Sun,May19,2024
ಕನ್ನಡ / English

ಪತಿ ಕೊರೋನಾ ವಿಚಾರ ಮುಚ್ಚಿಟ್ಟ ಗರ್ಭಿಣಿಗೂ ಪಾಸಿಟಿವ್: ಆಸ್ಪತ್ರೆಯೇ ಸೀಲ್​ಡೌನ್! | Janata news

16 Apr 2020
642

ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ ಮಹಿಳೆಗೂ ಕೊರೋನಾ ಸೋಂಕಿರುವುದು ದೃಢವಾಗಿದೆ. ಇಡೀ ಆಸ್ಪತ್ರೆಯನ್ನೇ ಮುಚ್ಚುವಂತಾಗಿದೆ. ಆಸ್ಪತ್ರೆಯ ವೈದ್ಯರು ಸೇರಿ ಎಲ್ಲಾ ಸಿಬ್ಬಂದಿ ಇದೀಗ‌ ಕ್ವಾರಂಟೈನ್ ಶಿಕ್ಷೆ ಅನುಭವಿಸಬೇಕಾಗಿದೆ.

ಈ ನಿಟ್ಟಿನಲ್ಲಿ ಮಹಿಳೆಯ ಹೆರಿಗೆ ಮಾಡಿಸಿದ ವೈದ್ಯರು ಹಾಗು ಸಿಬ್ಬಂದಿಗೂ ಕ್ವಾರೆಂಟೈನ್ ವಿಧಿಸಲಾಗಿದೆ. ಈ ಮೂಲಕ ಕೊರೋನಾದಿಂದಾಗಿ ಬೆಂಗಳೂರಿನಲ್ಲಿ 2 ಆಸ್ಪತ್ರೆ ಸೀಲ್ಡ್‌ಡೌನ್ ಆಗಿದೆ.

ಕೆಂಗೇರಿಯ ದೊಡ್ಡಬಸ್ತಿಯಿಂದ ಬಂದಿದ್ದ ಮಹಿಳೆ ಸಿಜೆರಿಯನ್ ಮೂಲಕ ಡೆಲಿವರಿ ಮಾಡಿಸಿಕೊಂಡಿದ್ದಾಳೆ. ಡೆಲಿವರಿ ನಂತರ ಪತಿ ಕೊರೋನಾ ಪಾಸಿಟಿವ್ ಎಂಬುದನ್ನು ಬಹಿರಂಗ ಪಡಿಸಿದ ಮಹಿಳೆಗೂ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಸೋಂಕಿರುವುದು ಖೀಚಿತವಾದ ಕೂಡಲೇ ತಾಯಿ ಮಗುವನ್ನು ಬೌರಿಂಗ್‌ಗೆ ದಾಖಲಿಸಲಾಗಿದೆ.

ಏಪ್ರಿಲ್ 11ರ ಶನಿವಾರದಂದು ಕೆಂಗೇರಿಯ ದೊಡ್ಡ ಬಸ್ತಿಯ ಗರ್ಭಿಣಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಹೆರಿಗೆಯನ್ನು ಮಾಡಲಾಗಿತ್ತು. ಪತಿ ಬರುತ್ತಾರೆ. ಅಲ್ಲಿದ್ದಾರೆ, ಇಲ್ಲಿದ್ದಾರೆ ಎಂದು‌ ಸಬೂಬು ಹೇಳಿದ್ದಳು. ತುರ್ತು ಕಾರಣದಿಂದ ಮಾನವೀಯತೆ ಆಧಾರದಲ್ಲಿ ಮಹಿಳೆಗೆ ವೈದ್ಯರು ಹೆರಿಗೆ ಮಾಡಿಸಿದ್ದರು. ನಂತರವೂ ಪತಿ ಬಾರದ ಕಾರಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ವಿಚಾರ ತಿಳಿದು ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದಾಗ, ಆಕೆಯ ಪತಿಗೆ ಕೊರೊನಾ ಸೋಂಕು ತಗುಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದಿದ್ದರ ಬಗ್ಗೆ ಬಯಲಾಗಿದೆ. ಈಗ ಮಹಿಳೆಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಆಸ್ಪತ್ರೆಗೆ ಬೀಗ ಹಾಕಿ ಆಸ್ಪತ್ರೆ ಆವರಣದಲ್ಲಿ ಔಷಧ ಸಿಂಪಡಣೆ ಮಾಡಲಾಗಿದೆ. ಇದೀಗ ಅನಿವಾರ್ಯವಾಗಿ 5 ದಿನದ ಮಗುವನ್ನು ತಾಯಿಯಿಂದ ದೂರ ಇಡಲಾಗಿದೆ. ರೆಸಿಡೆನ್ಶಿಯಲ್ ಏರಿಯಾದಲ್ಲಿ ಮನೆ ಇರುವುದರಿಂದ ಆತಂಕ ಹೆಚ್ಚಾಗಿದೆ.

ಈ ವಿಚಾರ ತಿಳಿಯದೇ ಹೆರಿಗೆ ಮಾಡಿಸಿದ್ದ ಲೋಟಸ್ ಆಸ್ಪತ್ರೆ ಸಿಬ್ಬಂದಿ ಕೂಡ ಈಗ ಕ್ವಾರಂಟೈನ್​ನಲ್ಲಿದ್ದಾರೆ. ಆಸ್ಪತ್ರೆಯ ವೈದ್ಯರು ಈಗ ಸ್ವಯಂ ನಿರ್ಬಂಧ ಹೇರಿಕೊಂಡಿದ್ದಾರೆ. ಲೋಟಸ್ ಆಸ್ಪತ್ರೆಯನ್ನೂ ಸಂಪೂರ್ಣ ಸ್ಯಾನಿಟೈಸ್ ಮಾಡಿ, ಫ್ಯೂಮಿಗೇಷನ್ ಬಳಿಕ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಇಡೀ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ. ಇದೀಗ ಆ ಮಹಿಳೆಗೆ ಚಿಕಿತ್ಸೆ ನೀಡಿದ್ದ ವೈದ್ಯಕೀಯ ಸಿಬ್ಬಂದಿ, ಆರೈಕೆ ಮಾಡಿದ್ದ ಎಲ್ಲಾ ಸಿಬ್ಬಂದಿಯೂ ಕ್ವಾರಂಟೈನ್​​ಗೆ ಒಳಗಾಗಿದ್ದಾರೆ.

English summary :Corona Virus in Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...