Sun,May19,2024
ಕನ್ನಡ / English

ಸ್ವಾವಲಂಭಿ ಭಾರತದ ರೂ.20 ಲಕ್ಷ ಕೋಟಿ ಪ್ಯಾಕೇಜ್‌ ಬಾಗ-1 ವಿವರ ನೀಡಿದ ವಿತ್ತ ಸಚಿವರು | Janata news

13 May 2020
675

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರುಪಾಯಿಯ ಬೃಹತ್‌ ಪ್ಯಾಕೇಜ್‌ ಭಾರತವನ್ನು ಸ್ವಾವಲಂಭಿಯಾಗಿಸುವ ದೂರದೃಷ್ಟಿ ಹೊಂದಿದೆ. ಐದು ಸ್ತಂಭಗಳಾದ ಆರ್ಥಿಕತೆ, ತಂತ್ರಜ್ಞಾನ ಆಧಾರಿತ ವ್ಯವಸ್ಥೆ, ಮೂಲಸೌಕರ್ಯ, ಡೆಮಾಗ್ರಫಿ (ಜನಸಂಖ್ಯೆ) ಮತ್ತು ಬೇಡಿಕೆ ಆಧಾರದಲ್ಲಿ ಭಾರತವನ್ನು ಸ್ವಾವಲಂಭಿಯಾಗಿರುವ ಪ್ಯಾಕೇಜ್‌ ಇದಾಗಿದೆ. ಹಾಗಾಗಿ ಇದನ್ನು ಆತ್ಮ ನಿರ್ಭರ್ ಭಾರತ್‌ ಎನ್ನಲಾಗಿದೆ.

ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಅವರ ಅಡಿಯಲ್ಲಿ ರೂ.1.70 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್. ಕರೋನಾ ವೈರಸ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ಬಡವರಿಗೆ ಸಹಾಯ ಮಾಡಲು ಯೋಜನೆ:
• ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ ಮೌಲ್ಯದ ಇನ್ಸೂರೆನ್ಸ್.
• ಮುಂದಿನ 3 ತಿಂಗಳು - 80 ಕೋಟಿ ಬಡವರಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಗೋಧಿ ಅಥವಾ ಅಕ್ಕಿ ಲಾಭವನ್ನು ನೀಡಲಾಗಿದೆ.
• ಮುಂದಿನ 3ತಿಂಗಳು - ಪ್ರತಿ ತಿಂಗಳು 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ.
• ಮುಂದಿನ 3 ತಿಂಗಳು - 20 ಕೋಟಿ ಮಹಿಳೆಯರು ಜನ ಧನ್ ಖಾತೆದಾರರಿಗೆ ತಿಂಗಳಿಗೆ ರೂ.500/-
• ಮುಂದಿನ 3 ತಿಂಗಳು - ಗ್ಯಾಸ್ ಸಿಲಿಂಡರ್‌ಗಳನ್ನು 8 ಕೋಟಿ ಬಡ ಕುಟುಂಬಗಳಿಗೆ ಉಚಿತವಾಗಿ ನೀಡಲಾಗುತ್ತದೆ.
• ಎಂಎನ್‌ಆರ್‌ಇಜಿಎ ವೇತನದಲ್ಲಿ ದಿನಕ್ಕೆ ರೂ.182 ರಿಂದ ರೂ.202 ಹೆಚ್ಚಳ 13.62 ಕೋಟಿ ಕುಟುಂಬಗಳು ಲಾಭ ಪಡೆಯಲಿದೆ.
• ರೂ.1,000 ಪರಿಹಾರ - 3 ಕೋಟಿ ಬಡ-ಹಿರಿಯ ನಾಗರಿಕ, ಬಡ-ವಿಧವೆಯರ ಮತ್ತು ಬಡ-ದಿವ್ಯಾಂಗ್ ಜನರಿಗೆ.

• ಸಣ್ಣ ಕೈಗಾರಿಕೆಗಳಿಗೆ 3ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದರಿಂದ 45 ಲಕ್ಷ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅಡಮಾನವಿಲ್ಲದೆ ಸಾಲ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ. 25 ರಿಂದ 100 ಕೋಟಿ ರೂಪಾಯಿ ವಹಿವಾಟು ಹೊಂದಿರುವ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ.

• ಸಾಲ ಮರುಪಾವತಿಗೆ ನಾಲ್ಕು ವರ್ಷಗಳವರೆಗೆ ಕಾಲಾವಕಾಶ ನೀಡಲಾಗಿದೆ. ಬ್ಯಾಂಕುಗಳು ನೀಡುವ ಸಾಲಕ್ಕೆ ಕೇಂದ್ರ ಸರಕಾರವೇ ಗ್ಯಾರಂಟಿ ನೀಡಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

• ಸಣ್ಣ ಕೈಗಾರಿಕೆಗಳು ಉದ್ಯೋಗಿಗಳಿಗೆ ಸಂಬಳ ನೀಡಲು ಹಣ ಇಲ್ಲದಿದ್ದರೆ, ಕೇಂದ್ರ ನೆರವು ನೀಡುತ್ತದೆ. ಅಕ್ಟೋಬರ್‌ 31ರವರೆಗೆ ಕೈಗಾರಿಕೆಗಳು ಸಾಲ ಪಡೆಯಬಹುದು.

• 200 ಕೋಟಿ ರೂಪಾಯಿ ವರೆಗೆ ಜಾಗತಿಕ ಟೆಂಡರ್‌ ಇಲ್ಲ. ವಿದೇಶಿ ಕಂಪನಿಗಳಿಗೆ ಟೆಂಡರ್‌ನಲ್ಲಿ ಅವಕಾಶ ಇಲ್ಲ. ಇನ್ನು ಮುಂದೆ ಸೇವಾ ವಲಯ ಮತ್ತು ಉತ್ಪಾದನಾ ವಲಯ ಎರಡೂ ಒಂದೇ ಆಗಲಿವೆ.

• ಸಣ್ಣ ಕೈಗಾರಿಕೆಗಳಿಗೆ ಸರಕಾರ ಉಳಿಸಿಕೊಂಡಿರುವ ಬಾಕಿಯನ್ನು ವಾಪಸ್‌ ಕೊಡಲಿದ್ದೇವೆ. ಮುಂದಿನ 45 ದಿನಗಳಲ್ಲಿ ಬಾಕಿ ವಾಪಸ್‌ ನೀಡಲಾಗುವುದು. 15 ಸಾವಿರ ರೂಪಾಯಿ ಒಳಗೆ ಸಂಬಳ ತೆಗೆದುಕೊಳ್ಳುವ ಉದ್ಯೋಗಿಗಳಿಗೆ ಕೂಡಲೇ ಇಪಿಎಫ್‌ ಪಾವತಿ ಮಾಡಲಾಗುವುದು ಎಂದು ತಿಳಿಸಿದರು.

• ಕೊರೊನಾ ವೈರಸ್ ಲಾಕ್‌ಡೌನ್‌ ಪರಿಣಾಮವಾಗಿ ವಿದ್ಯುತ್‌ ಸರಬರಾಜು ಕಂಪನಿಗಳು ಭಾರೀ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ವಿದ್ಯುತ್‌ ಸರಬರಾಜು ಕಂಪನಿಗಳಿಗೆಂದೇ 90 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದರಿಂದ ಈ ಕಂಪನಿಗಳು ನಷ್ಟವನ್ನು ಭರಿಸಲಿವೆ ಎಂದಿದ್ದಾರೆ.

• ಕೊರೊನಾವನ್ನು ನೈಸರ್ಗಿಕ ವಿಕೋಪ ಎಂದು ಪರಿಗಣಿಸಿ ರಿಯಲ್‌ ಎಸ್ಟೇಟ್‌ ಉದ್ಯಮಕ್ಕೂ ಕೇಂದ್ರ ಸರಕಾರ ರಿಲೀಫ್‌ ನೀಡಿದೆ. ಕೊರೊನಾವನ್ನು ನೈಸರ್ಗಿಕ ವಿಕೋಪ ಎಂದು ಪರಿಗಣಿಸಲು ಸೂಚಿಸಲಾಗಿದೆ. ಕೇಂದ್ರ ನಗರಾಭಿವೃದ್ಧಿ ಇಲಾಖೆಯಿಂದ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಲಾಗಿದೆ.

• ಟಿಡಿಎಸ್‌/ ಟಿಸಿಎಸ್‌ಗಳಿಗೆ ಶೇ.25ರಷ್ಟು ಕಡಿತ ಮಾಡಿದೆ. ಇದರಿಂದ ಜನರಿಗೆ 50 ಸಾವಿರ ಕೋಟಿ ರೂಪಾಯಿ ಉಳಿತಾಯ ಆಗಲಿದೆ. ಇದು ನಾಳೆಯಿಂದಲೇ ಜಾರಿಯಾಗಿ 2021ರ ಮಾರ್ಚ್‌ ವರೆಗೆ ಜಾರಿಯಲ್ಲಿರುತ್ತದೆ. ಆದಾಯ ತೆರಿಗೆ ಪಾವತಿ ಮಾಡುವರಿಗೆ ಈಗಾಗಲೇ ಐಟಿ ರೀಫಂಡ್‌ ನೀಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

English summary :Finance minister provides Atmanirbhar Bharath Part-1 details

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...