Sun,May19,2024
ಕನ್ನಡ / English

ಮಹಾರಾಷ್ಟ್ರ ಜೈಲಿಂದ ಶೇ.50 ಕೈದಿಗಳಿಗೆ ಬಿಡುಗಡೆ ನಿರ್ಧಾರ! | Janata news

13 May 2020
638

ಮುಂಬೈ : ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜೈಲುಗಳಲ್ಲಿರುವ ಶೇ.50 ರಷ್ಟುಕೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರದ ಉನ್ನತ ಮಟ್ಟದ ಸಮಿತಿ ತೀರ್ಮಾನಿಸಿದೆ.

ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರವನ್ನು ಅನುಸರಿಸುವುದು ಅತ್ಯಗತ್ಯ. ಹೀಗಾಗಿ, 17,000 ಕೈದಿಗಳನ್ನು ಮನೆಗೆ ಕಳುಹಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮಹಾರಾಷ್ಟ್ರದ ಆರ್ಥರ್ ರೋಡ್ ನಲ್ಲಿರುವ ಜೈಲಿನಲ್ಲಿ 185 ಮಂದಿ ಕೈದಿಗಳಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಮುಂಬೈನಲ್ಲಿರುವ ಬೈಕುಲ್ಲಾ ಮಹಿಳಾ ಕಾರಾಗೃಹದಲ್ಲಿ ಮಹಿಳಾ ಕೈದಿಗಳಲ್ಲಿ ಸೋಂಕು ಕಾಣಿಸಿಕೊಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೈದಿಗಳನ್ನು ಬಿಡುಗಡೆ ಮಾಡಲು ಸೂಚಿಸಲಾಗಿದೆ.

ಮೋಕಾ, ಟಾಡಾ, ಅಕ್ರಮ ಹಣ ವರ್ಗಾವಣೆಯಂತಹ ಗಂಭೀರ ಅಪರಾಧಗಳ ಮೇಲೆ ಶಿಕ್ಷೆಗೊಳಗಾದ ಕೈದಿಗಳನ್ನು ಹೊರತುಪಡಿಸಿ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಿರುವ ಕೈದಿಗಳಿಗೆ ಮಾತ್ರ ತಾತ್ಕಾಲಿಕ ಜಾಮೀನು ಅಥವಾ ಪೆರೋಲ್‌ ನೀಡಲಾಗುತ್ತದೆ ಎಂದು ಸಮಿತಿ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ಎಎ ಸಯ್ಯದ್‌ ಅವರ ನೇತೃತ್ವದ ತಂಡ ಕೈದಿಗಳ ಬಿಡುಗಡೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ತಯಾರಿಸಿದೆ. ಇದರಂತೆ ಕೋಕಾ, ಎಂಪಿಐಡಿ, ಯುಎಪಿಎ, ಪಿಎಂಎಲ್‌ಎ ಕಾಯಿದೆಗಳಡಿ ಜೈಲಿನಲ್ಲಿರುವ ಅಪರಾಧಿ ಅಥವಾ ಆರೋಪಿಗಳಿಗೆ ಈ ಬಿಡುಗಡೆ ಭಾಗ್ಯ ಸಿಗುವುದಿಲ್ಲ. ಇವರು ಜೈಲಿನಿಂದ ಹೊರ ಬರಬೇಕಾದರೆ ಈ ಹಿಂದಿನಂತೆಯೇ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಜಾಮೀನು ಪಡೆಯಬೇಕಾಗುತ್ತದೆ.

English summary :Maharashtra panel decides to release 50% of prisoners on temporary bail to prevent spread of Covid-19

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...