Mon,May13,2024
ಕನ್ನಡ / English

ಕಾಂಗ್ರೆಸ್ ಕೊಟ್ಟ 1 ಕೋಟಿ ರೂ. ಚೆಕ್ ನಕಲಿ: ಆರ್ ಅಶೋಕ್ ಗಂಭೀರ ಆರೋಪ | Janata news

04 May 2020
922

ಬೆಂಗಳೂರು : ಖಾತೆ ಬದಲಾಯಿಸುವ ಜ್ಞಾನ ಇಲ್ಲದವರು ನಮಗೆ ಸರಕಾರ ಹೇಗೆ ನಡೆಸಬೇಕೆಂದು ಪಾಠ ಮಾಡುತ್ತಾರೆ ಎಂದು, ಕೆಪಿಸಿಸಿ ಮುಖಂಡರ ಬಗ್ಗೆ ಸಚಿವರು ಲೇವಡಿ ಮಾಡಿದ್ದಾರೆ.

ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಲೆಟರ್, ಚೆಕ್‌ ಮೇಲೆ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ‌ ಸಹಿ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್ ಅಧ್ಯಕ್ಷರು ನೀಡಿದ ಚೆಕ್ ಮೇಲೆ ದಿನೇಶ್ ಗುಂಡುರಾವ್ ಸಹಿ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್. ಇವರ ಒಳ ಜಗಳ ಏನಿದೆಯೋ ಗೊತ್ತಿಲ್ಲ. ಚೆಕ್ ಮೇಲೆ ಡಿಕೆಶಿ ಸಹಿ ಇಲ್ಲ. ಹೀಗಾಗಿ ಈ ಚೆಕ್ ಕೂಡ ನಕಲಿ. ಇವರಿಗೆ ಖಾತೆ ಬದಲಾವಣೆ ಮಾಡುವ ಜ್ಞಾನ ಇಲ್ಲ. ಬಸ್ ಬಿಡುವ ಬಗ್ಗೆ ನಮಗೆ ಸಲಹೆ ನೀಡುತ್ತಾರೆ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.

ಇದಕ್ಕೂ ಮೊದಲು ರಾಜ್ಯ ಸರ್ಕಾರ ದುಪ್ಪಟ್ಟು ದರ ನಿಗದಿ ಮಾಡಿತ್ತು. ಇದನ್ನೇ ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್, ಮೆಜೆಸ್ಟಿಕ್‌ಗೆ ಲಗ್ಗೆ ಇಟ್ಟು ಕಾರ್ಮಿಕರನ್ನು ಸಂತೈಹಿಸುವ ಕೆಲಸ ಮಾಡಿತು. ಅಲ್ಲದೇ ಕಾರ್ಮಿಕರಿಗೆ ಉಚಿತವಾಗಿ ಹೋಗಲು ಒಂದು ಕೋಟಿ ರೂ. ಚೆಕ್ ಸಹ ನೀಡಿ ಗಮನಸೆಳೆದಿತ್ತು. ದುಡ್ಡು ಬೇಕಿದ್ದರೆ ಕೇಳಿ, ಭಿಕ್ಷೆ ಎತ್ತಿಯಾದರೂ ಕೊಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು.

ಎಂ.ಡಿ, ಕೆಎಸ್‌ಆರ್ ಟಿಸಿ ಹೆಸರಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್, ಒಂದು ಕೋಟಿ ರೂಪಾಯಿಯ ಚೆಕ್ ಅನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಚೇರಿಗೆ ಕಳುಹಿಸಿತ್ತು. ಈ ಚೆಕ್ ನಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಹಿಯಿತ್ತು. ಆದರೆ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಲೆಟರ್ ಹೆಡ್ ಇದೆ. ಇವರ ಒಳ ಜಗಳ ಏನಿದೆಯೋ ಗೊತ್ತಿಲ್ಲ. ಎಂದು ಸಚಿವ ಅಶೋಕ್, ಡಿಕೆಶಿಯವರ ವಿರುದ್ದ ಗುಡುಗಿದ್ದಾರೆ.

English summary :R.Ashok

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...