Sat,May04,2024
ಕನ್ನಡ / English

ಬಲವಂತದಿಂದ ತ್ಯಾಜ್ಯ ಡಂಪ್ ವಿವಾದ: ಇಂದು ಸಜೀಪ ಬಂದ್ | Janata news

19 Mar 2020
951

ಬಂಟ್ವಾಳ : ಸಜೀಪನಡು ಗ್ರಾಮದ ಕಂಚಿನಡ್ಕಪದವುನಲ್ಲಿ ಮಾ. 18ರಂದು ಬಂಟ್ವಾಳ ಪುರಸಭೆಯ ಕಸ ವಿಲೇವಾರಿ ನಡೆಸುವ ವೇಳೆ ನಡೆದ ಬೆಳವಣಿಗೆಯನ್ನು ಖಂಡಿಸಿ ಗುರುವಾರ ಸಜೀಪ ಸಂಪೂರ್ಣ ಬಂದ್ ನಡೆಸಲಾಗುತ್ತಿದೆ.

ಸಜಿಪ ನಡು ಗ್ರಾಮದ ಕಂಚಿನಡ್ಕ ಪದವು ಡಂಪಿಂಗ್ ಯಾರ್ಡ್ ನಲ್ಲಿ ಬಂಟ್ವಾಳ ಪುರಸಭೆ ಮತ್ತು ಜಿಲ್ಲಾಡಳಿತ ಬಲವಂತವಾಗಿ ತ್ಯಾಜ್ಯ ಡಂಪ್ ಮಾಡಿದೆ ಎಂದು ಖಂಡಿಸಿ ಗುರುವಾರ ಗ್ರಾಮಸ್ಥರು, ವ್ಯಾಪಾರಸ್ಥರು ಗ್ರಾಮದ ಎಲ್ಲಾ ಅಂಗಡಿಗಳ ಬಾಗಿಲು ತೆರೆಯದೆ ಹಾಗೂ ಆಟೊ ರಿಕ್ಷಾ ಚಾಲಕರು ಪಾರ್ಕ್ ಗೆ ಇಳಿಯದೆ ಸ್ವಯಂ ಬಂದ್ ಆಚರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಸ ವಿಲೇವಾರಿ ನಡೆಸುವುದನ್ನು ಪ್ರತಿಭಟಿಸಿದ ಗ್ರಾಮಸ್ಥರ ಮೇಲೆ ಪೊಲೀಸರ ದೌರ್ಜನ್ಯ ಪ್ರದರ್ಶಿಸಿದ್ದಾರೆ ಹಾಗೂ ಕಸ ವಿಲೇವಾರಿಯ ವಿಚಾರದಲ್ಲಿ ಪುರಸಭೆಯವರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಸಜೀಪನಡು ಗ್ರಾಮಸ್ಥರು ಸಜೀಪ ಬಂದ್ ಗೆ ಕರೆ ನೀಡಿದ್ದರು.

ಘಟನೆ :-
ಒಂದು ದಶಕದ ಹಿಂದೆ ನಿರ್ಮಾಣವಾಗಿದ್ದ ಕಂಚಿನಡ್ಕ ಪದವು ಡಂಪಿಂಗ್ ಯಾರ್ಡ್ ನಲ್ಲಿ ತ್ಯಾಜ್ಯ ಸಂಸ್ಕರಣೆಗೆ ಗ್ರಾಮ ಪಂಚಾಯತ್ ಆಡಳಿತ ಮತ್ತು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದರು. ಕಂಚಿನಡ್ಕಪದವು ಘಟಕದಲ್ಲಿ ತ್ಯಾಜ್ಯ ವಿಲೇವಾರಿ ನಡೆಸುವ ಕುರಿತು ಕೆಲವು ದಿನಗಳಿಂದ ಸ್ಥಳೀಯರು ಹಾಗೂ ಬಂಟ್ವಾಳ ಪುರಸಭೆಯ ಮಧ್ಯೆ ಪರ - ವಿರೋಧದ ಮಾತುಗಳು ಕೇಳಿಬರುತ್ತಿದ್ದವು.

ಇತ್ತೀಚಿಗೆ ಪುರಸಭಾ ಆಡಳಿತಾಧಿಕಾರಿಯೂ ಆದ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅವರು ಕೂಡಲೇ ಡಂಪಿಂಗ್ ಯಾರ್ಡ್ ನಲ್ಲಿ ತ್ಯಾಜ್ಯ ಸಂಸ್ಕರಣೆಗೆ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಬುಧವಾರ ತ್ಯಾಜ್ಯ ತುಂಬಿ ಬಂದ ಲಾರಿಯನ್ನು ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸ್ ಬಲವನ್ನು ಬಳಸಿದ ಪುರಸಭೆ ತ್ಯಾಜ್ಯವನ್ನು ಡಂಪ್ ಮಾಡಿದೆ.

ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್‌ ಡಿ ಸೋಜಾ, ಸಿಐ ಟಿ.ಡಿ.ನಾಗರಾಜ್‌, ಗ್ರಾಮಾಂತರ ಎಸ್‌ಐ ಪ್ರಸನ್ನ ಅವರು ಗ್ರಾಮಸ್ಥರನ್ನು ಮನವೊಲಿಸಲು ಸಾಕಷ್ಟು ಪ್ರಯತ್ನಪಟ್ಟರು.

ಇದನ್ನು ವಿರೋಧಿಸಿ ಗುರುವಾರ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಗ್ರಾಮದಲ್ಲಿ ಬಂದ್ ಗೆ ಕರೆ ನೀಡಿದ್ದರು.

English summary :Mangalore, Bantwal

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...