Sun,May19,2024
ಕನ್ನಡ / English

ಎಲ್ಲಾ ಐಟಿ/ಬಿಟಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು :ಡಿಸಿಎಂ ಅಶ್ವತನಾರಾಯಣ | Janata news

21 Mar 2020
827

ಬೆಂಗಳೂರು : ಅಗತ್ಯ ಸೇವೆಗಳನ್ನು ಬಿಡುಗಡೆ ಮಾಡುವವರನ್ನು ಹೊರತುಪಡಿಸಿ ಐಟಿ ಮತ್ತು ಬಿಟಿ ಕಂಪನಿಗಳ ಎಲ್ಲಾ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ಉಪಮುಖ್ಯಮಂತ್ರಿ(ಡಿಸಿಎಂ) ಸಿ ಎನ್ ಅಶ್ವತ್ ನಾರಾಯಣ್ ಶುಕ್ರವಾರ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ ನಾರಾಯಣ್ ಅವರು, ನಿನ್ನೆ ಕಂಪೆನಿಗಳ ಪ್ರತಿನಿಧಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ, ಐಟಿ ಕಂಪನಿಗಳು ತಮ್ಮ ಕಚೇರಿಗಳನ್ನು ಬಂದ್ ಮಾಡುವ ಮತ್ತು ಅಗತ್ಯ ಸೇವೆಗಳನ್ನು ಬಿಡುಗಡೆ ಮಾಡುವವರನ್ನು ಹೊರತುಪಡಿಸಿ ಉಳಿದ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಲು ಒಪ್ಪಿಕೊಂಡಿವೆ, ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕಂಪನಿ ಉದ್ಯೋಗಿಗಳ ಅರೋಗ್ಯ ರಕ್ಷಣೆಗೆ ಹಾಗೂ ಸಂಕ್ರಾಮಿಕ ಹರಡದ ಹಾಗೆ ಹಲವು ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಕಂಪನಿ ಮುಖ್ಯಸ್ಥರಿಗೆ ಈ ಸಂದರ್ಭದಲ್ಲಿ ಸಲಹೆ ನೀಡಲಾಗಿದೆ.

ಮನೆಯಿಂದ ಕೆಲಸ ಮಾಡಲು ಅನುಕೂಲವಾಗುವಂತೆ ಸರ್ಕಾರವು ನಿರಂತರ ಬ್ರಾಡ್‌ಬ್ಯಾಂಡ್ ಮತ್ತು ವಿದ್ಯುತ್ ಸರಬರಾಜು ನೀಡುವ ಕುರಿತು ಟೆಲಿಕಾಂ ಮತ್ತು ವಿದ್ಯುತ್ ಸಂಸ್ಥೆಗಳೊಂದಿಗೆ ಮಾತನಾಡಲಿದೆ, ಎಂದು ಅಶ್ವತ್ ನಾರಾಯಣ್ ಉದ್ಯಮಕ್ಕೆ ಭರವಸೆ ನೀಡಿದ್ದಾರೆ.

ಐಟಿ-ಬಿಟಿ ಮತ್ತು ಸ್ಟಾರ್ಟ್-ಅಪ್ ಕಂಪನಿಗಳ ಮುಖ್ಯಸ್ಥರೊಂದಿಗೆ ಶುಕ್ರವಾರ ವಿಡಿಯೋ ಸಮಾವೇಶವನ್ನು ನಡೆಸಲಾಗಿದ್ದು, ಅಲ್ಲಿ ಉಪಮುಖ್ಯಮಂತ್ರಿಗಳು, ಕರೋನವೈರಸ್ ಏಕಾಏಕಿ ನಿಯಂತ್ರಿಸಲು ಕೈಗೊಂಡ ಕ್ರಮಗಳನ್ನು ವಿವರಿಸಿದ್ದು ಮತ್ತು ಉದ್ಯಮದ ಪ್ರಮುಖರಿಂದ ಸಲಹೆಗಳನ್ನು ಸಹ ಕೋರಲಾಗಿದೆ.

ಮನೆಯಿಂದ ಕೆಲಸ(ವರ್ಕ್ ಫ್ರೊಂ ಹೋಂ) ಮಾಡುವ ಬಗ್ಗೆ, ಅನೇಕ ಕಂಪನಿಗಳು ಈ ಸಲಹೆಯನ್ನು ಒಪ್ಪಿಕೊಂಡಿಲ್ಲ, ಈಗಲೂ ಸಹ ಅನೇಕ ಉದ್ಯೋಗಿಗಳು ಆಯಾ ಕಚೇರಿಗಳಿಂದ ಕೆಲಸ ಮಾಡುತ್ತಿದ್ದಾರೆ. ಅವರು ಕಡ್ಡಾಯವಾಗಿ ಮನೆಯಿಂದ ಕೆಲಸ ಮಾಡಲು ಆದೇಶ ಹೊರಡಿಸಲು ನಾವು ಬಯಸುವುದಿಲ್ಲ. ಅವರು ಅದನ್ನು ಸ್ವಯಂಪ್ರೇರಣೆಯಿಂದ ಮಾಡಬೇಕೆಂದು ನಾವು ಬಯಸುತ್ತೇವೆ, ಎಂದು ಐಟಿ-ಬಿಟಿ ಖಾತೆಯ ವಸ್ತುವಾರಿ ಹೊಂದಿರುವ ಅಶ್ವತ್ ನಾರಾಯಣ್ ಹೇಳಿದರು.

ಅಲ್ಲದೇ, ಈ ಸಂಸ್ಥೆಗಳ ಅನಿವಾರ್ಯ ಸೇವೆಯಲ್ಲಿರುವವರು ಮನೆಯಿಂದಲೇ ಕೆಲಸ ಮಾಡಬೇಕು, ಎಂದ ಸಚಿವರು, ಸಾಮಾಜಿಕ ದೂರವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದಿದ್ದಾರೆ.

English summary :All IT-BT employees should work from home : DCM Ashwathnarayana

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...