Sat,May18,2024
ಕನ್ನಡ / English

ನಟ ಚಿರಂಜೀವಿ ಸರ್ಜಾ ನಿಧನ: ಸಿಎಂ ಬಿಎಸ್‌ವೈ, ಸಿದ್ದರಾಮಯ್ಯ, ನಟ ದರ್ಶನ್, ಪುನೀತ್ ಹಾಗೂ ಹಲವು ಗಣ್ಯರು ಸಂತಾಪ! | Janata news

07 Jun 2020
799

ಬೆಂಗಳೂರು : ಇಂದು ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ಅವರು ನಿಧನರಾಗಿದ್ಧಾರೆ. ನಟನ ಹಠಾತ್​ ಸಾವಿನಿಂದ ಸೆಲೆಬ್ರೆಟಿಗಳು ಶಾಕ್​ಗೆ ಒಳಗಾಗಿದ್ದಾರೆ. ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಚಿರಂಜೀವಿ ಸರ್ಜಾ ಸಾವಿನ ಸುದ್ದಿ ತಿಳಿದು ತೀವ್ರ ಅಘಾತವಾಗಿದೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದ್ದಾರೆ. 39ನೇ ವರ್ಷಕ್ಕೆ ಅಕಾಲಿಕ ಮರಣ ಹೊಂದಿರೋದು ದಿಗ್ಬ್ರಮೆ ಮೂಡಿಸಿದೆ ಎಂದಿದ್ದಾರೆ.

ಕನ್ನಡ ಚಿತ್ರರಂಗದ ‌ಉದಯೋನ್ಮುಖ ನಟರಾದ ಚಿರಂಜೀವಿ ಸರ್ಜಾ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ.ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ, ಎಂದು ಮಾಜಿ ಪ್ರಧಾನ ಮಂತ್ರಿ ಎಚ್‌ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಸಿದ್ದರಾಮಯ್ಯ - ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವನ್ನುಂಟು ಮಾಡಿದೆ. ಇನ್ನಷ್ಟು ಕಾಲ ನಟಿಸುತ್ತ, ಎಲ್ಲರನ್ನು ರಂಜಿಸುತ್ತ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೂ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ- ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಭಿಮಾನಿಗಳಿಗೆ ಹಾಗೂ ಬಂಧು ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್- ಇನ್ನೂ ಬಾಳಿ, ಬದುಕಿ ನಮ್ಮೆಲ್ಲರನ್ನೂ ತನ್ನ ನಟನೆಯ ಮೂಲಕ ರಂಜಿಸಬೇಕಿದ್ದ ಈ ಯುವ ನಾಯಕ ನಟನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲೆಂದು ​ಸಂತಾಪ ಸೂಚಿಸಿದ್ದಾರೆ.

ಪುನೀತ್ ರಾಜ್‌ಕುಮಾರ್ - ಚಿರಂಜೀವಿ ಸರ್ಜಾ ಇನ್ನಿಲ್ಲ ಎಂದು ತಿಳಿದು ಶಾಕ್ ಆಗಿದೆ ಎಂದಿದ್ದಾರೆ.

ದರ್ಶನ್ ತೂಗುದೀಪ್ - ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಮೇಘನಾ ಹಾಗು ಸರ್ಜಾ ಕುಟುಂಬದವರಿಗೆ ನೀಡಲಿ.

ಗಣೇಶ್ - ಚಿರು ಇನ್ನಿಲ್ಲ ಸುದ್ದಿ ಕೇಳಿ ಬೇಸರವಾಗಿದೆ. ನಿಜಕ್ಕೂ ಇದು ಹೃದಯ ಒಡೆದು ಹೋಗುವ ವಿಷಯ ಎಂದು ಟ್ವೀಟ್​ ಮಾಡಿ ಕಂಬನಿ ಮಿಡಿದಿದ್ದಾರೆ.

ಜಗ್ಗೇಶ್ - ಯಾವ ತಪ್ಪಿಗೆ ಈ ಶಿಕ್ಷೆ. ನಿನ್ನ ಆತ್ಮಕ್ಕೆ ಶಾಂತಿ ಕೋರಲು ಒಪ್ಪುತ್ತಿಲ್ಲಾ ನನ್ನ ಮನಸ್ಸು. ದೇವರೆ ಈ ಸಾವು ನ್ಯಾಯವೇ ಎಂದು ಕಂಬನಿ ಮಿಡಿದಿದ್ದಾರೆ.

ಸುಮಲತಾ ಅಂಬರೀಶ್​ - ಅತಿ ಚಿಕ್ಕ ವಯಸ್ಸಿನಲ್ಲೇ ನಮ್ಮನ್ನು ಅಗಲಿದ್ದು, ತುಂಬಾ ನೋವಿನ ಸಂಗತಿ. ನನ್ನ ಕುಟುಂಬಕ್ಕೂ ಅವರು ಅತೀ ಹತ್ತಿರದವರು. ಚಿರು ಅಗಲಿಕೆ ನನಗೆ , ಅಭಿಗೆ ಅಪಾರ ನೋವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ನೋವನ್ನು ಭರಿಸುವಶಕ್ತಿಯನ್ನು ಭಗವಂತ ನೀಡಲಿ.

English summary :Siddaramaiah B S Yeddyurappa Darshan Puneeth Rajkumar Condolences To Chiranjeevi Sarja

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...