Wed,May08,2024
ಕನ್ನಡ / English

ಬೆಳೆದು ನಿಂತಿದ್ದ ನೂರಾರು ಮರ ಕಡಿಸಿದ್ರಾ ತಹಶೀಲ್ದಾರ್‌ ? | Janata news

09 Mar 2020
924

ತುಮಕೂರು: ಗುಬ್ಬಿ : ತಾಲ್ಲೂಕಿನ ತಿಪ್ಪೂರು ಗ್ರಾಮದ ಸಿದ್ದಮ್ಮ ಅವರಿಗೆ ಸೇರಿದ 170 ಅಡಿಕೆ ಮರ ಮತ್ತು 25 ತೆಂಗಿನ ಮರಗಳನ್ನು ತಾಲ್ಲೂಕು ಆಡಳಿತ ಕಡಿದು ಹಾಕಿದೆ ಎಂಬ ವಿಡಿಯೊ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಮಹಿಳಾ ದಿನಾಚರಣೆಯ ದಿನವೇ ಮಹಿಳೆಯ ಮೇಲೆ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಿಗರು ದೌರ್ಜನ್ಯ ಎಸಗಿದ್ದಾರೆ ಎಂದು ಜನರು ಆರೋಪಿಸುತ್ತಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಹಶೀಲ್ದಾರ್ ಮಮತಾ ಅವರ ಮೇಲೆ ಆರೋಪ ಕೇಳಿ ಬಂದಿದೆ. ತಾಲೂಕಿನ ತಿಪ್ಪೂರು ಗ್ರಾಮದ ಸಣ್ಣಕೆಂಪಯ್ಯ ಮತ್ತು ಸಿದ್ದಮ್ಮ ಅವರಿಗೆ ಉಡುಸಲಮ್ಮ ದೇವಸ್ಥಾನದಿಂದ ಕೊಡುಗೆಯಾಗಿ 5.18 ಎಕರೆ ಜಮೀನು ನೀಡಲಾಗಿತ್ತು. ಕಳೆದ 30 ವರ್ಷಗಳಿಂದಲೂ ತೆಂಗು, ಅಡಿಕೆ, ಬಾಳೆ ಬೆಳೆದುಕೊಂಡು ಬಂದಿದ್ದಾರೆ. ಈ ನಡುವೆ ಉಡುಸಲಮ್ಮ ದೇವರ ಜಾತ್ರೆಗೆ ಜಾಗ ಸಾಕಾಗುವುದಿಲ್ಲ ಎಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ತಹಶಿಲ್ದಾರ್ ಮಮತಾ ಅವರು ತೋಟವನ್ನು ಉರುಳಿಸಲು ಆದೇಶ ಕೊಟ್ಟಿದ್ದಾರೆ ಎನ್ನಲಾಗಿದೆ.

ಇದರಿಂದ ಆಘಾತಕ್ಕೊಳಗಾದ ಕುಟುಂಬ ದುಃಖದ ಮಡುವಿನಲ್ಲಿದೆ. ಮುನಿ ಕೆಂಪಯ್ಯ ಕುಟುಂಬದ ಆಕ್ರಂದನದ ವಿಡಿಯೋ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಎಂ.ಮಮತಾ, ನಾವು ಯಾವುದೇ ರೈತರ ಜಮೀನಲ್ಲಿರುವ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿದಿಲ್ಲ. ಮುಜರಾಯಿ ಇಲಾಖೆ ಸೇರಿದ ಉಡುಸಲಮ್ಮ ದೇವಸ್ಥಾನದಲ್ಲಿ ಮಾ.12 ರಂದು ಜಾತ್ರಾ ಮಹೋತ್ಸವ ಇದೆ. ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರಿಂದ ಜಿಲ್ಲಾಧಿಕಾರಿ ಅವರು ಈ ಆವರಣ ತೆರವುಗೊಳಿಸಿ ಜಾತ್ರೆ ನಡೆಯಲು ಅವಕಾಶ ಮಾಡಿಕೊಡಿ ಎಂಬ ಸೂಚಿಸಿದ್ದರು. ಆ ಮೇರೆಗೆ ದೇವಸ್ಥಾನಕ್ಕೆ ಸೇರಿರುವ ಜಾಗದಲ್ಲಿದ್ದ ಮರಗಳನ್ನು ಮಾತ್ರ ತೆರವುಗೊಳಿಸಲಾಗಿದೆ ಎಂದು ತಿಳಿಸಿದರು. ತೆರವಿಗೂ ಮುನ್ನ ಮರ ಬೆಳೆಸಿದ್ದ ದೇವಾಲಯದ 4 ಮಂದಿ ಅರ್ಚಕರಿಂದ ಒಪ್ಪಿಗೆ ಪತ್ರಕ್ಕೆ ಸಹಿ ಪಡೆಯಲಾಗಿದೆ.
ಇದು ನಡೆದಿರುವುದು ಮಾ.6 ರಂದು. ಆದರೆ ಮಹಿಳಾ ದಿನಾಚರಣೆಯ ದಿನ ವಿಡಿಯೊ ಚಿತ್ರೀಕರಣ ಮಾಡಿ ತಪ್ಪು ಸಂದೇಶ ಹರಡುತ್ತಿದ್ದಾರೆ ಎಂದಿದ್ದಾರೆ.

English summary :Tumkur

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...