Thu,May09,2024
ಕನ್ನಡ / English

ಬೆಂಕಿ‌ ತಗುಲಿ ತಂದೆ-ಮಗ ಸಾವು! | Janata news

14 Feb 2020
853

ಮೈಸೂರು : ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಈಶ್ವರ ಬಡಾವಣೆಯಲ್ಲಿ ಗುರುವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ತಂದೆ ಮತ್ತು ಮಗ ​ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರೇ, ಪತ್ನಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತರನ್ನು ಕೆ.ಆರ್.ನಗರದ ಈಶ್ವರ ನಗರದಲ್ಲಿ ವಾಸವಿದ್ದ ಮೈಸೂರು ನಗರ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸಟೇಬಲ್ ರೇಣುಕಾಸ್ವಾಮಿ(45) ಮತ್ತವರ ಪುತ್ರ ತೇಜಸ್(14) ಎಂದು ಹೇಳಲಾಗಿದೆ.ಹೆಡ್ ಕಾನ್ಸಟೇಬಲ್ ಪತ್ನಿ ಪುಷ್ಪಲತಾ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆಡ್ ಕಾನ್ಸಟೇಬಲ್ ರೇಣುಕಾಸ್ವಾಮಿಯವರು ನೀರು ಕಾಯಿಸಲು ಒಲೆಗೆ ತೆಂಗಿನ ಸಿಪ್ಪೆ ಹಾಕಿ ಬೆಂಕಿ ಹಚ್ಚಿದ್ದರು. ಬೆಂಕಿ ಸರಿಯಾಗಿ ಉರಿಯದ ಕಾರಣ ಪಕ್ಕದಲ್ಲೇ ಇದ್ದ ಸೀಮೆಎಣ್ಣೆ ಕ್ಯಾನ್ ತೆರೆದು ಸ್ವಲ್ಪ ಸೀಮೆಎಣ್ಣೆಯನ್ನು ಒಲೆಗೆ ಎರೆಚಿದ್ದರು.

ಈ ವೇಳೆ ಸೀಮೆ ಎಣ್ಣೆ ಕ್ಯಾನ್ ಗೆ ಬೆಂಕಿ ತಗುಲಿದ್ದು, ಕ್ಯಾನ್ ಉರುಳಿ ಸೀಮೆ ಎಣ್ಣೆಯು ನೆಲದ ಮೇಲೆ ಚೆಲ್ಲಿದ್ದರಿಂದ ಬೆಂಕಿಯ ಕೆನ್ನಾಲಗೆ ಎಲ್ಲೆಡೆ ಹರಡಿತ್ತು. ಬೆಂಕಿಯನ್ನು ಆರಿಸಲು ಬಂದ ಪುಷ್ಪಲತಾ ಅವರ ಸೀರೆಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಆ ಸಮಯದಲ್ಲಿ ತಾಯಿ ಮತ್ತು ತಂದೆಯನ್ನು ರಕ್ಷಿಸಲು ಬಂದ ಪುತ್ರ ತೇಜಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ನೆರೆ ಹೊರೆಯವರು ಬಾಗಿಲು ಒಡೆದು ಒಳಪ್ರವೇಶಿಸಿ ಬೆಂಕಿ ಆರಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದರು.

ಕೆ.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary :Mysuru

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...