Thu,May02,2024
ಕನ್ನಡ / English

ಡ್ರಗ್ಸ್ ಕೊಟ್ಟು ಮಲತಂದೆಯಿಂದ ಮಗಳ ಮೇಲೆ ನಿರಂತರ ಅತ್ಯಾಚಾರ! | Janata news

12 Jul 2020
881

ಬೆಂಗಳೂರು : ತಂದೆಯೊಬ್ಬ ಪುತ್ರಿಗೆ ಡ್ರಗ್ಸ್ ಹಾಗೂ ಮದ್ಯ ಕೊಟ್ಟು ಪ್ರಜ್ಞೆ ತಪ್ಪಿದ ಬಳಿಕ ನಿರಂತರವಾಗಿ ಅತ್ಯಾಚಾರ ಎಸಗಿರುವ ವಿಕೃತ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ಕೃತ್ಯಕ್ಕೆ ತಾಯಿ ಕೂಡ ಸಹಕರಿಸಿದ್ದಾಳೆ ಎಂದು ಆರೋಪಿಸಿ 20 ವರ್ಷದ ಸಂತ್ರಸ್ತೆಯೂ ಆದ ಕಾಲೇಜು ವಿದ್ಯಾರ್ಥಿನಿ ಠಾಣೆಗೆ ದೂರು ನೀಡಿದ್ದು, ಪೊಲೀಸರನ್ನೇ ಆತಂಕಗೊಳ್ಳುವಂತೆ ಮಾಡಿದೆ.

ಆರೋಪಿಯನ್ನು ಅರಕೆರೆಯ ಸಾಮ್ರಾಟ್ ಲೇಔಟ್ ನಿವಾಸಿ ಅಲೆಗ್ಸಾಂಡರ್ ದಾಸ್ ಎಂದು ಗುರುತಿಸಲಾಗಿದೆ. ಆರೋಪಿ ತಂದೆ 20 ವರ್ಷದ ಮಗಳಿಗೆ ಡ್ರಗ್ಸ್ ಮತ್ತು ಮದ್ಯವನ್ನು ಕೊಟ್ಟು ಪ್ರಜ್ಞೆ ತಪ್ಪಿಸಿ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದನು. ಅಲ್ಲದೇ ಈ ಹೇಯ ಕೃತ್ಯಕ್ಕೆ ತಾಯಿ ಕೂಡ ಸಹಕರಿಸಿದ್ದಾಳೆ ಎಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಅತ್ಯಾಚಾರ, ಬೆದರಿಕೆ ಪ್ರಕರಣದಡಿ ಎಫ್‌ಐಆರ್ ದಾಖಲಿಸಿಕೊಂಡಿರುವ ಹುಳಿಮಾವು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಘಟನೆ -
20 ವರ್ಷ ಸಂತ್ರಸ್ಥೆಯ ತಾಯಿ ಹಲವು ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದು, ಅಲೆಗ್ಸಾಂಡರ್ ದಾಸ್ಎಂಬುವವನನ್ನು ವಿವಾಹವಾಗಿದ್ದರು. ಆರೋಪಿ ಗುತ್ತಿಗೆದಾರನಾಗಿದ್ದು, ತಾಯಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಮಗಳು ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ತಾಯಿ ಹಾಗೂ ಮಲತಂದೆ ಜತೆ ಅರಕೆರೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಮಲತಂದೆ ಮತ್ತು ತಾಯಿಯೊಂದಿಗೆ ವಾಸವಾಗಿರುವ ಮಗಳಿಗೆ ತಾಯಿಯೇ ಆಹಾರದಲ್ಲಿ ನಿದ್ದೆ ಮಾತ್ರೆ ಬೆರೆಸಿ ಕೊಡುತ್ತಿದ್ದಳು. ಆಕೆ ಅರೆಪ್ರಜ್ಞಾವಸ್ಥೆಯಲ್ಲಿ ಇದ್ದ ಸಂದರ್ಭದಲ್ಲಿ ಮಲತಂದೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ.

ಕೆಲಸದ ನಿಮಿತ್ತ ಹೈದರಾಬಾದ್ ಗೆ ಕರೆದುಕೊಂಡು ಹೋಗಿದ್ದ ವೇಳೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರವೆಸಗಿದ್ದು, ಬೆಳಿಗ್ಗೆ ಆಕೆಗೆ ಎಚ್ಚರವಾದಾಗ ಮೈಮೇಲೆ ಬಟ್ಟೆ ಇರಲಿಲ್ಲ. ಹೀಗೆ ನಿರಂತರವಾಗಿ ಮಲತಂದೆಯಿಂದ ಅತ್ಯಾಚಾರ ಎಸಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಸಿದುಕೊಂಡು ಕಾಲೇಜಿಗೆ ಹೋಗದಂತೆ ತಾಕೀತು ಮಾಡಿ ಬೆದರಿಕೆ ಹಾಕಲಾಗಿದೆ.

ಅಲ್ಲದೆ ಕಾಲೇಜಿಗೆ ಹೋಗದೆ ಮಾಡಲಿಂಗ್ ನಲ್ಲಿ ತೊಡಗಿಸಿಕೊಳ್ಳಬೇಕು. ಬೆತ್ತಲೆ ಚಿತ್ರಗಳನ್ನು ತೆಗೆಸಿಕೊಂಡು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಮದ್ಯ, ಮಾದಕ ವಸ್ತು ಸೇವಿಸಬೇಕೆಂದು ಮಲತಂದೆ ಒತ್ತಾಯ ಮಾಡುತ್ತಿದ್ದ. ಬಲವಂತವಾಗಿ ಮಾದಕ ದ್ರವ್ಯ ಕೊಟ್ಟು ತಾಯಿಯ ಸಹಕಾರದೊಂದಿಗೆ ಅತ್ಯಾಚಾರ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಹೇಳಲಾಗಿದೆ.

English summary :Bangalore

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...