Sat,May04,2024
ಕನ್ನಡ / English

ಅಂತಾರಾಷ್ಟ್ರೀಯ ಕಬಡ್ಡಿ ಪಟು ಉಷಾರಾಣಿ ಮೇಲೆ ಹಲ್ಲೆ ಆರೋಪ, ಬಿ.ಸಿ ರಮೇಶ್​​ ಪೊಲೀಸರ ವಶಕ್ಕೆ | Janata news

22 Jan 2020
682

ಬೆಂಗಳೂರು : ಭಾರತ ಕಬಡ್ಡಿ ತಂಡದ ಮಾಜಿ ಆಟಗಾರ ಬಿ.ಸಿ. ರಮೇಶ್ ಸೇರಿ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಾಜಿ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಉಷಾರಾಣಿ ಅವರು ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಏಷ್ಯನ್ ಗೇಮ್ಸ್​ನಲ್ಲಿ ಸಿಲ್ವರ್ ಮೆಡಲ್ ಹಾಗೂ ಸೌತ್ ಏಷಿಯನ್ ಗೇಮ್ಸ್​ನಲ್ಲಿ ಗೋಲ್ಡ್ ಮೆಡಲಿಸ್ಟ್ ಆಗಿರುವ ಉಷಾರಾಣಿ ಸಂಪಂಗಿರಾಮನಗರ ಠಾಣೆಯಲ್ಲಿ ಬಿ.ಸಿ. ರಮೇಶ್ ವಿರುದ್ಧ ದೂರು ನೀಡಿದ್ದಾರೆ. ಸೆಕ್ಷನ್ 354 ಆರೋಪದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಮೇಶ್​​ರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಏಷ್ಯನ್ ಗೇಮ್ಸ್​​ನಲ್ಲಿ ಬೆಳ್ಳಿ ಪದಕ ಹಾಗೂ ಸೌತ್ ಏಷಿಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ವಿಜೇತೆ ಉಷಾರಾಣಿ ನಿನ್ನೆ ಸಂಜೆ ಕಂಠೀರವ ಸ್ಟೇಡಿಯಂನಲ್ಲಿ ಸಭೆ ಇದ್ದ ಕಾರಣ ಕಬಡ್ಡಿ ಅಸೋಸಿಯೇಶನ್​ಗೆ ಹೋಗಿದ್ದಾರೆ.

ಈ ವೇಳೆ ಪ್ರಮುಖರೆಲ್ಲರೂ ಸೇರಿದ್ದಾಗ ಅಸೋಸಿಯೇಶನ್ನಿನ ಬಿ.ಸಿ. ರಮೇಶ್ ಹಾಗೂ ಉಷಾರಾಣಿ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ರಮೇಶ್ ಹಾಗೂ ಸ್ನೇಹಿತರು, ಉಷಾರಾಣಿ ‌ಮೇಲೆ ಹಲ್ಲೆ ಮಾಡಿದ್ದಾರೆಂದು ಉಷಾರಾಣಿ ದೂರಿನಲ್ಲಿ ತಿಳಿಸಿದ್ದಾರೆ.

ಉಷಾರಾಣಿ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಪೊಲೀಸ್ ಪ್ರಭಾವ ಬಳಸಿ ದೂರು ದಾಖಲಿಸಿದ್ದಾರೆ ಅನ್ನೋದು ರಮೇಶ್ ಬೆಂಬಲಿಗರ ಆರೋಪವಾಗಿದೆ.

ಅಸೋಸಿಯೇಷನ್ ಚುನಾವಣೆ ಹಿನ್ನಲೆ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ವಿನಾಕಾರಣ ಉಷಾರಾಣಿ ಗಲಾಟೆ ಮಾಡಿ ಸುಳ್ಳು ಆರೋಪ ಮಾಡುತ್ತಿದ್ದಾರೆಂದು ಕರ್ನಾಟಕ ಅಮೆಚೂರ್ ಕಬ್ಬಡಿ ಅಸೋಸಿಯೇಷನ್ ಕನ್ವೇನಿಯರ್ ಶಿವಪ್ಪ ಪ್ರತ್ಯಾರೋಪ ಮಾಡಿದ್ದಾರೆ.

English summary :Usha Rani

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...