Sun,May19,2024
ಕನ್ನಡ / English

ಪುಲ್ವಾಮಾ ದಾಳಿ: ಬಾಂಬರ್ ಗೆ ಆಶ್ರಯ ನೀಡಿದ್ದ ತಂದೆ, ಮಗಳನ್ನು ಬಂಧಿಸಿದ ಎನ್ ಐಎ | Janata news

03 Mar 2020
612

ನವದೆಹಲಿ: : ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯಾ ಬಾಂಬರ್ ಅದಿಲ್ ಅಹ್ಮದ್ ದಾರ್ ನಿಗೆ ಆಶ್ರಯ ನೀಡಿದ್ದ ಒಬ್ಬ ಉಗ್ರನನ್ನು ಬಂಧಿಸಿದ ನಾಲ್ಕು ದಿನದ ನಂತರ ಇದೇ ಪ್ರಕರಣದಲ್ಲಿ ಇನ್ನಿಬ್ಬರನ್ನು ರಾಷ್ಟ್ರೀಯ ತನಿಖಾ ದಳ ಇಂದು ಬಂಧಿಸಿದೆ.

ಕಳೆದ ವಾರ ಪುಲ್ವಾಮಾ ಹಜಿಬಲ್​ ಪ್ರದೇಶದವನಾದ ಶಕೀರ್ ಬಶೀರ್ ಮ್ಯಾಗ್ರೆ ಎಂಬಾತನನ್ನು ಬಂಧಿಸಲಾಗಿತ್ತು. ಈಗ ಆತನ ಮಗಳನ್ನು ಬಂಧಿಸಲಾಗಿದೆ. ಇವರಿಬ್ಬರು ಉಗ್ರರಿಗೆ ಆಶ್ರಯ ನೀಡಿದ್ದೂ ಅಲ್ಲದೆ, ಬಾಂಬ್​ ತಯಾರಿಸಲು ಸಹಾಯ ಮಾಡಿದ್ದರು.

ಆತ್ಮಾಹುತಿ ದಳದ ಮುಖ್ಯಸ್ಥ ಅದಿಲ್​ ಅಮಹ್ಮದ್​ ದಾರ್​ನಿಗೆ ವಸತಿ ಮತ್ತು ಇನ್ನಿತರ ಸೌಲಭ್ಯ ಒದಗಿಸಿದ್ದ. ಬಹಳಷ್ಟು ಸಲ ಬಂದೂಕು, ಮದ್ದು ಗುಂಡು, ಹಣ ಮತ್ತಿತರ ಸ್ಫೋಟಕ ವಸ್ತುಗಳನ್ನು ಸರಬರಾಜು ಮಾಡಿದ್ದೆ. ಅವುಗಳನ್ನು ಪುಲ್ವಾಮಾ ದಾಳಿಗೆ ಬಳಸಲಾಗಿತ್ತು ಎಂದು ಮ್ಯಾಗ್ರೆ ಆರಂಭಿಕ ವಿಚಾರಣೆಯಲ್ಲಿ ಬಾಯಿ ಬಿಟ್ಟಿದ್ದ.

ಬಾಂಬ್​ ಸ್ಫೋಟಗೊಳಿಸುವ ದಿನ ಮ್ಯಾಗ್ರೆ ತಾನೇ ಕಾರನ್ನು ಚಲಾಯಿಸಿಕೊಂಡು ಬಂದಿದ್ದ. ಆದರೆ ದಾಳಿಯ ಸ್ಥಳದಿಂದ 500 ಮೀಟರ್ ದೂರದಲ್ಲಿ ವಾಹನದಿಂದ ಕೆಳಗಿಳಿದಿದ್ದ. ಇದರಿಂದಲೇ ತಿಳಿಯುತ್ತದೆ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಆತ ಭಾಗಿಯಾಗಿದ್ದ ಎಂದು ಎನ್​ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರಾದ ಅದಿಲ್​ ದಾರ್​ ಮತ್ತು ಉಮರ್​ ಫಾರುಕ್​ಗೆ 2018ರಿಂದ 2019ರ ಫೆಬ್ರವರಿ ದಾಳಿ ಆಗುವವರೆಗೆ ಮ್ಯಾಗ್ರೆ ತನ್ನ ಮನೆಯಲ್ಲಿ ನೆಲೆ ನೀಡಿದ್ದ.

ಜೈಷ್-ಇ- ಮೊಹ್ಮದ್ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರೀಯನಾಗಿದ್ದ ಹಾಜಿಬಲ್ ನಿವಾಸಿ ಉಗ್ರ ಮಾಗ್ರೀಯನ್ನು 15 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ಜಮ್ಮು- ಕಾಶ್ಮೀರದ ಎನ್ ಐಎ ವಿಶೇಷ ನ್ಯಾಯಾಲಯ ನೀಡಿದೆ.

English summary :Pulwamattack

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...