Sat,May18,2024
ಕನ್ನಡ / English

ನಾನು ಕೆಸರಿನ ಓಟಗಾರ, ಟ್ರ್ಯಾಕ್‌ನಲ್ಲಿ ಓಡುವುದಿಲ್ಲ: ಕಂಬಳ ವೀರ ಶ್ರೀನಿವಾಸ್ ಗೌಡ | Janata news

17 Feb 2020
1107

ಬೆಂಗಳೂರು : ಕಂಬಳದಲ್ಲಿ ದಾಖಲೆಯ ಓಟದ ಮೂಲಕವೇ ರಾಷ್ಟ್ರಮಟ್ಟದಲ್ಲಿ ಹೆಸರಾದ ಮೂಡುಬಿದರೆಯ ಶ್ರೀನಿವಾಸ್ ಗೌಡ, ಕಂಬಳದಲ್ಲಿ 145 ಮೀಟರ್ ದೂರವನ್ನು ಕೇವಲ 13.45 ಸೆಕೆಂಡ್‌ ನಲ್ಲಿ ಓಡಿ ಕರ್ನಾಟಕದ ಉಸೇನ್ ಬೋಲ್ಟ್ ಎನಿಸಿಕೊಂಡಿರುವ ಶ್ರೀನಿವಾಸ್ ಗೌಡ ಅವರು ರನ್ನಿಂಗ್ ಟ್ರ್ಯಾಕ್‌ನಲ್ಲಿ ಓಡಲು ನಿರಾಕರಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜು ಅವರೇ ಟ್ವೀಟ್ ಮಾಡಿ, ಶ್ರೀನಿವಾಸ್ ಗೌಡ ಅವರಿಗೆ ಸೂಕ್ತ ತರಬೇತಿ ನೀಡಿ, ಅವರನ್ನು ಓಟದ ಪರೀಕ್ಷೆಗೆ ಒಳಪಡಿಸಿ ಎಂದು ಸೂಚನೆ ನೀಡಿದ್ದರು.

ಬೆಂಗಳೂರಿನಲ್ಲಿರುವ ಸ್ಪೋರ್ಟ್ಸ್‌ ಅಥಾರಿಟಿ ಆಪ್ ಇಂಡಿಯಾದಲ್ಲಿ ರನ್ನಿಂಗ್ ಟೆಸ್ಟ್ ನಡೆಸಲು ಸಿದ್ಧತೆಯನ್ನು ಮಾಡಲಾಗಿತ್ತು. ಆದರೆ, ಶ್ರೀನಿವಾಸ್ ಗೌಡ ಅವರು ತಾವು ರನ್ನಿಂಗ್ ಟ್ರ್ಯಾಕ್‌ನಲ್ಲಿ ಓಡುವುದಿಲ್ಲ, ಬದಲಿಗೆ ಕಂಬಳದಲ್ಲಿಯೇ ಓಡುತ್ತೇನೆ ಎಂದು ಹೇಳಿದ್ದಾರೆ. ನಾನು ರನ್ನಿಂಗ್ ಟ್ರ್ಯಾಕ್ ಓಟಗಾರನಲ್ಲ, ಅದಕ್ಕೆ ಬೇಕಾಗಿರುವ ಕೌಶಲ್ಯ ಬೇರೆ ಕಂಬಳಕ್ಕೆ ಬೇಕಾಗಿರುವ ಕೌಶಲ್ಯ ಬೇರೆ ಎಂದು ಹೇಳಿದ್ದಾರೆ.

ನಾನು ಕಂಬಳದಲ್ಲೇ ಏನಾದ್ರು ಸಾಧನೆ ಮಾಡಬೇಕು. ನನಗೆ ಟ್ರ್ಯಾಕ್‌ನಲ್ಲಿ ಓಡೋಕಾಗಲ್ಲ. ಟ್ರ್ಯಾಕ್‌ನಲ್ಲಿ ಓಡುವವರು ಕಂಬಳದ ಗದ್ದೆಯಲ್ಲಿ ಓಡಲಿಕ್ಕಾಗಲ್ಲ. ಕಂಬಳದಲ್ಲಿ ಹಿಮ್ಮಡಿಯಿಂದ ಓಡಬೇಕಾಗುತ್ತದೆ. ಆದ್ರೆ ಟ್ರ್ಯಾಕ್​ನಲ್ಲಿ ಮುಂಗಾಲನ್ನು ಬಳಸಿ ಓಡಬೇಕು. ಎರಡೂ ಬೇರೆ, ಬೇರೆ, ನಾನು ರನ್ನಿಂಗ್ ಟ್ರ್ಯಾಕ್‌ನಲ್ಲಿ ಓಡುವುದಿಲ್ಲ, ಬದಲಿಗೆ ಕಂಬಳದಲ್ಲಿಯೇ ಸಾಧನೆ ಮಾಡುತ್ತೇನೆ ಎಂದು ಶ್ರೀನಿವಾಸ್ ಗೌಡ ಹೇಳಿದ್ದಾರೆ.

ಇನ್ನು ಕಂಬಳದಲ್ಲೇ ಇನ್ನು ಹೆಚ್ಚಿನ ಸಾಧನೆ ಮಾಡಬೇಕು ಅಂತ ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿರುವ ಶ್ರೀನಿವಾಸ್​ಗೌಡರಿಗೆ ರಾಜ್ಯ ಸರ್ಕಾರ ನೆರವು ನೀಡಲು ಮುಂದಾಗಿದೆ. ಈ ಸಂಬಂಧ ಕಾರ್ಮಿಕ ಖಾತೆ ಸಚಿವ ಶಿವರಾಮ್​ ಹೆಬ್ಬಾರ್​, ತಮ್ಮ ಇಲಾಖೆಯ ಅಧಿಕಾರಿಗಳನ್ನು ಶ್ರೀನಿವಾಸ್​ ಗೌಡರ ಬಳಿಗೆ ಕಳುಹಿಸಿ ಆತನ ಕ್ಷಮತೆ ಹಾಗೂ ಆತನಿಗೆ ಅಗತ್ಯವಿರುವ ನೆರವಿನ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇವತ್ತು ಶ್ರೀನಿವಾಸ್​ ಗೌಡ ಯಡಿಯೂರಪ್ಪರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

English summary :Mangalore, srinivasa gowda

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...