Sun,May19,2024
ಕನ್ನಡ / English

ನೇಪಾಳವು ಭಾರತದ ಲಿಪುಲೆಖ್‌ ರಸ್ತೆಯನ್ನು ಚೀನಾದ ಆಜ್ಞೆ ಮೇರೆಗೆ ಆಕ್ಷೇಪಿಸಿದೆ : ಸುಳಿವು ನೀಡಿದ ಸೇನಾ ಮುಖ್ಯಸ್ಥ | Janata news

15 May 2020
734

ನವದೆಹಲಿ : ಇತ್ತೀಚಿಗೆ ಚಾಲನೆ ನೀಡಲಾದ ಉತ್ತರಾಖಂಡದ ಲಿಪುಲೆಖ್‌ಗೆ ಭಾರತದ ಹೊಸ ರಸ್ತೆಗೆ, ನೇಪಾಳ ಮಾಡುತ್ತಿರುವ ಆಕ್ಷೇಪಣೆ ಬೇರೊಬ್ಬರ ಆಜ್ಞೆಯ ಮೇರೆಗೆ ಎಂದು ಭಾರತೀಯ ಭೂಸೇನೆಯ ಜನರಲ್ ಎಂ.ಎಂ.ನರವಣೆ ಅವರು ವೆಬ್‌ನಾರ್‌ನಲ್ಲಿ # ಚೀನಾ ಕಡೆಗೆ ಸುಳಿವು ನೀಡಿದ್ದಾರೆ

ಚೀನಾದ ಪಾತ್ರದ ಕುರಿತು ನೀಡಿದ ಸ್ಪಷ್ಟ ಸೂಚನೆಯೊಂದರಲ್ಲಿ, ಭಾರತ ಹಾಕುತ್ತಿರುವ ಉತ್ತರಾಖಂಡದ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ ರಸ್ತೆಯನ್ನು ಬೇರೊಬ್ಬರ ಆಜ್ಞೆಯ ಮೇರೆಗೆ ನೇಪಾಳ ಆಕ್ಷೇಪಿಸಿದೆ ಎಂದು ನಂಬಲು ಕಾರಣಗಳಿವೆ, ಎಂದು ಭೂ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಇಂದು ಶುಕ್ರವಾರ ಹೇಳಿದ್ದಾರೆ. ಸೈನ್ಯವು ಚೀನಾದ ಮಿಲಿಟರಿಯೊಂದಿಗೆ ಮುಖಾಮುಖಿ ಘಟನೆಗಳನ್ನು ಕೇಸ್-ಬೈ-ಕೇಸ್ ಆಧಾರದ ಮೇಲೆ ನಿರ್ವಹಿಸುತ್ತಿದೆ, ಎಂದು ಅವರು ಪ್ರತಿಪಾದಿಸಿದ್ದಾರೆ.

ರಕ್ಷಣಾ ಥಿಂಕ್-ಟ್ಯಾಂಕ್ ದಲ್ಲಿ ನಡೆದ ಸಂವಾದದಲ್ಲಿ ಜನರಲ್ ನರವಣೆ, ಉತ್ತರ ಮತ್ತು ಪಶ್ಚಿಮ ಗಡಿಗಳಲ್ಲಿ ಎರಡು-ಮುಂಭಾಗದ ಯುದ್ಧದ ಸನ್ನಿವೇಶಕ್ಕೆ ಭಾರತವು ಎಚ್ಚರದಿಂದ ಇರಬೇಕಾಗುತ್ತದೆ, ಎಂದು ಹೇಳಿದರೂ, ಪ್ರತಿಯೊಂದು ಮುಖಾಮುಖಿಯು ಅಂತಹ ಪರಿಸ್ಥಿತಿಗೆ ಕಾರಣವಾಗುವ ಸಾಧ್ಯತೆಯನ್ನು ಅವರು ಅಲ್ಲಗಳೆದರು.

ಟೂರ್ ಆಫ್ ಡ್ಯೂಟಿ (ಟಿಒಡಿ) ಪರಿಕಲ್ಪನೆಯಡಿ ಮೂರು ವರ್ಷಗಳ ಅವಧಿಗೆ ಯುವಕರನ್ನು ಸೇರಿಸಲು ಸೇನೆಯ ದೊಡ್ಡ ಪ್ರಸ್ತಾಪದ ಕುರಿತು ಮಾತನಾಡಿದ ಜನರಲ್ ನರವಣೆ, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪ್ರತಿಕ್ರಿಯೆಯ ನಂತರ, ಸೈನ್ಯದಲ್ಲಿ ಶಾಶ್ವತ ವೃತ್ತಿಜೀವನವನ್ನು ಆರಿಸದೆ ಮಿಲಿಟರಿ ಜೀವನವನ್ನು ಅನುಭವಿಸಲು ಅವರು ಬಯಸುತ್ತಾರೆ ಎಂಬ ಈ ಕಲ್ಪನೆಯು ಮೊಳಕೆಯೊಡೆದಿದೆ. ಪಿಂಚಣಿ ಪಾವತಿ ಮತ್ತು ಇತರ ಸವಲತ್ತುಗಳ ಕಾರಣದಿಂದಾಗಿ ಆಗುತ್ತಿರುವ ಆದಾಯ ವೆಚ್ಚವನ್ನು ಕಡಿತಗೊಳಿಸಲು ಸೈನ್ಯಕ್ಕೆ ಟಿಒಡಿ ಸಹಾಯ ಮಾಡುತ್ತದೆ, ಎಂದು ಜನರಲ್ ನರವಣೆ ಹೇಳಿದರು.

ಕೋವಿಡ್-19 ಬಿಕ್ಕಟ್ಟಿನಿಂದಾಗಿ ಪ್ರಸಕ್ತ ಹಣಕಾಸು ವರ್ಷದಿಂದ ಖರ್ಚನ್ನು ಶೇಕಡಾ 20ರಷ್ಟು ಕಡಿತಗೊಳಿಸುವಂತೆ ಸರ್ಕಾರದಿಂದ ಸೇನೆಗೆ ಆದೇಶ ಬಂದಿದೆ, ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ತನ್ನ ಯುದ್ಧ ಸನ್ನದ್ಧತೆಗೆ ಯಾವುದೇ ರಾಜಿ ಮಾಡಿಕೊಳ್ಳದೆ ಸೇನೆಯು ಅದನ್ನು ಕಾರ್ಯಗತಗೊಳಿಸುತ್ತಿದೆ, ಎಂದು ಹೇಳಿದರು.

ಸೈನಿಕರ ಭಾರಿ ಪ್ರಮಾಣದ ಚಲನೆಯನ್ನು ನಿರ್ಬಂಧಿಸುವುದು ಸೇರಿದಂತೆ ವಿವಿಧ ಕ್ರಮಗಳ ಮೂಲಕ ವೆಚ್ಚವನ್ನು ಕಡಿತಗೊಳಿಸಲಾಗುತ್ತಿದೆ, ಎಂದು ಮನೋಹರ್ ಪರಿಕ್ಕರ್ ಇನ್ಸ್ಟಿಟ್ಯೂಟ್ ಫಾರ್ ಡಿಫೆನ್ಸ್ ಸ್ಟಡೀಸ್ ಮತ್ತು ಅನಾಲಿಸಿಸ್ ಆಯೋಜಿಸಿರುವ ವಿಡಿಯೋ-ಕಾನ್ಫರೆನ್ಸ್ ನಲ್ಲಿ ಸೇನಾ ಮುಖ್ಯಸ್ಥರು ಹೇಳಿದರು.

English summary :Nepal objecting Indias Nipulekh road on China behest, hints Army Chief

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...