Tue,May07,2024
ಕನ್ನಡ / English

ಜಮ್ಮು ಕಾಶ್ಮೀರದಲ್ಲಿ ಮೂರು ಎನ್​ಕೌಂಟರ್, 15 ದಿನಗಳಲ್ಲಿ ಉಗ್ರ ಸಂಘಟನೆಯ 8 ಟಾಪ್ ಕಮಾಂಡರ್ ಸೇರಿ 22 ಭಯೋತ್ಪಾದಕರ ಬಲಿ! | Janata news

10 Jun 2020
878

ಜಮ್ಮು ಕಾಶ್ಮೀರ : ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ, ಶೋಫಿಯಾನಾ ಭಾಗದಲ್ಲಿ ಇಂದು ಮುಂಜಾನೆ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​), ರಾಷ್ಟ್ರೀಯ ರೈಫಲ್ಸ್​ ಹಾಗೂ ವಿಶೇಷ ಕಾರ್ಯಾಚರಣೆ ತಂಡ ಶೋಫಿಯಾನಾ ಭಾಗದಲ್ಲಿ ಕಾರ್ಯಾಚರಣೆಗೆ ಇಳಿದಿತ್ತು.

ಸೋಪಿಯಾನ್ ಜಿಲ್ಲೆಯ ಸುಗೂ ಗ್ರಾಮದ ಮನೆಯೊಂದರಲ್ಲಿ ಉಗ್ರಗಾಮಿಗಳು ಅವಿತಿಟ್ಟುಕೊಂಡು ದಾಳಿಗೆ ಸಜ್ಜಾಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ, ಸಿಆರ್‍ಪಿಎಫ್ ಮತ್ತು ಪೊಲೀಸರು ನಿನ್ನೆ ರಾತ್ರಿಯಿಂದಲೇ ಆ ಪ್ರದೇಶವನ್ನು ಸುತ್ತುವರಿದು ಬೇಟೆ ಕಾರ್ಯಾಚರಣೆ ನಡೆಸುತ್ತಿದ್ದರು.

ಇದೇ ಸಂದರ್ಭದಲ್ಲಿ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದಾಗ ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದವು. ಆಗ ನಡೆದ ಸುದೀರ್ಘ ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರು ಹತರಾದರು.

ಕಳೆದ 15 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳ 8 ಮಂದಿ ಉನ್ನತ ಕಮಾಂಡರ್‌ಗಳು ಸೇರಿದಂತೆ 22 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮೇ.25 ರಂದು ನಡೆದ ಕಾರ್ಯಾಚರಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ ಕಮಾಂಡರ್ ಆದಿಲ್ ಅಹ್ಮದ್ ವಾನಿ ಹಾಗೂ ಎಲ್ ಇಟಿ ಮುಖ್ಯಸ್ಥ ಶಾಹೀನ್ ಅಹ್ಮದ್ ಥೊಕೆರ್ ಎಂಬುವವನ್ನು ಹತ್ಯೆ ಮಾಡಲಾಗಿತ್ತು.
ಇದಾಗ ಬಳಿಕ ಕುಲ್ಗಾಂನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ್ ಪರ್ವೈಜ್ ಅಹ್ಮದ್ ಪಂಡಿತ್ ಹಾಗೂ ಜೆಇಎ ಕಮಾಂಡರ್ ಶಾಕಿರ್ ಅಹ್ಮತ್ ಇಟೂನನ್ನು ಹತ್ಯೆ ಮಾಡಲಾಗಿತ್ತು.

ಜೂನ್. 2 ರಂದು ಅವಂತಿಪೊರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೆಇಎಂ ಸಂಘಟನೆಯ ಮತ್ತೊಬ್ಬ ಕಮಾಂಡರ್ ಆಖಿಬ್ ರಂಜಾನ್ ಹಾಗೂ ಮೊಹಮ್ಮದ್ ಮಖ್ಬೂಲ್ ಚೋಪಾನನ್ನು ಹತ್ಯೆ ಮಾಡಲಾಗಿತ್ತು.
ಜೂನ್. 2 ರಂದು ಮತ್ತೊಂದು ಕಾರ್ಯಾಚರಣೆಯಲ್ಲಿ ಜೆಇಎಂ ಟಾಪ್ ಕಮಾಂಡರ್ ಎಂದೇ ಹೇಳಲಾಗುತ್ತಿದ್ದ ಫೌಝಿ ಭಾಯ್, ಮಂಝೂರ್ ಅಹ್ಮದ್ ಕಾರ್, ಜವೈದ್ ಅಹ್ಮದ್ ಝರ್ಗಾ ನನ್ನು ಹತ್ಯೆ ಮಾಡಲಾಗಿತ್ತು.

ಜೂನ್ 7 ರಂದು ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಟಾಪ್ ಕಮಾಂಡರ್ ಇಶ್ಫಾಕ್ ಅಹ್ಮದ್ ಇತೂ, ಓವೈಸಿ ಅಹ್ಮದ್ ಮಲಿಕ್, ಆದಿಲ್ ಅಹ್ಮದ್ ಮಿರ್, ಬಿಲಾರ್ ಅಹ್ಮದ್ ಭಟ್, ಸಾಜದ್ ಅಹ್ಮದ್ ವಾಗಯ್ ನನ್ನು ಹತ್ಯೆ ಮಾಡಲಾಗಿತ್ತು.

ಇದೇ ಜೂನ್. 7 ರಂದು ನಡೆದ ಎರಡನೇ ಎನ್ ಕೌಂಟರ್ ನಲ್ಲಿ ಉಮರ್ ಮೊಹುಯುದ್ದೀನ್ ದೋಬಿ, ಎಲ್ಇಟಿ ಟಾಪ್ ಕಮಾಂಡರ್ ರಯೀಸ್ ಅಹ್ಮದ್ ಖಾನ್, ಹಿಜ್ಬುಲ್ ಮುಜಾಹಿದ್ದೀನ್ ಸಕ್ಲೈನ್ ಅಹ್ಮ್ ವಾಗಾಯ್, ವಕೀಲ್ ಅಹ್ಮದ್ ನಾಯ್ಕೂ ನನ್ನು ಹತ್ಯೆ ಮಾಡಲಾಗಿತ್ತು.

English summary :3 terrorists killed in encounter in Jammu and Kashmir s Shopian

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...