Sun,May19,2024
ಕನ್ನಡ / English

ಜಲ ಜೀವನ್ ಮಿಷನ್ ಯೋಜನೆ: 15 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕದ ಗುರಿ | Janata news

20 May 2020
683

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತಂತೆ ಕೇಂದ್ರ ಸಚಿವ ಶೇಖಾವತ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಜೀವನ್ ಮಿಷನ್ ಯೋಜನೆಯನ್ನು ತ್ವರಿತಗತಿಯಲ್ಲಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಯೋಜನೆಯನ್ನು ಕರ್ನಾಟಕ ರಾಜ್ಯದಲ್ಲಿ ಪೂರ್ಣಗೊಳಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಜಲ ಜೀವನ್ ಮಿಷನ್ ಯೋಜನೆ - ದೇಶದ ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ಶುದ್ಧ ನಲ್ಲಿ ನೀರನ್ನು ಒದಗಿಸುವ ಗುರಿ ಹೊಂದಿರುವ ಯೋಜನೆ.

ಒಟ್ಟು 3.5 ಲಕ್ಷ ಕೋಟಿ ರೂಪಾಯಿಗಳ ಯೋಜನೆ ಇದಾಗಿದ್ದು, ದೇಶದ ಗ್ರಾಮೀಣ ಭಾಗದ 18 ಕೋಟಿ ಕುಟುಂಬಗಳಿಗೆ ನಲ್ಲಿ (ನಳ) ನೀರು ಪೂರೈಕೆ ಮಾಡುವುದು ಯೋಜನೆಯ ಉದ್ದೇಶ ಹೊಂದಿದ್ದು, ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ ಶೇ. 50ರ ಅನುದಾನದೊಂದಿಗೆ ಜಾರಿಗೊಳಿಸಲಾಗುತ್ತಿದ್ದು, ರಾಜ್ಯಕ್ಕೆ 1150 ಕೋಟಿ ರೂ. ಅನುದಾನ ಮಂಜೂರಾಗಿದೆ.

ರಾಜ್ಯದಲ್ಲಿ 15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಜೋಡಿಸುವ ಗುರಿ ನಿಗದಿ ಪಡಿಸಲಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಈ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿಯವರು ಮಾಹಿತಿ ನೀಡಿದರು.

ವಿಡಿಯೊ ಕಾನ್ಫರೆನ್ಸ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಭಾಗವಹಿಸಿದ್ದರು.

English summary :Jal jivan mishan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...