Mon,May20,2024
ಕನ್ನಡ / English

ಸಾವರ್ಕರ್ ಹೆಸರು ತೆಗೆದು ಹಾಕಿ, ವಿರೋಧಕ್ಕೆ ಮಣಿಯಿತೇ ಸರ್ಕಾರ? | Janata news

28 May 2020
816

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಬೇಕಿದ್ದ, ಬೆಂಗಳೂರಿನ ಯಲಹಂಕದ ಡೈರಿ ವೃತ್ತ ಬಳಿ ನಿರ್ಮಿಸಲಾದ ಮೇಲ್ಸೇತುವೆಗೆ ವೀರ ಸಾವರ್ಕರ್ ನಾಮಕರಣ ಮಾಡುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದೆ.

ಇಂದು ಗುರುವಾರ ಸ್ವಾತಂತ್ಯ್ರ ಹೋರಾಟಗಾರ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಯಲಹಂಕದ ಡೈರಿ ವೃತ್ತ ಬಳಿ ನಿರ್ಮಿಸಲಾದ ಹೊಸ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಟ್ಟು ಉದ್ಘಾಟನೆ ಮಾಡಲು ಮೊದಲು ನಿರ್ಧಾರ ಮಾಡಲಾಗಿತ್ತು.

ಸರ್ಕಾರದ ಈ ನಿರ್ಧಾರ ಹೊರ ಬಿಳುತ್ತಿದ್ದಂತೆ ಪ್ರತಿಪಕ್ಷಗಳಾದ ಜೆಡಿಎಸ್ ಮುಖಂಡರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಸೇರಿದಂತೆ ಅನೇಕ ಮುಖಂಡರು, ಈ ಹಂತದಲ್ಲಿ ಉದ್ಘಾಟನೆ ಬೇಕಿರಲಿಲ್ಲ, ಕೂಡಲೇ ನಿರ್ಧಾರ ಕೈ ಬಿಡಬೇಕು, ಎಂದು ಒತ್ತಾಯಿಸಿದ್ದರು.

ಇದಾದ ಬಳಿಕ ವಿರೋಧಗಳ ಒತ್ತಡಕ್ಕೆ ಮಣಿದಂತೆ ರಾಜ್ಯ ಸರ್ಕಾರ ಕಂಡುಬಂದಿದ್ದು, ಈ ಮೊದಲು ಆಹ್ವಾನ ಪತ್ರಿಕೆಯಲ್ಲಿ ನಮುದಿಸಲಾಗಿದ್ದ, ವೀರ ಸಾವರ್ಕರ್ ಮೇಲುಸೇತುವೆ ಉದ್ಘಾಟನಾ ಕಾರ್ಯಕ್ರಮ ದ ಬದಲು, ಸಾವರ್ಕರ್ ಮತ್ತು ಕಾರ್ಯಕ್ರಮ ತೆಗೆದು ಹಾಕಿ ಕೇವಲ, ಮೇಲ್ಸೇತುವೆ ಉದ್ಘಾಟನೆ, ಎಂದು ಮುದ್ರಿಸಲಾಯಿತು.

ಆದರೆ, ಸರ್ಕಾರದ ಈ ಯು ಟರ್ನ್ ನಿರ್ಧಾರವನ್ನು ಪಕ್ಷದ ಮೂಲ ಬೆಂಬಲಿಗರೇ ವಿರೋಧಿಸುವುದು ಕಂಡು ಬಂದಿದ್ದು, ಆಕ್ರೋಶಕ್ಕೆ ಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಕುರಿತು ಬೇಸರ ವ್ಯಕ್ತಪಡಿಸಿ ನಿರ್ಧಾರವನ್ನು ಖಂಡಿಸಿದ್ದಾರೆ.

ಸದ್ಯಕ್ಕೆ ಟೀಕೆಗಳಿಂದ ತಪ್ಪಿಸಿಕೊಳ್ಳುವಂತೆ, ಕೊರೊನಾ ನೆಪದಲ್ಲಿ ಉದ್ಘಾಟನೆ ಕಾರ್ಯಕ್ರಮವನ್ನೇ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೂ ಕೆಲವು ಅಭಿಮಾನಿಗಳು ಮೇಲ್ಸೇತುವೆ ಮೇಲೆ ವೀರ ಸಾವರ್ಕರ್ ಮೇಲುಸೇತುವೆ ಎಂದು ತಾವೇ ರಸ್ತೆ ಮೇಲೆ ಬರೆಯುವ ಮೂಲಕ ನಾಮಕರಣಕ್ಕೆ ಮುಂದಾಗಿದ್ದಾರೆ.

English summary :Savarkar name removed, Govt. bent to opposition?

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...