Tue,May21,2024
ಕನ್ನಡ / English

ಕೊರೊನಾ ನಿರ್ವಹಣೆಗೆ ಕೇರಳ ಮಾದರಿ ಅನುಸರಿಸಿ: ಸರ್ಕಾರಕ್ಕೆ ಎಚ್​ಡಿಕೆ ಆಗ್ರಹ | Janata news

20 Mar 2020
819

ಬೆಂಗಳೂರು : ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೇರಳ ಮಾದರಿಯನ್ನು ಅನುಸರಿಸುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಎಚ್​ಡಿ ಕುಮಾರಸ್ವಾಮಿ, ಕೊರೋನಾ ವೈರಸ್​ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಅಲ್ಲಿನ ಜನರಿಗೆ 20,000 ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದೆ. ಇದರಲ್ಲಿ, ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ, ಬಾಕಿ ಮರುಪಾವತಿ, ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ? ಎಂದು ಪ್ರಶ್ನಿಸಿದ್ದಾರೆ.

ಕೇರಳದಲ್ಲಿ 26 ಕೊರೊನಾ ಪ್ರಕರಣ ವರದಿಯಾಗಿದ್ದರೆ ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ.ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ.ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು ಎಂದು ಅವರು ಒತ್ತಾಯಿಸಿದರು.

ಕೊರೊನಾ ವೈರಸ್‌ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದಿದ್ದಾರೆ.

English summary :HD Kumaraswamy

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...