ಪೆಟ್ರೊಲ್ ಸುರಿದು ಅವಿವಾಹಿತ ಅಣ್ಣ- ತಂಗಿ ಆತ್ಮಹತ್ಯೆ | Janata news
ಮಂಗಳೂರು : ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿಗಳಾದ ನೀಲಯ್ಯ ಶೆಟ್ಟಿಗಾರ್(42) ಹಾಗೂ ಕೇಸರಿ(39) ಮೃತಪಟ್ಟವರಾಗಿದ್ದಾರೆ.
ಇಬ್ಬರೂ ಅನಾರೋಗ್ಯ ದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಕೃತ್ಯ ಗೈದಿದ್ದಾರೆ. ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಟದ ಶಬ್ದ ಕೇಳಿ ಬಂದಾಗ ಘಟನೆ ತಿಳಿದು ಬಂದಿತ್ತು.
ಬಳಿಕ ಸ್ಥಳೀಯರು ಸೇರಿ ಸುಟ್ಟ ಗಾಯಗಳೊಂದಿಗೆ ಗಂಭೀರ ಗಾಯಗೊಂಡಿದ್ದ ಇಬ್ಬರನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಇಬ್ಬರೂ ಕೊನೆಯುಸಿರೆಳೆದಿದ್ದರೆನ್ನಲಾಗಿದೆ.