Wed,May08,2024
ಕನ್ನಡ / English

ಮಂಗಳೂರಿನಲ್ಲಿ ಆಸ್ಪತ್ರೆ ಸೀಲ್ ಡೌನ್: ಸುತ್ತಮುತ್ತಲಿನ 5 ಕಿ.ಮೀ ಕಟ್ಟೆಚ್ಚರ! | Janata news

23 Apr 2020
657

ಮಂಗಳೂರು : ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಗೆ ಕೋವಿಡ್-19 ಸೋಂಕು ದೃಢಪಟ್ಟ ಹಿನ್ನಲೆ, ಆಸ್ಪತ್ರೆ ಮತ್ತು ಅದರ ಸುತ್ತಮುತ್ತಲ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೋನಾವೈರಸ್ ಪಾಸಿಟಿವ್ ರೋಗಿ, ಪಾರ್ಶ್ವವಾಯು ಸಂಬಂಧ ಕೆಲ ದಿನದ ಹಿಂದೆ ಈ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು, ಈ ಮೊದಲು ಈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಸುತ್ತಲಿನ ಎಲ್ಲಾ ಗಡಿಗಳನ್ನು ಈಗ ಕೊರೋನಾ ಪೀಡಿತ ಪ್ರದೇಶ ಎಂದು ಪರಿಗಣಿಸಲಾಗುತ್ತದೆ ಮತ್ತು ಕಟ್ಟುನಿಟ್ಟಾದ ಲಾಕ್ ಡೌನ್ ನಿಯಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ನೀಡಿದ್ದಾರೆ.

ಮಂಗಳೂರಿನ ಪಡೀಲು ಬಳಿಯಿರುವ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿದ್ದ 75 ವರ್ಷ ವಯಸ್ಸಿನ ವೃದ್ದೆಗೆ ಗುರುವಾರ ಸೋಂಕು ದೃಢವಾಗಿತ್ತು. ಆದುದರಿಂದ ಆಸ್ಪತ್ರೆ ಜೊತೆಗೆ ಎರಡು ಮನೆ, ಐದು ಅಂಗಡಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.

ಆಸ್ಪತ್ರೆಯ ಪೂರ್ವ ಭಾಗದಿಂದ ಕನ್ನಗುಡ್ಡೆ, ಪಶ್ಚಿಮದಿಂದ ರಮಾನಥ್ ಕೃಪಾ ರೈಸ್ ಮಿಲ್, ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿ 73 ಮತ್ತು ದಕ್ಷಿಣಕ್ಕೆ ಸರ್ಕಾರಿ ಜಾಗದ ಸುತ್ತ ಕಂಟೈನ್ಮೆಂಟ್ ಪ್ರದೇಶ ಘೋಷಣೆಯಾಗಿದೆ.

ಇದಲ್ಲದೆ ಕಂಟೈನ್‌ಮೆಂಟ್ ವಲಯದ ಸುತ್ತ ಐದು ಕಿ.ಮೀ ದೂರದಲ್ಲಿರುವ ಬಫರ್ ವಲಯವನ್ನು ಕಟ್ಟುನಿಟ್ಟಾದ ಸೀಲ್ ಡೌನ್ ನಿಯಮಗಳೊಂದಿಗೆ ಗುರುತಿಸಲಾಗಿದೆ. ಇದರ ವ್ಯಾಪ್ತಿ ಹೀಗೆ ಬರಲಿದೆ- ಪೂರ್ವದಲ್ಲಿ ಕಳ್ಳಪು, ಪಶ್ಚಿಮದಲ್ಲಿ ಕುಡುಪು , ಉತ್ತರದಲ್ಲಿ ಫರಂಗಿಪೇಟೆ ಮತ್ತು ದಕ್ಷಿಣದಲ್ಲಿ ಫಳ್ನೀರ್ ಇರಲಿದೆ. ಈ ವ್ಯಾಪ್ತಿಯಲ್ಲಿ 41,900 ಮನೆಗಳು, 1,808 ಅಂಗಡಿಗಳು ಒಟ್ಟು 1,82,500 ಜನಸಂಖ್ಯೆ ಇದೆ ಎಂದು ಅಧಿಸೂಚನೆ ತಿಳಿಸಿದೆ.

English summary :Mangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...