Wed,May01,2024
ಕನ್ನಡ / English

ಕರ್ನಾಟಕ ಬಜೆಟ್ 2020: ಬಜೆಟ್ ಹೈಲೈಟ್ಸ್ ! | Janata news

05 Mar 2020
1179

ಬೆಂಗಳೂರು : ಸಿಎಂ ಯಡಿಯೂರಪ್ಪ ಇವತ್ತು ಕರ್ನಾಟಕದ 2020-21ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಯಡಿಯೂರಪ್ಪ ಅವರು ಮಂಡಿಸುತ್ತಿರುವ 7ನೇ ಬಜೆಟ್‌ ಆಗಿದೆ. ಈ ಹಿಂದೆ 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಬಾರಿ ಬಜೆಟ್ ಮಂಡಿಸಿದ್ದರು. ಆ ಬಳಿಕ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡನೆ ಮಾಡಿದ್ದರು.

2019-20ರಲ್ಲಿ ಕೇಂದ್ರ ಸರಕಾರದಿಂದ ಬರಬೇಕಾದ ತೆರಿಗೆಯ ಪಾಲು ರಾಜ್ಯಕ್ಕೆ ಸಮರ್ಪಕವಾಗಿ ಸಿಕ್ಕಿಲ್ಲ ಎಂದು ಬಜೆಟ್‌ನಲ್ಲೇ ರಾಜ್ಯ ಸರ್ಕಾರ ತಿಳಿಸಿದೆ. ಕೇಂದ್ರ ತೆರಿಗೆಗಳಲ್ಲಿನ ರಾಜ್ಯದ ಪಾಲು ಕಡಿಮೆಯಾಗಿದೆ. ಈ ಕಾರಣದಿಂದಾಗಿ ಕರ್ನಾಟಕಕ್ಕೆ 8,887 ಕೋಟಿ ರೂ. ಕಡಿತವಾಗಿವೆ ಎಂದು ಸರ್ಕಾರ ಲೆಕ್ಕ ಕೊಟ್ಟಿದೆ.

ಕಳೆದ ವರ್ಷಕ್ಕಿಂತ ಈ ವರ್ಷ 3 ಸಾವಿರ ಕೋಟಿ ಹೆಚ್ಚುವರಿ ಬಜೆಟ್ ಮಂಡಿಸಲಾಗಿದೆ.
- ಕಳೆದ ಬಾರಿಯ ಬಜೆಟ್ ಗಾತ್ರ 2 ಲಕ್ಷದ 34 ಸಾವಿರ ಕೋಟಿ ರೂ.
-ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂ.


ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದು:

* ಪ್ರಧಾನಮಂತ್ರಿ ಕಿಸಾನ್​ ಸಮ್ಮಾನ್​ ಯೋಜನೆಯಡಿ ಕೇಂದ್ರ ಸರ್ಕಾರದ 6000 ಜೊತೆ ರಾಜ್ಯ ಸರ್ಕಾರದಿಂದ 4000
* ಸಣ್ಣ ಹಾಗೂ ಅತಿಸಣ್ಣ ರೈತರಿಗೆ ವಾರ್ಷಿಕ 10000 ಜೊತೆಗೆ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್​ ಕ್ರೆಡಿಟ್​ ಕಾರ್ಡ್​
* ಪ್ರಕೃತಿ ವಿಕೋಪ ಮತ್ತು ಹವಾಮಾನ ವೈಪರೀತ್ಯದಿಂದ ರೈತರಿಗಾಗುವ ನಷ್ಟ ಪರಿಹಾರಕ್ಕೆ 900 ಕೋಟಿ ವಿಮೆ
* ಬರ ನಿರೋಧಕ ಬೆಳೆ ಬೆಳೆಯಲು ರೈತ ಸಿರಿ ಯೋಜನೆಯಡಿ ಪ್ರತಿ ಹೆಕ್ಟೇರ್​ಗೆ 10000 ದಿಂದ 20000 ರೂ ಪ್ರೋತ್ಸಾಹಧನ
* ಸಾವಯವ ಕೃಷಿ ಪ್ರೋತ್ಸಾಹಕ್ಕೆ 200ಕೋಟಿ ಅನುಧಾನ
* ಖಾಸಗಿ ಸಹಭಾಗಿತ್ವದಲ್ಲಿ 10 ಸಾವಿರ ಮೆಟ್ರಿಕ್​ ಟನ್​ ಸಾಮರ್ಥ್ಯದ 10 ಕೋಲ್ಡ್​ ಸ್ಟೋರೇಜ್​ನಿರ್ಮಾಣಕ್ಕೆ 75 ಕೋಟಿ
* ಕೊಳೆತು ಹೋಗಬಹುದಾದ ಕೃಷಿ ಉತ್ಪನ್ನಗಳನ್ನ ದೆಹಲಿ, ಮುಂಬೈ, ತಿರುವನಂತಪುರಂಗೆ ಸಾಗಿಸಲು ಕೃಷಿ ರೈಲು ಯೋಜನೆ
* ಎತ್ತಿನಹೊಳೆ ಯೋಜನೆಗೆ ಪ್ತಸಕ್ತ ಸಾಲಿನಲ್ಲಿ ಮೊದಲನೇ ಹಂತದ ಕಾಮಗಾರಿಗಾಗಿ 1500 ಕೋಟಿ ಅನುದಾನ
* ರಾಜ್ಯದ ವಿವಿಧ ಭಾಗಗಳಲ್ಲಿ ಏತ ನೀರಾವರಿ ಯೋಜನೆ ಪ್ರಾರಂಭಿಸಲು 5000 ಕೋಟಿ ಮೀಸಲು
* ಹಂದಿ ಸಾಕಾಣಿಕೆ ಉತ್ತೇಜನಕ್ಕಾಗಿ ಸಮಗ್ರ ವಹಾರ ಅಭಿವೃದ್ಧಿ ಯೋಜನೆಗೆ 5 ಕೋಟಿ ಮೀಸಲು
* ಸಾರ್ವಜನಿಕ ಸಹಭಾಗಿತ್ವದಲ್ಲಿ ಕುಕ್ಕುಟ ತ್ಯಾಜ್ಯ ಸಂಸ್ಕರಣೆ ಮತ್ತು ಮೌಲ್ಯ ವರ್ಧನ ಕೇಂದ್ರ ಸ್ಥಾಪನೆ
* ರಾಜ್ಯದಲ್ಲಿ ಹೈನುರಾಸುಗಳಲ್ಲಿ ಶೇ.90ರಷ್ಟು ಹೆಣ್ಣುಕರುಗಳನ್ನ ಪಡೆಯಲು ಕೃತಕ ಗರ್ಭಧಾರಣೆಗೆ 2 ಕೋಟಿ ಮೀಸಲು
* ಹನಿ ಮತ್ತು ತುಂತುರು ನೀರಾವರಿಗೆ 627 ಕೋಟಿ ರೂ ಮೀಸಲು
* ಕೃಷಿ ಅಭಿವೃದ್ಧಿಗಾಗಿ ಕೃಷಿ ಆಯೋಗ ರಚನೆ
* ಕಿಸಾನ್ ಸಮ್ಮಾನ್ ಯೋಜನೆಗೆ 2600 ಕೋಟಿ ರೂ ಮೀಸಲು
* ರೈತರಿಗೆ, ಮೀನುಗಾರರಿಗೆ ಕ್ರೆಡಿಟ್ ಕಾರ್ಡ್ ವಿತರಣೆ
* ರಾಜ್ಯಾದ್ಯಂತ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಗಳ ಸ್ಪಾಪನೆ
* ರೈತರ ಮನೆ ಬಾಗಲಿಗೆ ಕೀಟನಾಶಕ
* ಮಹದಾಯಿ ಯೋಜನೆಗೆ 500 ಕೋಟಿ ರೂ ಘೋಷಣೆ
* ಕೃಷಿ ಉತ್ಪನ್ನ ಸಂಸ್ಕರಣಗೆ 10 ಶೀತಲ ಗೃಹ ನಿರ್ಮಾಣಕ್ಕೆ 75 ಕೋಟಿ ಮೀಸಲು
* ಹನಿ ಮತ್ತು ತುಂತುರು ನೀರಾವರಿಗೆ 627 ಕೋಟಿ ರೂ ಮೀಸಲು
* ರಾಜ್ಯದ ಪ್ರತಿ ಗ್ರಾಮಗಳಲ್ಲೂ ಜಲಗ್ರಾಮ್ ಕ್ಯಾಲೆಂಡರ್ ಸ್ಪಾಪನೆ
* ಅಟಲ್ ಭೂ-ಜಲ ಯೋಜನೆಯಡಿ 1202 ಕೋಟಿ ರೂ.ಗಳನ್ನು ಬಳಸಿಕೊಂಡು ರಾಜ್ಯದ ಆಯ್ದ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ.
* ರಾಜ್ಯದ ಬೃಹತ್ ನೀರಾವರಿ ಯೋಜನೆಯಡಿಯಲ್ಲಿನ ಅಚ್ಚುಕಟ್ಟು ಪ್ರದೇಶಗಳಲ್ಲಿ Flood Irrigation ಪದ್ಧತಿಯನ್ನು ಇಸ್ರೇಲ್ ಮಾದರಿಯಲ್ಲಿ ಸೂಕ್ಷ್ಮ ನೀರಾವರಿಗೆ ಪರಿವರ್ತಿಸಲು ಕ್ರಮ.
* ಜಲಸಂಪನ್ಮೂಲ ಇಲಾಖೆಯ ಮೂಲಕ ಒಂದು ಲಕ್ಷ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ.
* ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ರೂ. ಅನುದಾನ.
* ತ್ತಿನಹೊಳೆ ಯೋಜನೆಗೆ 1500 ಕೋಟಿ ರೂ. ಅನುದಾನ; ಮೊದಲನೆಯ ಹಂತದ Lift component ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಕ್ರಮ.

ಮೀನುಗಾರರಿಗೆ ಬಜೆಟ್ ಕೊಡುಗೆ:
* ಮೀನುಗಾರರ ಅನುಕೂಲಕ್ಕಾಗಿ ಮತ್ಸ ವಿಕಾಸ ಯೋಜನೆ
* ಮಹಿಳಾ ಮೀನುಗಾರರ ಸಬಲೀಕರಣ ಅಡಿಯಲ್ಲಿ 1000 ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನ ನೀಡಲು 5 ಕೋಟಿ ಮೀಸಲು
* ಉಡುಪಿ ಜಿಲ್ಲೆ ಹೆಜಮಾಡಿ ಕೋಡಿ ಮೀನುಗಾರಿಕೆ ಬಂದರು ಸ್ಥಾಪನೆಗೆ 181 ಕೋಟಿ ಮೀಸಲು
* ಉಡುಪಿ ಜಿಲ್ಲೆ ಹಂಗಾರು ಕಟ್ಟೆಯಲ್ಲಿ 130 ಕೋಟಿ ವೆಚ್ಚದಲ್ಲಿ ಬಂದರು ಅಭಿವೃದ್ಧಿ
* ಮೀನುಗಾರಿಗೆ ಸದೃಢಗೊಳಿಸಲು ಕ್ರಮ.

ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಬಿಎಸ್‌ವೈ ಯೋಜನೆಗಳು:

* ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ.
* ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ.
* ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ.
* ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ.

* ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ 25% ಮೀಸಲಾತಿ.
* ವಸತಿ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ
* ಶಿಕ್ಷಕರಿಗೆ ಎಲ್ಲಾ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು ಶಿಕ್ಷಕ ಮಿತ್ರ ಆಪ್ ಅಭಿವೃದ್ಧಿ.
* ಸಂಭ್ರಮ ಶನಿವಾರ ಆಚರಣೆ-ಪ್ರತಿ ತಿಂಗಳಲ್ಲಿ ಎರಡು ಶನಿವಾರ ಬ್ಯಾಗ್ ರಹಿತ ದಿನ

* ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಔಷಧಿ ತಯಾರಿಕಾ ಘಟಕ ಸ್ಥಾಪನೆ.
* ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ.
* ರಾಜ್ಯ ರಾಜಧಾನಿ ಬೆಂಗಳೂರಿನ ಚಿತ್ರಸಂತೆಗೆ 1 ಕೋಟಿ ರೂ. ಅನುದಾನ
* ಪೆಟ್ರೋಲ್ ಮೇಲಿನ ತೆರಿಗೆ ಪ್ರಮಾಣ ಶೇ.32 ರಿಂದ ಶೇ.35ಕ್ಕೆ ಏರಿಕೆ
* ಡೀಸೆಲ್ ಮೇಲಿನ ತೆರಿಗೆ ಪ್ರಮಾಣ ಶೇ.21ರಿಂದ 24ಕ್ಕೆ ಏರಿಕೆ
* ಮದ್ಯ ತೆರಿಗೆ ಸ್ಲಾಬ್ ಪ್ರಸ್ತುತ ದರದ ಮೇಲೆ 6 % ಹೆಚ್ಚಳ

* ಸರ್ಕಾರಿ ಕಛೇರಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಆನಂದ್ ರಾವ್ ಸರ್ಕಲ್ ನಲ್ಲಿ ಪ್ರತ್ಯೇಕ ಕಟ್ಟಡ ನಿರ್ಮಾಣ.
* ಬೆಂಗಳೂರು ಪೊಲೀಸರಿಗೆ 75 ಹೊಸ ಹೊಯ್ಸಳ ವಾಹನ
* ಪೊಲೀಸ್ ಸಿಬ್ಬಂದಿಗಳಿಗಾಗಿ ಗೃಹ ಭಾಗ್ಯ ಯೋಜನೆ. ಇದಕ್ಕಾಗಿ 200 ಕೋಟಿ ರೂ. ಮೀಸಲು.
* ಕೆಎಸ್‌ಆರ್‌ಟಿಸಿಗೆ 2450 ನೂತನ ಬಸ್

* ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಮನೆ ಮನೆಗೆ ಗಂಗೆ ಎಂಬ ನೂತನ ಯೋಜನೆ
* ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ 780 ಕೋಟಿ ರೂ. ಮೀಸಲು.
* 60 ವರ್ಷ ಮೀರಿದ ಬಿಪಿಎಲ್ ಕಾರ್ಡ್ ದಾರರಿಗೆ ಜೀವನಚೈತ್ರ ಯಾತ್ರೆ ಯೋಜನೆ ಮೂಲಕ ಪ್ರಸಿದ್ಧ ತೀರ್ಥಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ. ಇದಕ್ಕಾಗಿ 20 ಕೋತಿ ರೂ. ಮೀಸಲು.

* ಕಟ್ಟಡ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ 10 ಮೊಬೈಲ್ ಕ್ಲಿನಿಕ್ ಆರಂಭ
* ಹೈದರಾಬಾದ್ ಕರ್ನಾಟಕ ಪ್ರದೆಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ.
* ಗ್ರಾಮೀಣ ಸುಮಾರ್ಗ ಯೋಜನೆ ಘೋಷಣೆ
* ರಾಜ್ಯದ ನದಿಗಳಲ್ಲಿನ ಮಾಲಿನ್ಯಕ್ಕೆ ಕಡಿವಾಣ ಹಾಕಲು 20 ನಗರಗಳಲ್ಲಿ ಮಲತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪನೆಗೆ ಕ್ರಮ.
* ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ.

* ಬೆಂಗಳೂರು ಬಯೋ ಇನ್ನೋವೇಷನ್ ಕೇಂದ್ರದ ಆಶ್ರಯದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಕೃಷಿ ನಾವೀನ್ಯತಾ ಕೇಂದ್ರ ಸ್ಥಾಪನೆ
* ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಉಪನಗರ ರೈಲು ಯೋಜನೆಗೆ ರಾಜ್ಯ ಸರ್ಕಾರದಿಂದ 500 ಕೋಟಿ ರೂ. ಅನುದಾನ.
* ವನಿತಾ ಸಂಗಾತಿ ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ಅನುದಾನ
* ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ದ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ವಿಶ್ರಾಂತಿ ಕೋಣೆಗಳ ಸೌಲಭ್ಯ
* ಬೆಂಗಳೂರು ಮಹಿಳೆಯರ ಸುರಕ್ಷತೆಗಾಗಿ ಅಭಿವೃದ್ಧಿ ಪಡಿಸಿರುವ ಸುರಕ್ಷಾ ಆಪ್ ರಾಜ್ಯಾದ್ಯಂತ ವಿಸ್ತರಣೆ. ತುರ್ತು ಸ್ಪಂದನಾ ವಾಹನಗಳ ಮೂಲಕ ಮಹಿಳೆಯರ ರಕ್ಷಣೆಗೆ ಕ್ರಮ
* ಬೆಂಗಳೂರು ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಹೊಯ್ಸಳ ವಾಹನಗಳ ಖರೀದಿ
* ಸ್ತ್ರೀ ಶಕ್ತಿ, ಸ್ವ-ಸಹಾಯ ಸಂಘದ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳಲ್ಲಿ ಅವಶ್ಯಕತೆಗನುಸಾರ ಖರೀದಿ ಮಾಡಲು ಕ್ರಮ
* ಅಂಧ ತಾಯಂದಿರಿಗೆ ನೀಡುವ ಮಾಸಿಕ ರೂ.2000 ಶಿಶುಪಾಲನಾ ಭತ್ಯೆ ಯೋಜನೆ ಮಗುವಿನ ಮೊದಲ 2 ವರ್ಷಗಳಿಂದ 5 ವರ್ಷದ ವರೆಗೆ ವಿಸ್ತರಣೆ
* ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಮಹಿಳಾ ಪೂರಕ ಪೌಷ್ಟಿಕ ಉತ್ಪಾದನಾ ಕೇಂದ್ರಗಳ ಅಧುನೀಕರಣಕ್ಕೆ ಮಹಿಳಾ ಅಭಿವೃದ್ಧಿ ನಿಗಮದಿಂದ 20 ಲಕ್ಷ ರೂ ವರೆಗೆ ಬಡ್ಡಿ ರಹಿತ ಕಿರು ಸಾಲ ಸೌಲಭ್ಯಕ್ಕಾಗಿ 20 ಕೋಟಿ ಅನುದಾನ

* ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 5 ಕೋಟಿ ರೂ. ಅನುದಾನ.
* ಹೊಸ ಪ್ರವಾಸೋದ್ಯಮ ಯೋಜನೆ ಜಾರಿ.
* ಪದವಿ ಪೂರ್ವ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರತಿಭಾ ಶೋಧನೆ ಕಾರ್ಯಕ್ರಮ ಪ್ರಾರಂಭ. ಆಯ್ಕೆಯಾದ 500 ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಕ್ಷಣ, ಒಂದು ಸಾವಿರ ರೂ. ಮಾಸಿಕ ಶಿಷ್ಯವೇತನ.
* ರಾಜ್ಯದ ಜಿ.ಐ. ಟ್ಯಾಗ್ ಹೊಂದಿರುವ ಕೈಮಗ್ಗ ಬಟ್ಟೆ ಉತ್ಪನ್ನಗಳಿಗೆ ರಾಜ್ಯದ ಪ್ರತಿಷ್ಠಿತ ಪ್ರಿಯದರ್ಶಿನಿ ಬ್ರಾಂಡ್ ಮೂಲಕ ಮಾರುಕಟ್ಟೆ ಸೌಲಭ್ಯ
* ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ.
* ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ 20 ಕೋಟಿ ರೂ. ಅನುದಾನ.

* ಯುವಜನತೆಯಲ್ಲಿ ನಾಯಕತ್ವ ಹಾಗೋ ಮೌಲ್ಯವರ್ಧನೆಗೆ ಅನಂತ್ ಕುಮಾರ್ ಪ್ರತಿಷ್ಠಾನ ಸ್ಥಾಪನೆ
* ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 100 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ.
- ರಾಜ್ಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಜಾಗತಿಕ ಮಟ್ಟದ ಫಿಲಂ ಸಿಟಿ ನಿರ್ಮಾಣ.
- ಲಂಬಾಣಿ ಭಾಷಾ ಅಕಾಡೆಮಿ ಸ್ಥಾಪನೆಗೆ ಕ್ರಮ.
- ರಾಜ್ಯ ವ್ಯಾಪಿ ಸುರಕ್ಷಾ ಆಪ್ ವಿಸ್ತರಣೆಗೆ ಕ್ರಮ
- ರಾಜ್ಯ ಸರ್ಕಾರಿ ನೌಕಾರರ ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ಬದಲಾವಣೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ನಗದು ರಹಿತ ಶಸ್ತ್ರ ಚಿಕಿತ್ಸೆ ಸೌಲಭ್ಯ.

English summary :KarnatakaBudget2020

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...