Sun,May19,2024
ಕನ್ನಡ / English

COVID-19 ವಿರುದ್ಧ ಹೋರಾಡಲು ಭಾರತಕ್ಕೆ ವೆಂಟಿಲೇಟರ್‌ಗಳನ್ನು ದಾನ ಮಾಡುವುದಾಗಿ ಘೋಷಿಸಿದ: ಡೊನಾಲ್ಡ್ ಟ್ರಂಪ್ | Janata news

16 May 2020
623

ವಾಷಿಂಗ್ಟನ್ : ನಾವು ಇಂಡಿಯಾಗೆ ವೆಂಟಿಲೇಟರ್ ಗಳನ್ನು ಸಪ್ಲೈ ಮಾಡುತ್ತೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ನೆರವಿನ ಹಸ್ತ ಚಾಚಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆಂಟಿಲೇಟರ್‌ಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದಾರೆ.

ಅಮೆರಿಕದಿಂದ ಭಾರತಕ್ಕೆ ಸಾಕಷ್ಟು ಸಂಖ್ಯೆಯ ವೆಂಟಿಲೇಟರ್‍ಗಳನ್ನು ಕಳುಹಿಸಿಕೊಡಲಾಗುವುದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾನು ಸಮಾಲೋಚನೆ ನಡೆಸಿದ್ದೇನೆ. ಅತಿ ಶೀಘ್ರದಲ್ಲೇ ವೆಂಟಿಲೇಟರ್‍ಗಳು ಭಾರತಕ್ಕೆ ಪೂರೈಕೆಯಾಗಲಿವೆ ಎಂದು ಮಾಹಿತಿ ನೀಡಿದರು.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಟ್ರಂಪ್ ಅವರು, ಭಾರತದಲ್ಲಿರುವ ನಮ್ಮ ಸ್ನೇಹಿತರಿಗೆ ಅಮೆರಿಕ ವೆಂಟಿಲೇಟರ್ ಗಳನ್ನು ದಾನ ಮಾಡುತ್ತದೆ ಎಂದು ಘೋಷಿಸಲು ನನಗೆ ಹೆಮ್ಮೆ ಇದೆ. ಈ ಸಾಂಕ್ರಾಮಿಕ ರೋಗದ ಸಮಯದಲ್ಲಿ ನಾವು ಭಾರತ ಮತ್ತು ನರೇಂದ್ರ ಮೋದಿ ಅವರ ಜೊತೆಗೆ ನಿಲ್ಲುತ್ತೇವೆ. ಜೊತೆಗೆ ಕೊರೊನಾಗೆ ಲಸಿಕೆ ತಯಾರಿಸಲು ನಾವು ಭಾರತದ ಜೊತೆ ಸಹಕರಿಸುತ್ತಿದ್ದೇವೆ. ನಾವು ಒಟ್ಟಾಗಿ ಕಣ್ಣಿಗೆ ಕಾಣದ ಶತ್ರುವನ್ನು ಸೋಲಿಸುತ್ತೇವೆ ಎಂದಿದ್ದಾರೆ.

ಡೆಡ್ಲಿ ಕೊರೊನಾ ವೈರಸ್ ವಿರುದ್ಧ ಔಷಧಿ ಮತ್ತು ಲಸಿಕೆಗಳನ್ನು ಅಭಿವೃದ್ದಿಗೊಳಿಸಲು ಶ್ರಮಿಸುತ್ತಿರುವ ಭಾರತೀಯ ಮೂಲದ ಅಮೆರಿಕ ವೈದ್ಯರು, ಶಂಶೋಧಕರು ಮತ್ತು ವಿಜ್ಞಾನಿಗಳ ಪರಿಶ್ರಮವನ್ನು ಟ್ರಂಪ್ ಶ್ಲಾಘಿಸಿದ್ದಾರೆ.

ಈ ಹಿಂದೆ ಭಾರತವು ಮಲೇರಿಯಾ ರೋಗದ ವಿರುದ್ಧ ಬಳಸಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧವನ್ನು ಅಮೆರಿಕಾಕ್ಕೆ ನೀಡಿತ್ತು. ಇದೀಗ ಅಮೆರಿಕಾವೂ ಭಾರತದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವೆಂಟಿಲೇಟರ್ ಗಳ ಸಹಾಯ ಮಾಡಲು ಮುಂದಾಗಿವೆ.

English summary :Donald Trump says United States will donate ventilators to help India fight COVID-19

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...