Sat,May04,2024
ಕನ್ನಡ / English

ರಶ್ಮಿಕಾ ಮಂದಣ್ಣಗೆ ಐಟಿ ನೋಟಿಸ್​: ಜ.21ರಂದು ವಿಚಾರಣೆಗೆ ಹಾಜರಾಗಲು ಸೂಚನೆ! | Janata news

18 Jan 2020
925

ಬೆಂಗಳೂರು : ಕೊಡಗು ವಿರಾಜಪೇಟೆಯಲ್ಲಿರುವ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರೀಶಿಲನೆ ನಡೆಸಿದ್ದರು. ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು(ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್ ಜಾರಿ ಮಾಡಿದೆ.

ಐಟಿ ಅಧಿಕಾರಿಗಳು ರಶ್ಮಿಕಾ ಮಂದಣ್ಣ , ಅವರ ತಂದೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಅವರಿಗೆ ಪ್ರತ್ಯೇಕವಾಗಿ ನೋಟಿಸ್ ಜಾರಿ ಮಾಡಿದ್ದು, ಬೆಂಗಳೂರಿನಲ್ಲಿರುವ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಕಿರಿಕ್​ ಪಾರ್ಟಿ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ ಪ್ರವೇಶಿಸಿದ ರಶ್ಮಿಕಾ ಮಂದಣ್ಣ, ನಂತರ ಟಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡರು. ಆಫರ್​ಗಳು ಹೆಚ್ಚಿದಂತೆ ಅವರ ಸಂಭಾವನೆಯೂ ಹೆಚ್ಚಿದೆ. ಈ ಕಾರಣಕ್ಕೆ ಐಟಿ ದಾಳಿ ನಡೆದಿದೆ ಎನ್ನಲಾಗಿತ್ತು. ಶೋಧ ಕಾರ್ಯ ಪೂರ್ಣಗೊಂಡಿದ್ದು, ಐಟಿ ನೋಟಿಸ್​ ನೀಡಿದೆ.

ಐಟಿ ದಾಳಿ ಬಳಿಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4 ಬಾಕ್ಸ್ ದಾಖಲೆ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಒಂದು ಸೂಟ್‌ಕೇಸ್‌, ಎರಡು ಬ್ಯಾಗ್ ಮತ್ತೊಂದು ವೈಟ್ ಬಾಕ್ಸ್‌ನಲ್ಲಿ ಐಟಿ ಅಧಿಕಾರಿಗಳು ದಾಖಲೆ ಸಂಗ್ರಹ ಮಾಡಿದ್ದಾರೆ ಎನ್ನಲಾಗಿದೆ.

ಭಾರೀ ಪ್ರಮಾಣದ ಆಸ್ತಿ ಹೊಂದಿದ್ದ ಆರೋಪದ ಮೇಲೆಯೇ ಐಟಿ ಅಧಿಕಾರಿಗಳು ಸತತವಾಗಿ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಕ್ಲೂರು ಗ್ರಾಮದಲ್ಲಿರುವ ರಶ್ಮಿಕಾ ಮಂದಣ್ಣ ಅವರ ನಿವಾಸ, ಕಚೇರಿ, ಕಲ್ಯಾಣಮಂಟಪ ಸೇರಿದಂತೆ ಮತ್ತಿತರ ಕಡೆ ಆದಾಯ ತೆರಿಗೆ ಅಧಿಕಾರಿಗಳ ಎರಡು ತಂಡ ದಾಳಿ ನಡೆಸಿತ್ತು. ಕುಕ್ಲೂರಿನ ಮನೆ, ಸೆರೆನಿಟಿ ಹಾಲ್ ಸೇರಿದಂತೆ ರಶ್ಮಿಕಾ ತಂದೆ ಮದನ್ ಮಂದಣ್ಣಗೆ ಸೇರಿದ ಕಾಫಿ ಎಸ್ಟೇಟ್ ಮತ್ತಿತರ ಕಡೆಯೂ ಅಧಿಕಾರಿಗಳು ದಾಳಿ ನಡೆಸಿ ಆದಾಯಕ್ಕಿಂತ ಹೆಚ್ಚಿನ ಆಸ್ತಿಪಾಸ್ತಿ ಪತ್ತೆ ಮಾಡಿದ್ದರು ಎನ್ನಲಾಗಿದೆ.

ರಶ್ಮಿಕಾ ಮಂದಣ್ಣ ಕುಟುಂಬದ ಬಳಿ ಇರುವ ಆಸ್ತಿ ಎಷ್ಟು?
- ಕೊಡಗಿನ ವೀರಾಜಪೇಟೆಯ ಕುಕ್ಲೂರು ಗ್ರಾಮದಲ್ಲಿ ಎರಡು ಅಂತಸ್ತಿನ ಕೋಟಿ ರೂ, ಮೌಲ್ಯದ ಐಷಾರಾಮಿ ಕಟ್ಟಡ ಇದೆ.
- ಜೊತೆಗೆ ಎರಡು ಐಷಾರಾಮಿ ಕಾರುಗಳನ್ನು ರಶ್ಮಿಕಾ ತಂದೆ ಮದನ್ ಮಂದಣ್ಣ ಹೊಂದಿದ್ದಾರೆ.
- ನಟಿ ರಶ್ಮಿಕಾ ಮಂದಣ್ಣ ಹುಟ್ಟಿದ ಊರು ವೀರಾಜಪೇಟೆ ಸಮೀಪದ ಮೈತಾಡಿ ಗ್ರಾಮದಲ್ಲಿ 24 ಎಕರೆ ಕಾಫಿ ತೋಟ ಹೊಂದಿದ್ದಾರೆ.
- ಬಿಟ್ಟಂಗಾಲದಲ್ಲಿ 5.50 ಎಕರೆ ಜಾಗವನ್ನು ಸದ್ಯ ಖರೀದಿ ಮಾಡಿದ್ದರು. (ಪೆಟ್ರೋಲ್ ಬಂಕ್ ಹಾಗೂ ಶಾಲೆ ನಿರ್ಮಾಣಕ್ಕೆ ಜಾಗ ಖರೀದಿ ಮಾಡಿದ್ದರು ಎನ್ನಲಾಗಿದೆ)
- ವಿರಾಜಪೇಟೆಯಲ್ಲಿ ಐಷಾರಾಮಿ ಕಲ್ಯಾಣ ಮಂಟಪ ಸೆರಿನಿಟ್ ಹಾಲ್ ಹೊಂದಿದ್ದು, ಇಲ್ಲಿ ಒಂದು ಮದುವೆಗೆ ದಿನಕ್ಕೆ ಒಂದುವರೆ ಲಕ್ಷ ರೂ, ಬಾಡಿಗೆ ವಿಧಿಸಲಾಗುತ್ತದೆ.

English summary :IT Raid on Rashmika madanna house

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...