷದ ಬಾಕಿ ನಾಯಕರು, ಈಗಲಾದರೂ ಆತ್ಮ-ಸಾಕ್ಷಿ ಇದ್ದಲ್ಲಿ ತಮ್ಮ ಗುಲಾಮಿ ಮನೋಭಾವವನ್ನು ತಿರಸ್ಕರಿಸಿ ಆ ಪಕ್ಷದ ವ್ಯವಸ್ಥೆಯನ್ನು ಧಿಕ್ಕರಿಸಿ ಹೊರ ಬರಲಿ, ಎಂದು ವಾಗ್ದಾಳಿ ನಡೆಸಿದ್ದಾರೆ.

114 ಅಡಿ ಯೇಸುಕ್ರಿಸ್ತ ಪ್ರತಿಮೆ ನಿರ್ಮಾಣ
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿಬೆಟ್ಟದ ಹತ್ತು ಎಕರೆ ಜಾಗವನ್ನು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಸ್ವಂತ ಹಣವನ್ನು ಕಟ್ಟಿ ಸರಕಾರದಿಂದ ಪಡೆದು, ಯೇಸುಕ್ರಿಸ್ತ ಪ್ರತಿಮೆ ನಿರ್ಮಾಣವಾಗುತ್ತಿರುವ ಪ್ರತಿಮೆ ನಿರ್ಮಾಣ ಟ್ರಸ್ಟ್ ನವರಿಗೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಕಳೆದ ಬುಧವಾರ ಕ್ರಿಸ್ಮಸ್ ದಿನದಂದು ಹಸ್ತಾಂತರಿಸಿದ್ದರು.

ಈ ಸಂದರ್ಭದಲ್ಲಿ ಈ ಕಪಾಲಿಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲೆ ಯೇಸುಕ್ರಿಸ್ತರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸವನ್ನು ಡಿ.ಕೆ. ಶಿವಕುಮಾರ್ ಅವರು ನೆರವೇರಿಸಿದ್ದರು.

ಹಾಗೂ ಹಾರೋಬೆಲೆ ಗ್ರಾಮದಲ್ಲಿ ಶೇಕಡಾ 99 ರಷ್ಟು ಮಂದಿ ಕ್ರೈಸ್ತ ಸಮುದಾಯದವರಿದ್ದು, ಈ ಪವಿತ್ರ ಕಾರ್ಯದ ಅನುಷ್ಠಾನಕ್ಕೆ ಕಾರಣೀಭೂತರಾದ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಸಹೋದರರಿಗೆ ಕೃತಜ್ಞತೆ ಸಲ್ಲಿಸಿದರು, ಎಂದು ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ ಫೇಸ್ಬುಕ್ ಅಕೌಂಟ್ ನಲ್ಲಿ ಹೇಳಿಕೊಂಡಿದ್ದರು.

English summary :In Congress Italiyamma will give seat to only who gets converted as Christian : Anantkumar Hegde

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...