Sun,May05,2024
ಕನ್ನಡ / English

ಅಂತರರಾಷ್ಟ್ರೀಯ ಯೋಗದಿನ: ಪ್ರಾಣಾಯಾಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ | Janata news

21 Jun 2020
843

ನವದೆಹಲಿ: : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆರನೇ ವಿಶ್ವ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೇಶಕ್ಕೆ ಶುಭಾಶಯ ತಿಳಿಸಿದರು.

ದೆಹಲಿಯ ಲೋಕ ಕಲ್ಯಾಣ ಮಾರ್ಗ್ ನಲ್ಲಿರುವ ಪ್ರಧಾನಿ ನಿವಾಸದಲ್ಲಿ ಅವರು 45 ನಿಮಿಷಗಳ ಕಾಲ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಅಕಾಡೆಮಿ ಜೊತೆಗೆ ಯೋಗ ಮಾಡುತ್ತಿದ್ದಾರೆ. ಯೋಗಕ್ಕೂ ಮುನ್ನ ಬೆಳಗ್ಗೆ 6:30ಕ್ಕೆ ರಾಷ್ಟ್ರೀಯ ಭಾಷಣ ಮಾಡಿದ್ದಾರೆ.

ಮನೆಯಲ್ಲಿಯೇ ಯೋಗ, ಕುಟುಂಬದೊಂದಿಗೆ ಯೋಗ ಎಂಬುದು ಈ ವರ್ಷದ ಅಂತರರಾಷ್ಟ್ರೀಯ ಯೋಗದಿನದ ಸಾರ. ಇಂದು ನಾವು ಗುಂಪುಗೂಡುವಿಕೆಯಿಂದ ದೂರ ಉಳಿದಿದ್ದೇವೆ. ಮನೆಯ ಸದಸ್ಯರು ಒಂದಾಗಿ ಯೋಗಾಭ್ಯಾಸ ಮಾಡುವುದರಿಂದ, ಸಂಪೂರ್ಣ ಮನೆಯಲ್ಲಿ ಶಕ್ತಿ ವೃದ್ಧಿಸುತ್ತದೆ ಎಂದರು.

ನಿಮ್ಮ ಮನೆ ಹಾಗೂ ಕುಟುಂಬದೊಂದಿಗೆ ಯೋಗ ಆಚರಿಸಿ. ಯೋಗದಿಂದ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿದ್ದರೆ ಕೊರೊನಾ ವಿರುದ್ಧ ಹೋರಾಟ ಮಾಡಬಹುದು. ಆದ್ದರಿಂದ ಆರೋಗ್ಯ ವೃದ್ಧಿಗೆ ಯೋಗ ಬಹು ಮುಖ್ಯ. ದೈಹಿಕ ಹಾಗೂ ಮಾನಸಿಕ ಸದೃಢತೆಯ ಸಮಾಜ ನಿರ್ಮಾಣಕ್ಕೆ ಯೋಗ ಅವಶ್ಯವಾಗಿದೆ. ಅಲ್ಲದೇ ಈ ಮಾರಕ ಕೊರೊನಾ ವೈರಸ್ ಹೋಗಲಾಡಿಸಲು ಯೋಗ ಖಂಡಿತವಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದರು.

ಕೋವಿಡ್ -19 ರ ಹಿನ್ನೆಲೆಯಲ್ಲಿ ಯೋಗವನ್ನು ಹೆಚ್ಚು ಗಂಭೀರವಾಗಿ ಅಭ್ಯಾಸ ಮಾಡುವ ಅಗತ್ಯವನ್ನು ಜಗತ್ತು ಕಂಡುಕೊಂಡಿದೆ. ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಅನೇಕ ಆಸನಗಳನ್ನು ಯೋಗವು ಹೊಂದಿದೆ. ಈ ಆಸನಗಳು ನಮ್ಮ ಸ್ನಾಯುಗಳು ಮತ್ತು ಚಯಾಪಚಯವನ್ನು ಬಲಪಡಿಸುತ್ತವೆ. ಕೋವಿಡ್ ವೈರಸ್ ನಮ್ಮ ಉಸಿರಾಟದ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಪ್ರಾಣಾಯಾಮ ಮಾಡುವುದು ಉತ್ತಮ ವ್ಯಾಯಾಮ ಎಂದು ಹೇಳಿದರು.

ನಿರಂತರ ಯೋಗಾಸನ ಮಾಡುವುದರಿಂದ ಸಂಕಷ್ಟವನ್ನು ಎದುರಿಸಿ ಗೆಲ್ಲುವ ಛಲ ಬರುತ್ತದೆ. ಯೋಗ ಕೇವಲ ದೈಹಿಕ ಶಕ್ತಿಗಾಗಿ ಮಾತ್ರವಲ್ಲದೇ ಮಾನಸಿಕ ಆರೋಗ್ಯದ ಬೆಳವಣಿಗೆಗೂ ಸಹಾಯಕಾರಿ. ಹೀಗಾಗಿ ಯೋಗದ ಮಹತ್ವವನ್ನು ಇಡೀ ವಿಶ್ವ ಅರಿತಿರುವುದು ನನಗೆ ತುಂಬ ಸಂತಸದ ವಿಷಯವಾಗಿದೆ ಎಂದರು.

ಯೋಗವು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಲಿದೆ. ಇದು ಏಕತೆಯ ಶಕ್ತಿಯಾಗಿ ಹೊರಹೊಮ್ಮಿದೆ ಮತ್ತು ಮಾನವೀಯ ಬಂಧಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ. ಜನಾಂಗ, ಬಣ್ಣ, ಲಿಂಗ, ನಂಬಿಕ ಮತ್ತು ದೇಶಗಳನ್ನು ಮೀರಿರುವ ಯೋಗ ಯಾವುದೇ ತಾರತಮ್ಯ ಮಾಡುವುದಿಲ್ಲ. ಯಾರು ಬೇಕಾದರೂ ಯೋಗಾಭ್ಯಾಸ ಮಾಡಬಹುದು ಎಂದು ಹೇಳಿದರು.

English summary :#PMModi #Internationalyogaday2020: World is realising the need of Yoga, even more, today due to the #CoronavirusPandemic. If our immunity is strong then it helps in fighting against the disease. There are Yoga practices that boost our immunity&improve metabolism: Prime Minister Narendra Modi #InternationalYogaDay

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...