Sun,May19,2024
ಕನ್ನಡ / English

ಮುಖ್ಯಮಂತ್ರಿ ಬಿ.ಎಸ್.ವೈ ನೇತ್ರತ್ವದ ಸರ್ವಪಕ್ಷಣಗಳ ಸಭೆಯಲ್ಲಿ ಮಹತ್ವದ ನಿರ್ಧಾರ | Janata news

29 Mar 2020
882

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪರಿಸ್ಥಿತಿ ನಿಭಾಯಿಸುವ ಕುರಿತು ಇಂದು ಮುಖ್ಯಮಂತ್ರಿಯವರು ಕರೆದಿದ್ದ ಸರ್ವಪಕ್ಷಣಗಳ ಸಭೆ ಇಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತ್ರತ್ವದಲ್ಲಿ ನಡೆದ ಈ ಸಭೆಯಲ್ಲಿ ಕೊರೊನಾ ವಿರುದ್ಧ ರಾಜ್ಯ ಕೈಗೊಳ್ಳಬೇಕಾದ ಕೆಲವು ಪ್ರಮುಖ ನಿರ್ಣಯಗಳನ್ನು ನಿರ್ದರಿಸಲಾಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ #ಕೊರೊನ ಕುರಿತ ಸರ್ವಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ಮುಖ್ಯ ನಿರ್ಣಯಗಳನ್ನು ಸಭೆ ಬಳಿಕ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.

ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು, ಎಂದು ತಿಳಿಸಿದ್ದಾರೆ.

ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.

ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು, ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ರಾಜ್ಯದ ಗಡಿಗಳಲ್ಲಿ ಸಿಲುಕಿ ಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.

ಪಡಿತರವನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.

ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

English summary :Important decision taken in all party meeting in leadership CM BSY

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...