Sun,Apr28,2024
ಕನ್ನಡ / English

ಬೆಂಗಳೂರಿನಲ್ಲಿ ಇವತ್ತು ಶಬ್ದ ಹೇಗೆ ಕೇಳಿ ಬಂತು? ಭೂಕಂಪ/ಸ್ಪೋಟಕ/ವಾತಾವರಣ/ವಿಮಾನ | Janata news

20 May 2020
820

ಬೆಂಗಳೂರು : ಇಂದು ಬುಧವಾರ ಮಧ್ಯಾಹ್ನ 1:25ರ ಆಸುಪಾಸು ಬೆಂಗಳೂರಿನ ಕೆಲವು ಭಾಗಗಳಲ್ಲಿ ನಿವಾಸಿಗಳು ಒಂದು ರೀತಿಯ ದೊಡ್ಡ ನಿಗೂಡ ಶಬ್ದವನ್ನು ಕೇಳಿ, ಆತಂಕದ ವಾತಾವರಣ ಸೃಷ್ಟಿಗೆ ಕಾರಣವಾಯಿತು. ನಂತರ ನೆಟಿಜನ್‌ಗಳು ಸಾಮಾಜಿಕ ತಾಣಗಳಲ್ಲಿ ತಮ್ಮ ಆತಂಕವನ್ನು ಪರಿಸ್ಥಿತಿಯನ್ನು ವ್ಯಕ್ತಪಡಿಸಿದರು.

ಬೆಂಗಳೂರಿನ ಅನೇಕ ಭಾಗಗಳಲ್ಲಿ ಕೇಳಿ ಬಂದ ಒಂದು ಅಬ್ಬರದ ಶಬ್ದವು ಸೂಪರ್ಸಾನಿಕ್ ವಿಮಾನದಿಂದ, ಭೂಕಂಪದಿಂದ, ಸ್ಪೋಟಕ ಅಥವಾ ಶೀತ ಮತ್ತು ಬೆಚ್ಚಗಿನ ಗಾಳಿಯ ಘರ್ಷಣೆಯಿಂದ ಉಂಟಾಗಿದೆಯೋ? ಇವುಗಳಲ್ಲಿ ಯಾವುದಾದರೂ ಆಗಿರಬಹುದು, ಆದರೆ ಅಧಿಕಾರಿಗಳು ಭೂಕಂಪವನ್ನು ಅಧಿಕೃತವಾಗಿ ತಳ್ಳಿಹಾಕಿದ್ದಾರೆ.

ಪೂರ್ವ ಬೆಂಗಳೂರಿನಾದ್ಯಂತ ಅಬ್ಬರದ ಶಬ್ದ ಕೇಳಿಸಿತು. ನಾವು ಧ್ವನಿಯ ಮೂಲವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ನಾವು ವೈಟ್‌ಫೀಲ್ಡ್ ಪ್ರದೇಶದಲ್ಲಿ ನೆಲದ ಮೇಲೆ ಶೋಧ ನಡೆಸಿದ್ದೇವೆ ಆದರೆ ಇಲ್ಲಿಯವರೆಗೆ ಯಾವುದಕ್ಕೂ ಹಾನಿಯಾಗಿಲ್ಲ, ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್.ಅನುಚೆತ್ ಹೇಳಿದ್ದರು.

ವಿವರಗಳ ಪ್ರಕಾರ, ಬೆಂಗಳೂರಿನ ವೈಟ್‌ಫೀಲ್ಡ್, ಮಾರತಹಳ್ಳಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮಧ್ಯಾಹ್ನ ದೊಡ್ಡ ಶಬ್ದ ಕೇಳಿಸಿತು. ಕೆಲವು ನಿವಾಸಿಗಳು ತಾವು ಸಿಡಿಮದ್ದಿನ ಸದ್ದು ಎಂದು ಹೇಳಿದರೆ, ಕೆಲವರು ಮಿರಾಜ್2000 ಹಾರಾಟ ನಡೆಸಿರಬಹುದು ಎಂದಿದ್ದಾರೆ. ಇತರರು ತಮ್ಮ ಮನೆಗಳು ನಡುಗುತ್ತಿವೆ ಮತ್ತು ಕಿಟಕಿಗಳು ಐದು ಸೆಕೆಂಡುಗಳ ಕಾಲ ಸದ್ದು ಮಾಡುತ್ತಿವೆ ಹಾಗೂ ಭೂಕಂಪ ಎಂದು ಭಾವಿಸಿದ್ದರು.

ಬಹುತೇಕ ಬೆಂಗಳೂರು ನಗರ ಭಾಗಗಳಲ್ಲಿ ಅನುಭವಕ್ಕೆ ಬಂದಿರುವ ಈ ಶಬ್ದವನ್ನು ರಾಮಮೂರ್ತಿ ನಗರ, ಎಚ್‌ಎಎಲ್, ಹಳೆ ಮದ್ರಾಸ್ ರಸ್ತೆ, ಉಲಸೂರು, ಕುಂದನಹಳ್ಳಿ, ಕಮ್ಮನಹಳ್ಳಿ, ಸಿ.ವಿ.ರಾಮನ್ ನಗರ, ಹೊಸೂರು ರಸ್ತೆ, ವೈಟ್‌ಫೀಲ್ಡ್ ಮತ್ತು ಎಚ್‌ಎಸ್‌ಆರ್ ಬಡಾವಣೆಗಳಲ್ಲಿ ಕೇಳಿಸಿದೆ ಎಂದು ಸ್ಥಳಿಯರು ದೂರಿದ್ದಾರೆ. ಬೆಂಗಳೂರು ಪಶ್ಚಿಮ ಬಾಗಗಳಾದ ನಾಗರಭಾವಿಯಲ್ಲೂ ಕೆಲವರು ಈ ಕುರಿತು ಹೇಳಿದ್ದಾರೆ.

ಏತನ್ಮಧ್ಯೆ, ನಗರದಲ್ಲಿ ಎಲ್ಲಿಯೂ ಯಾವುದೇ ಹಾನಿ ಸಂಭವಿಸಿಲ್ಲ, ಆದರೆ, ಸುಖೋಯಿ30 ಯುದ್ಧ ವಿಮಾನದ ಪರೀಕ್ಷಣಾ ಹಾರಾಟ ನಡೆಯುತ್ತಿದೆ ಎಂದು ಕೆಲವರು ಹೇಳಿದ್ದರೂ, ಅಧಿಕೃತವಾಗಿ ಯಾವುದೂ ಬಯಲಾಗಿಲ್ಲ. ಇದು ವಿಮಾನವೇ ಎಂದು ಪರೀಕ್ಷಿಸಲು ವಾಯುಪಡೆಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಲಾಗಿತ್ತಾದರೂ, ಯಾವುದೇ ಸಮರ್ಪಕ ಮಾಹಿತಿ ತಿಳಿದುಬಂದಿಲ್ಲ.

English summary :What did Bengaluru here today? Earthquake/Blast/Molecular/Flight

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...