Sat,May18,2024
ಕನ್ನಡ / English

ಖ್ಯಾತ ಸಾಹಿತಿ ಡಾ. ಎಂ ಚಿದಾನಂದಮೂರ್ತಿ ಇನ್ನಿಲ್ಲ! ಗಣ್ಯರ ಸಂತಾಪ | Janata news

11 Jan 2020
718

ಬೆಂಗಳೂರು : ಹಿರಿಯ ಸಾಹಿತಿ, ಲೇಖಕ ಸಂಶೋಧಕ ಡಾ. ಎಂ ಚಿದಾನಂದಮೂರ್ತಿ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೂರ್ತಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಹಿರಿಯ ಸಾಹಿತಿ ಚಿಮೂ ನಿಧನಕ್ಕೆ ಸಿಎಂ ಬಿ.ಎಸ್​. ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್​​ ಮಾಡಿರುವ ಸಿಎಂ ಯಡಿಯೂರಪ್ಪ ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರಾತ್ಮಕ್ಕೆ ಶಾಂತಿ ದೊರಕಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಡಾ.ಎಂ.ಚಿದಾನಂದ ಮೂರ್ತಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು ಹಿರಿಯ ಸಂಶೋಧಕ, ಕನ್ನಡ ಗರುಡ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ. ಕನ್ನಡ ಶಕ್ತಿ ಕೇಂದ್ರ ಸ್ಥಾಪಿಸಿದ್ದ ಚಿಮೂ ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡು ನುಡಿ ಜಲಕ್ಕಾಗಿ ಶ್ರಮಿಸಿದ್ದರು. ಮೃತರ ಕುಟುಂಬ ಸದಸ್ಯರಿಗೆ, ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು. ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂ, ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಡಾ.ಎಂ.ಚಿದಾನಂದ ಮೂರ್ತಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು ಖ್ಯಾತ ಸಂಶೋಧಕ, ಇತಿಹಾಸಜ್ಞ, ಸತ್ಯನಿಷ್ಠ ಹೋರಾಟಗಾರ, ವಚನ ಸಾಹಿತ್ಯ, ಶಾಸನ, ಭಾಷಾಶಾಸ್ತ್ರದ ವಿದ್ವಾಂಸ ಡಾ. ಎಂ. ಚಿದಾನಂದ ಮೂರ್ತಿ ಅವರ ಅಗಲಿಕೆಯು ಕನ್ನಡ ಸಾರಸ್ವತ ಲೋಕದಲ್ಲಿ ಶೂನ್ಯವನ್ನು ಸೃಷ್ಟಿಸಿದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಉಂಟುಮಾಡಲಿ, ಅವರ ಕುಟುಂಬದವರಿಗೆ ಹಾಗೂ ಅಸಂಖ್ಯಾತ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದರು.

English summary :Bangalore

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...